ಟೀಂ ಇಂಡಿಯಾ ಟಿ20 ತಂಡದಲ್ಲಿ ಮಹತ್ವದ ಬದಲಾವಣೆ, ಆರ್‌ಸಿಬಿ ಸ್ಟಾರ್ ಆಲ್‌ರೌಂಡರ್‌ಗೆ ಬುಲಾವ್ ಸಾಧ್ಯತೆ

Published : Aug 31, 2026, 01:44 PM IST
Krunal Pandya

ಸಾರಾಂಶ

ಟೀಂ ಇಂಡಿಯಾ ಟಿ20 ತಂಡದಲ್ಲಿ ಕೆಲ ಬದಲಾವಣೆ ಮಾಡಲು ಬಿಸಿಸಿಐ ಮುಂದಾಗಿದೆ. ವಿಶೇಷ ಅಂದರೆ ಆಲ್‌ರೌಂಡರ್ ಕೋಟಾದಲ್ಲಿ ಆರ್‌ಸಿಬಿ ಸ್ಟಾರ್ ಕ್ರಿಕೆಟಿಗನಿಗೆ ಬುಲಾವ್ ನೀಡುವ ಸಾಧ್ಯತೆ ಇದೆ. ಆಯ್ಕೆ ಪ್ರಕ್ರಿಯೆ ಲಿಸ್ಟ್‌ನಲ್ಲಿ ಆರ್‌ಸಿಬಿ ಕ್ರಿಕೆಟಿಗ ಕಾಣಿಸಿಕೊಂಡಿದ್ದಾರೆ.

ಬೆಂಗಳೂರು (ಆ.31) ಶ್ರೇಯಸ್ ಅಯ್ಯರ್ ನಾಯಕತ್ವದ ಟಿ20 ತಂಡ ಇತ್ತೀಚೆಗೆ ತೀವ್ರ ಟೀಕೆಗೆ ಗುರಿಯಾಗಿತ್ತು. ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ದದ ಸರಣಿ ಸೋಲಿನಿಂದ ಮುಖಭಂಗ ಅನುಭವಿಸಿತ್ತು. ಇದೀಗ ಮುಂಬರುವ ಟಿ20 ಸರಣಿಗೆ ತಂಡದಲ್ಲಿ ಕೆಲ ಬದಲಾವಣೆ ಮಾಡಲು ಬಿಸಿಸಿಐ ಮುಂದಾಗಿದೆ. ಕೆಲವರಿಗೆ ಕೊಕ್ ನೀಡಿ ಫಾರ್ಮ್‌ನಲ್ಲಿರುವ ಕ್ರಿಕೆಟಿಗರ ಸೇರಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಬೆನ್ನಲ್ಲೇ ರೆಡಿ ಮಾಡಿರುವ ಆಯ್ಕೆ ಪ್ರಕ್ರಿಯೆ ಲಿಸ್ಟ್‌ನಲ್ಲಿ ಆರ್‌ಸಿಬಿ ಸ್ಟಾರ್ ಆಲ್‌ರೌಂಡರ್ ಕ್ರುನಾಲ್ ಪಾಂಡ್ಯ ಕಾಣಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಕ್ರುನಾಲ್ ಪಾಂಡ್ಯಗೆ ಬುಲಾವ್ ನೀಡುವ ಸಾಧ್ಯತೆ ಇದೆ.

ಅಕ್ಸರ್ ಪಟೇಲ್ ಬದಲು ಕ್ರುನಾಲ್ ಪಾಂಡ್ಯ

ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಕ್ಸರ್ ಪಟೇಲ್ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಅಕ್ಸರ್ ಪಟೇಲ್ ಬದಲು ಲೆಫ್ಟ್ ಆರ್ಮ್ ಸ್ಪಿನ್ನರ್‌ನ್ನೇ ಕಣಕ್ಕಿಳಿಸಲು ಬಿಸಿಸಿಐ ಮುಂದಾಗಿದೆ. ಹೀಗಾಗಿ ಆರ್‌ಸಿಬಿ ಅಲ್‌ರೌಂಡರ್ ಕ್ರುನಾಲ್ ಪಾಂಡ್ಯಗೆ ಅವಕಾಶ ನೀಡುವ ಸಾಧ್ಯತೆಗಳು ಗೋಚರಿಸಿದೆ.

