ಕೆ ಎಲ್ ರಾಹುಲ್‌ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಹತ್ವದ ಅಪ್‌ಡೇಟ್ ಕೊಟ್ಟ ಲಖನೌ ಮಾಲೀಕ ಗೋಯೆಂಕಾ..!

By Naveen Kodase  |  First Published Aug 28, 2024, 6:30 PM IST

ಕೆ.ಎಲ್ ರಾಹುಲ್ ಲಖನೌ ಸೂಪರ್ ಜೈಂಟ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ವದಂತಿಗಳ ನಡುವೆ, ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ ಅವರು ಸುದ್ದಿಗೋಷ್ಠಿ ನಡೆಸಿ ರಾಹುಲ್ ತಮ್ಮ ತಂಡದ ಅವಿಭಾಜ್ಯ ಅಂಗ ಎಂದು ಸ್ಪಷ್ಟಪಡಿಸಿದ್ದಾರೆ. ಇದರೊಂದಿಗೆ ಮುಂದಿನ ಆವೃತ್ತಿಯ ಐಪಿಎಲ್‌ನಲ್ಲಿ ಜಹೀರ್ ಖಾನ್ ಲಖನೌ ತಂಡದ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಘೋಷಿಸಿದ್ದಾರೆ.


ಲಖನೌ: 2025ರ ಐಪಿಎಲ್ ಟೂರ್ನಿಗೂ ಮುನ್ನ ಕನ್ನಡಿಗ ಕೆ ಎಲ್ ರಾಹುಲ್ ಲಖನೌ ಸೂಪರ್ ಜೈಂಟ್ಸ್‌ ತಂಡವನ್ನು ತೊರೆಯಲಿದ್ದಾರೆ ಎನ್ನುವ ವಿಚಾರ ಸದ್ಯ ಟಾಕ್ ಆಫ್‌ ದಿ ಟೌನ್ ಎನಿಸಿಕೊಂಡಿದೆ. ಇದೆಲ್ಲದರ ನಡುವೆ ಮಂಗಳವಾರ ಕೆ ಎಲ್ ರಾಹುಲ್, ಲಖನೌ ಸೂಪರ್ ಜೈಂಟ್ಸ್‌ ಫ್ರಾಂಚೈಸಿ ಮಾಲೀಕರಾದ ಡಾ. ಸಂಜೀವ್ ಗೋಯೆಂಕಾ ಅವರನ್ನು ಭೇಟಿ ಮಾಡಿದ್ದರು. ಇದೀಗ ಇದೆಲ್ಲದರ ನಡುವೆ ಇಂದು ಸಂಜೀವ್ ಗೋಯೆಂಕಾ, ಸುದ್ದಿಗೋಷ್ಠಿ ನಡೆಸಿ ಮಹತ್ವದ ಅಪ್‌ಡೇಟ್ ನೀಡಿದ್ದಾರೆ.

ಹೌದು, ಈ ಮೊದಲು 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕೆ ಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೈಂಟ್ಸ್ ತಂಡವು, ಲೀಗ್ ಹಂತದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎದುರು ಹೀನಾಯ ಸೋಲು ಕಂಡಿತ್ತು. ಇದರ ಬೆನ್ನಲ್ಲೇ ಪಂದ್ಯ ಮುಗಿಯುತ್ತಿದ್ದಂತೆಯೇ ಮೈದಾನದಲ್ಲಿಯೇ ತಂಡದ ಮಾಲೀಕರಾದ ಸಂಜೀವ್ ಗೋಯೆಂಕಾ, ನಾಯಕ ಕೆ ಎಲ್ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದು ಕ್ರಿಕೆಟ್ ವಲಯದಲ್ಲಿ ಸಂಚಲನವನ್ನೇ ಹುಟ್ಟುಹಾಕಿತ್ತು. ಇದಷ್ಟೇ ಅಲ್ಲದೇ ಸಂಜೀವ್ ಗೋಯೆಂಕಾ ಅವರ ನಡೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು. ಇನ್ನು ಇದರ ಬೆನ್ನಲ್ಲೇ ಕೆ ಎಲ್ ರಾಹುಲ್ 2025ರ ಐಪಿಎಲ್ ಟೂರ್ನಿಯಲ್ಲಿ ಲಖನೌ ತಂಡವನ್ನು ತೊರೆಯಲಿದ್ದಾರೆ ಎನ್ನುವಂತಹ ಮಾತುಗಳು ಕೇಳಿ ಬಂದಿದ್ದವು. ಇದರಿಂದ ಎಚ್ಚೆತ್ತುಕೊಂಡ ಗೋಯೆಂಕಾ ಕೆಲ ದಿನಗಳಲ್ಲೇ ಕೆ ಎಲ್ ರಾಹುಲ್ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಡಿನ್ನರ್ ಮಾಡುವ ಮೂಲಕ ಈ ವಿವಾದಕ್ಕೆ ತೇಪೆ ಹಚ್ಚುವ ಕೆಲಸವನ್ನು ಮಾಡಿದ್ದರು.

