ಈ ಇಬ್ಬರಿಂದ ಟೀಂ ಇಂಡಿಯಾ ಈ ಬಾರಿ ಟಿ20 ವಿಶ್ವಕಪ್ ಗೆಲ್ಲಬಹುದೆಂದ ಜಯವರ್ಧನೆ

By Naveen Kodase  |  First Published Sep 17, 2022, 3:09 PM IST

* ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಕ್ಷಣಗಣನೆ
* ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ ಟೂರ್ನಿ
* ಟೀಂ ಇಂಡಿಯಾ, ಈ ಬಾರಿ ವಿಶ್ವಕಪ್ ಗೆಲ್ಲುವ ಫೇವರೇಟ್‌ ತಂಡವೆಂದ ಜಯವರ್ಧನೆ


ಕೊಲಂಬೊ(ಸೆ.17): ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಅಕ್ಟೋಬರ್ 16ರಿಂದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿದ್ದು, ಕೆಲವೊಂದು ಕಾರಣಗಳಿಂದ ಟೀಂ ಇಂಡಿಯಾ, ಮುಂಬರುವ ಟಿ20 ವಿಶ್ವಕಪ್ ಟೂರ್ನಿ ಗೆಲ್ಲಬಹುದಾಗಿದೆ ಎಂದು ಮಹೆಲಾ ಜಯವರ್ಧನೆ ಅಭಿಪ್ರಾಯಪಟ್ಟಿದ್ದಾರೆ.

ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಈಗಾಗಲೇ ಭಾರತ ಕ್ರಿಕೆಟ್‌ ತಂಡ ಪ್ರಕಟವಾಗಿದ್ದು, ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ತಂಡ ಕೂಡಿಕೊಂಡಿದ್ದಾರೆ. ಜಸ್ಪ್ರೀತ್ ಬುಮ್ರಾ, ಟಿ20 ವಿಶ್ವಕಪ್ ಟೂರ್ನಿಗೆ ಭಾರತ ಕ್ರಿಕೆಟ್ ಕೂಡಿಕೊಂಡಿದ್ದು, ಒಳ್ಳೆಯ ಪರಿಣಾಮ ಬೀರಲಿದೆ ಎಂದು ಜಯವರ್ಧನೆ ಅಭಿಪ್ರಾಯಪಟ್ಟಿದ್ದಾರೆ.

Tap to resize

Latest Videos

undefined

ಸಹಜವಾಗಿಯೇ, ಏಷ್ಯಾಕಪ್ ಟೂರ್ನಿಯಲ್ಲಿ ಜಸ್ಪ್ರೀತ್ ಬುಮ್ರಾ ಇಲ್ಲದೇ ಹೋಗಿದ್ದು, ಟೀಂ ಇಂಡಿಯಾ ಸೋಲಿಗೆ ಕಾರಣಗಳಲ್ಲೊಂದು. ಅವರು ಹೊಸ ಚೆಂಡಿನಲ್ಲಿ ದಾಳಿ ನಡೆಸುವಾಗ ಹಾಗೂ ಡೆತ್ ಓವರ್‌ನಲ್ಲಿ ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಬಲ್ಲವರಾಗಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯ ವೇಳೆಗೆ ಬುಮ್ರಾ ತಂಡಕ್ಕೆ ಒಳ್ಳೆಯ ಸಂಯೋಜನೆ ಆಗಬಲ್ಲವರಾಗಿದ್ದಾರೆ ಎಂದು ಜಯವರ್ಧನೆ ಹೇಳಿದ್ದಾರೆ.

ಇನ್ನು ಇತ್ತೀಚೆಗಷ್ಟೇ ಮುಕ್ತಾಯವಾದ ಏಷ್ಯಾಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ತೋರುವ ಮೂಲಕ ಫಾರ್ಮ್‌ಗೆ ಮರಳಿದ್ದ ವಿರಾಟ್ ಕೊಹ್ಲಿ ಪ್ರದರ್ಶನದ ಬಗ್ಗೆಯೂ 45 ವರ್ಷದ ಲಂಕಾ ಮಾಜಿ ನಾಯಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿರಾಟ್ ಕೊಹ್ಲಿ 1020 ದಿನಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕ ಬಾರಿಸಲು ಯಶಸ್ವಿಯಾಗಿರಲಿಲ್ಲ. ಆದರೆ ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಭಾರತ ಪಾಲಿನ ಕೊನೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ಆಫ್ಘಾನಿಸ್ತಾನ ಎದುರು ಅಜೇಯ 122 ರನ್ ಬಾರಿಸುವ ಮೂಲಕ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನದ 71ನೇ ಶತಕ ಸಿಡಿಸಿ ಸಂಭ್ರಮಿಸಿದ್ದರು. ಇದು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಬಾರಿಸಿದ ಮೊದಲ ಅಂತಾರಾಷ್ಟ್ರೀಯ ಶತಕ ಎನಿಸಿಕೊಂಡಿತು. ಅಂತಿಮವಾಗಿ ವಿರಾಟ್ ಕೊಹ್ಲಿ ಕೇವಲ 5 ಇನಿಂಗ್ಸ್‌ಗಳಲ್ಲಿ 147.59 ರ ಸ್ಟ್ರೈಕ್‌ರೇಟ್‌ನಲ್ಲಿ 276 ರನ್ ಬಾರಿಸುವ ಮೂಲಕ ಟೂರ್ನಿಯಲ್ಲಿ ಎರಡನೇ ಗರಿಷ್ಠ ರನ್ ಸ್ಕೋರರ್ ಆಗಿ ಹೊರಹೊಮ್ಮಿದ್ದರು.

ICC T20 World Cup ಚುಟುಕು ವಿಶ್ವಕಪ್ ಟೂರ್ನಿಗೆ ಶ್ರೀಲಂಕಾ ಕ್ರಿಕೆಟ್ ತಂಡ ಪ್ರಕಟ

ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ವಿರಾಟ್ ಕೊಹ್ಲಿ, ದೊಡ್ಡ ಮೊತ್ತ ಕಲೆಹಾಕುವ ಮೂಲಕ ಆತ್ಮವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದ್ದಾರೆ.  ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿರುವುದು ಟೀಂ ಇಂಡಿಯಾ ಪಾಲಿಗೆ ಒಳ್ಳೆಯ ಬೆಳವಣಿಗೆ ಎಂದು ಜಯವರ್ಧನೆ ಅಭಿಪ್ರಾಯಪಟ್ಟಿದ್ದಾರೆ. ಏಷ್ಯಾಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ಅದ್ಭುತವಾಗಿ ಬ್ಯಾಟ್ ಬೀಸಿದ್ದಾರೆ. ಈ ಮೂಲಕ ತಾವೇನು ಮಾಡಬಲ್ಲೆನು ಎನ್ನುವುದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಅದರಲ್ಲೂ ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ಉತ್ತಮವಾಗಿ ಸಾಧಿಸಿ ತೋರಿಸಿದ್ದಾರೆ. ವಿರಾಟ್ ಕೊಹ್ಲಿ ಫಾರ್ಮ್‌ಗೆ ಮರಳಿರುವುದು ತಂಡದ ಆತ್ಮವಿಶ್ವಾಸ ಕೂಡಾ ಹೆಚ್ಚುವಂತೆ ಮಾಡಿದೆ ಎಂದು ಜಯವರ್ಧನೆ ಹೇಳಿದ್ದಾರೆ.

click me!