
ಲೀಡ್ಸ್(ಜೂ.20) ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯ ಆರಂಭಗೊಂಡಿದೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇಲ್ಲದ ಭಾರತ ತಂಡವನ್ನು ಶುಭಮನ್ ಗಿಲ್ ಮುನ್ನಡೆಸುತ್ತಿದ್ದಾರೆ. ಈ ಬಾರಿ ಮೂವರು ಕನ್ನಡಿಗರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತ ಕನ್ನಡಿದ ಕರಣ್ ನಾಯರ್ ಸುದೀರ್ಘ ದಿನಗಳ ಬಳಿಕ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಇತ್ತ ದೇಸಿ ಟೂರ್ನಿ ಹಾಗೂ ಐಪಿಎಲ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಸಾಯಿ ಸುದರ್ಶನ್ ತಂಡ ಸೇರಿಕೊಂಡಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಭಾರತ ತಂಡದಲ್ಲಿ ಮೂವರು ಕನ್ನಡಿಗರಿಗೆ ಸ್ಥಾನ
ಇಂಗ್ಲೆಂಡ್ ವಿರುದ್ದಧ ಮೊದಲ ಟೆಸ್ಟ್ ಪಂದ್ಯದಲ್ಲಿ ಮೂವರು ಕನ್ನಡಿಗರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಕರುಣ್ ನಾಯರ್ ಕಮ್‌ಬ್ಯಾಕ್ ಮಾಡಿದ್ದರೆ, ವೇಗಿ ಪ್ರಸಿದ್ಧ ಕೃಷ್ಣ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರೆ. ಇನ್ನು ತಂಡದ ಪ್ರಮುಖ ಆಟಗಾರ ಕೆಎಲ್ ರಾಹುಲ್ ತಂಡದಲ್ಲಿದ್ದಾರ. ಈ ಮೂಲಕ ಮೂವರು ಕನ್ನಡಿಗರು ಸ್ಥಾನ ಪಡೆದಿದ್ದಾರೆ.
ಭಾರತ ಪ್ಲೇಯಿಂಗ್ 11
ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಬಮನ್ ಗಿಲ್ (ನಾಯಕ), ರಿಷಬ್ ಪಂತ್, ಕರುಣ್ ನಾಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್,ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ
ಇಂಗ್ಲೆಂಡ್ ಪ್ಲೇಯಿಂಗ್ 11
ಜ್ಯಾಕ್ ಕ್ರಾವ್ಲೆ, ಬೆನ್ ಡಕೆಟ್, ಒಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್, ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸ್, ಜೋಶ್ ಟಾಂಗ್, ಶೋಯಿಬ್ ಬಶೀರ್,
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.