2021ರ ಶ್ರೀಲಂಕಾ ಸರಣಿ ಮೂಲಕ ಟೀ ಇಂಡಿಯಾ ಟಿ20 ತಂಡಕ್ಕೆ ಪದಾರ್ಪಣೆ ಮಾಡಿದರೂ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ಕ್ರುನಾಲ್ ಪಾಂಡ್ಯ ವಿಫಲರಾಗಿದ್ದಾರೆ. ಆದರೆ 2025 ಹಾಗೂ 2026ರಲ್ಲಿ ಆರ್‌ಸಿಬಿ ತಂಡದ ಪ್ರಮುಖ ಆಲ್‌ರೌಂಡರ್ ಆಗಿ ಕ್ರುನಾಲ್ ಪಾಂಡ್ಯ ಉತ್ತಮ ಪ್ರದರ್ಶನ ನೀಡಿದ್ದಾರೆ. 2026ರ ಐಪಿಎಲ್ ಟೂರ್ನಿಯಲ್ಲಿ ಕ್ರುನಾಲ್ 14 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇನ್ನು ಒಟ್ಟು 226 ರನ್ ಸಿಡಿಸಿದ್ದಾರೆ.

ಅಕ್ಸರ್ ಪಟೇಲ್ ಬದಲು ಕ್ರುನಾಲ್ ಪಾಂಡ್ಯಗೆ ಅವಕಾಶ ನೀಡಲು ಆಯ್ಕೆ ಸಮಿತಿ ಮುಂದಾಗಿದೆ. ಆರ್‌ಸಿಬಿ ತಂಡದಲ್ಲಿ ಪ್ರಮುಖ ಜವಾಬ್ದಾರಿ ನಿರ್ವಹಿಸಿದ ಕ್ರುನಾಲ್ ಪಾಂಡ್ಯ ಸತತ 2 ಬಾರಿ ಚಾಂಪಿಯನ್ ಆರ್‌ಸಿಬಿ ತಂಡದ ಭಾಗವಾಗಿದ್ದಾರೆ. ಹೀಗಾಗಿ ಅಕ್ಸರ್ ಪಟೇಲ್ ಬದಲು ಕ್ರುನಾಲ್ ಪಾಂಡ್ಯಗೆ ಅವಕಾಶ ನೀಡುವ ಕುರಿತು ಭಾರಿ ಚರ್ಚೆ ನಡೆಯುತ್ತಿದೆ. ಆಲ್‌ರೌಂಡ್ ಕೋಟಾದಲ್ಲಿ ಕ್ರುನಾಲ್ ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಹೆಚ್ಚಾಗಿದೆ.

ಸೂರ್ಯಕುಮಾರ್ ಯಾದವ್ ನಾಯಕತ್ವ ಹಾಗೂ ಟಿ20 ತಂಡದಿಂದ ಕೊಕ್ ನೀಡಿದ ಬಿಸಿಸಿಐ, ಶ್ರೇಯಸ್ ಅಯ್ಯರ್‌ಗೆ ನಾಯಕತ್ವ ನೀಡಿತ್ತು. ಆದರೆ ತಂಡದ ಪ್ರದರ್ಶನ ಬಿಸಿಐಗೆ ನಿರಾಸೆ ತಂದಿದೆ. ಹೀಗಾಗಿ ಕೆಲ ಬದಲಾವಣೆ ಮಾಡುವ ಮೂಲಕ ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಮುಂದಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

6,6,6,6,6,6. ಮತ್ತೊಂದು ಶತಕ ಜಸ್ಟ್ ಮಿಸ್: ದುಲೀಪ್ ಟ್ರೋಫಿಯಲ್ಲೂ ವೈಭವ್ ಸೂರ್ಯವಂಶಿ ಸ್ಪೋಟಕ ಬ್ಯಾಟಿಂಗ್, 57 ವರ್ಷದ ದಾಖಲೆ ನುಚ್ಚುನೂರು
ಕ್ರಿಕೆಟ್‌ಗೆ ವಿದಾಯ ಹೇಳಿದ್ದರೂ, ಗಂಗೂಲಿಯ ಆ ಒಂದು ಮಾತಿಗೆ ವಾಪಸ್ ಬಂದು ವಿಶ್ವಕಪ್ ಆಡಿದ ಜಾವಗಲ್ ಶ್ರೀನಾಥ್!