ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಬ್ಯಾಟರ್‌ಗಳಾದ ಟ್ರ್ಯಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಜೋಡಿ ವಿಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಇನ್ನೂ 62 ಎಸೆತ ಬಾಕಿ ಇರುವಂತೆಯೇ ಆರೆಂಜ್ ಆರ್ಮಿಯನ್ನು ಗೆಲುವಿನ ದಡ ಸೇರಿಸಿತು.
ಹೈದರಾಬಾದ್(ಮೇ.09): ಕೆ ಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು, ಸನ್‌ರೈಸರ್ಸ್ ಹೈದರಾಬಾದ್ ಎದುರು 10 ವಿಕೆಟ್ ಅಂತರದ ಹೀನಾಯ ಸೋಲು ಅನುಭವಿಸಿದೆ. ಲಖನೌ ನೀಡಿದ್ದ 166 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಕೇವಲ 9.4 ಓವರ್‌ಗಳಲ್ಲಿ ಗುರಿ ತಲುಪಿತು. ಈ ಮೂಲಕ 150+ ರನ್‌ಗಳ ಗುರಿಯನ್ನು ಅತಿ ಕಡಿಮೆ ಎಸೆತಗಳನ್ನು ಎದುರಿಸಿ ಯಶಸ್ವಿಯಾಗಿ ಗುರಿ ತಲುಪಿದ ತಂಡ ಎನ್ನುವ ಹಿರಿಮೆಗೆ ಆರೆಂಜ್ ಆರ್ಮಿ ಪಾತ್ರವಾಯಿತು.
ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಬ್ಯಾಟರ್‌ಗಳಾದ ಟ್ರ್ಯಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಜೋಡಿ ವಿಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಇನ್ನೂ 62 ಎಸೆತ ಬಾಕಿ ಇರುವಂತೆಯೇ ಆರೆಂಜ್ ಆರ್ಮಿಯನ್ನು ಗೆಲುವಿನ ದಡ ಸೇರಿಸಿತು. ಈ ಆಘಾತಕಾರಿ ಸೋಲು ಲಖನೌ ಸೂಪರ್ ಜೈಂಟ್ಸ್ ತಂಡದ ನಾಯಕ ಕೆ ಎಲ್ ರಾಹುಲ್ ಅವರನ್ನು ಕಂಗೆಡಿಸುವಂತೆ ಮಾಡಿದೆ. ಈ ಸೋಲಿನ ಬಗ್ಗೆ ಪ್ರತಿಕ್ರಿಯಿಸಿದ ನಾಯಕ ರಾಹುಲ್ " ಏನು ಹೇಳಲು ಮಾತೇ ಬರುತ್ತಿಲ್ಲ" ಎಂದರು.
IPL 2024: 'ರನ್‌ರೈಸರ್ಸ್' ಆರ್ಭಟಕ್ಕೆ ಲಖನೌ ಸೂಪರ್ ಜೈಂಟ್ಸ್ ತತ್ತರ!
ಇನ್ನು ಸನ್‌ರೈಸರ್ಸ್ ಹೈದರಾಬಾದ್ ಎದುರು ಹೀನಾಯ ಸೋಲು ಕಾಣುತ್ತಿದ್ದಂತೆಯೇ ತಂಡದ ಮಾಲೀಕ ಸಂಜೀವ್ ಗೋಯೆಂಕಾ, ಮೈದಾನದಲ್ಲೇ ನಾಯಕ ಕೆ ಎಲ್ ಅವರನ್ನು ತರಾಟೆಗೆ ತೆಗೆದುಕೊಂಡಂತ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿವೆ.
ಹೀಗಿತ್ತು ನೋಡಿ ಆ ಕ್ಷಣ:
Post match meet b/w Sanjiv Goenka & KL Rahul. | pic.twitter.com/hGXmrVsCQV
— SuperGiantsArmy™ — LSG FC (@LucknowIPLCover)ಇನ್ನು ಸಂಜೀವ್ ಗೋಯೆಂಕಾ ಅವರ ಈ ವರ್ತನೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿವೆ
LSG owner Sanjiv Goenka doesn't look happy. pic.twitter.com/xpSr21ElXT
— Prasenjiit Dey (@CricPrasen)ಇನ್ನು ಲಖನೌ ಸೂಪರ್ ಜೈಂಟ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ಬಗ್ಗೆ ಹೇಳುವುದಾದರೇ, ಮೊದಲು ಬ್ಯಾಟ್ ಮಾಡಿದ ಲಖನೌ ಆರಂಭಿಕ ಆಘಾತದ ಹೊರತಾಗಿಯೂ ಆಯುಷ್ ಬದೋನಿ(55*) ಹಾಗೂ ನಿಕೋಲಸ್ ಪೂರನ್(48) ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 165 ರನ್ ಕಲೆಹಾಕಿತ್ತು.
ಆರ್‌ಸಿಬಿ vs ಪಂಜಾಬ್ ಕಿಂಗ್ಸ್: ಪ್ಲೇ ಆಫ್ ರೇಸ್ ಗೆಲ್ಲೋರು ಯಾರು?
ಇನ್ನು ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ ತಂಡದ ಆರಂಭಿಕ ಬ್ಯಾಟರ್‌ಗಳಾದ ಟ್ರ್ಯಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ, ಲಖನೌ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಟ್ರ್ಯಾವಿಸ್ ಹೆಡ್ 30 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ ಸಿಕ್ಸರ್‌ಗಳ ನೆರವಿನಿಂದ ಅಜೇಯ 89 ರನ್ ಸಿಡಿಸಿದರೆ, ಮತ್ತೊಂದು ತುದಿಯಲ್ಲಿ ಅಭಿಷೇಕ್ ಶರ್ಮಾ ಕೇವಲ 28 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 6 ಸಿಕ್ಸರ್‌ಗಳ ನೆರವಿನಿಂದ ಅಜೇಯ 75 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.