Latest Videos

undefined

ಮೆಗಾ ಹರಾಜಿಗೂ ಮುನ್ನ ಆರ್‌ಸಿಬಿ ಲೆಕ್ಕಾಚಾರ ಉಲ್ಟಾ-ಪಲ್ಟಾ..! ಬೆಂಗಳೂರು ಫ್ಯಾನ್ಸ್‌ಗೆ ಶಾಕ್..?

ಸಂಜೀವ್ ಗೋಯೆಂಕಾ ಅವರ ಈ ಎಲ್ಲಾ ಪ್ರಯತ್ನದ ಹೊರತಾಗಿಯೂ ಕೆ ಎಲ್ ರಾಹುಲ್, ಲಖನೌ ತಂಡದಿಂದ ಈಗಾಗಲೇ ಒಂದು ಕಾಲು ಹೊರಗಿಟ್ಟಿದ್ದಾರೆ ಎನ್ನುವುದು ಹಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇನ್ನು ದೈನಿಕ್ ಜಾಗರಣ್ ಒಂದು ಹೆಜ್ಜೆ ಮುಂದೆ ಹೋಗಿ, ಕೆ ಎಲ್ ರಾಹುಲ್ ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ಕಣಕ್ಕಿಳಿಯಲು ಆಸಕ್ತರಾಗಿದ್ದಾರೆ ಎಂದು ವರದಿಯಾಗಿತ್ತು.

ಇನ್ನು ಈ ಎಲ್ಲಾ ಬೆಳವಣಿಗೆಗಳ ನಡುವೆ ಇಂದು ಸಂಜೀವ್ ಗೋಯೆಂಕಾ ಮಹತ್ವದ ಸುದ್ದಿಗೋಷ್ಠಿ ನಡೆಸಿ ಹಲವು ಗಾಳಿಸುದ್ದಿಗಳಿಗೆ ತೆರೆ ಎಳೆದಿದ್ದಾರೆ. ಇದಷ್ಟೇ ಅಲ್ಲದೇ ಮಹತ್ವದ ಘೋಷಣೆಯನ್ನೂ ಮಾಡಿದ್ದಾರೆ. "ನಾನು ಗಾಳಿಸುದ್ದಿಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ. ಆದರೆ ಒಂದು ಮಾತನ್ನು ಹೇಳಲು ಬಯಸುತ್ತೇನೆ. ಅವರು ನಮ್ಮ ತಂಡದ ಅವಿಭಾಜ್ಯ ಅಂಗವಾಗಿದ್ದು, ಅವರು ನಮ್ಮ ಕುಟುಂಬದವರಿದ್ದಂತೆ" ಎಂದು ಚುಟುಕಾಗಿ ಉತ್ತರಿಸಿದ್ದಾರೆ

ಚೆನ್ನೈನ ಕಾಲೇಜಿನಲ್ಲಿ ಬುಮ್ರಾಗೆ ಸಿಕ್ತು ಭರ್ಜರಿ ವೆಲ್‌ಕಮ್: ಭಾರತೀಯ ಸೂಪರ್ ಸ್ಟಾರ್‌ಗಳ ಸಾಲಿಗೆ ಯಾರ್ಕರ್ ಸ್ಪೆಷಲಿಸ್ಟ್ ಲಗ್ಗೆ

ಇನ್ನು ಇದೇ ವೇಳೆ ಲಖನೌ ಸೂಪರ್ ಜೈಂಟ್ಸ್‌ ತಂಡದ ಮಾಲೀಕರಾದ ಸಂಜೀವ್ ಗೋಯೆಂಕಾ, ಮುಂದಿನ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಜಹೀರ್ ಖಾನ್, ತಮ್ಮ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಈ ಮೊದಲು ಗೌತಮ್ ಗಂಭೀರ್, ಲಖನೌ ತಂಡದ ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು. ಗಂಭೀರ್ ಮಾರ್ಗದರ್ಶನದಲ್ಲಿ ಲಖನೌ ತಂಡವು ಸತತ ಎರಡು ಬಾರಿ ಪ್ಲೇ ಆಫ್ ಪ್ರವೇಶಿಸಿತ್ತು. ಇನ್ನು ಕಳೆದ ಆವೃತ್ತಿಯಲ್ಲಿ ಗಂಭೀರ್, ಲಖನೌ ತೊರೆದು ಕೆಕೆಆರ್ ತಂಡದ ಮೆಂಟರ್ ಆಗಿದ್ದರು.

click me!