
ಕೋಲ್ಕತಾ(ಜ.02): ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಗೆ ಲಘು ಹೃದಯಾಘಾತವಾಗಿದೆ. ಎದೆ ನೋವು ಕಾಣಿಸಿಕೊಂಡ ಕಾರಣ ತಕ್ಷಣವೇ ಗಂಗೂಲಿ ಅವರನ್ನು ಕೋಲ್ಕತಾದ ವುಡ್‌ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಂಗೂಲಿ ಆರೋಗ್ಯ ಸುಧಾರಿಸಿದೆ. ಇಂದು(ಜ.02) ಸಂಜೆ ಆ್ಯಂಜಿಯೋಪ್ಲಾಸ್ಟಿ ಸರ್ಜರಿ ನಡೆಯಲಿದೆ. ಗಂಗೂಲಿ ಆರೋಗ್ಯ ಏರುಪೇರಾಗಿರುವ ವಿಚಾರ ತಿಳಿದು ಅಭಿಮಾನಿಗಳು ಆತಂಕಗೊಂಡಿದ್ದಾರೆ. ಇತ್ತ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಹಲವರು ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು!
ಎಂದಿನಂತೆ ಗಂಗೂಲಿ ಬೆಳಗ್ಗೆ ಜಿಮ್‌ಗೆ ತೆರಳಿ ಅಭ್ಯಾಸ ಮಾಡಿದ್ದಾರೆ. ಈ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಗಂಗೂಲಿ ಅಪಾಯದಿಂದ ಪಾರಾಗಿದ್ದು, ಆರೋಗ್ಯ ಸುಧಾರಿಸಿದೆ. ಗಂಗೂಲಿ ಶೀಘ್ರ ಚೇತರಿಕೆಗೆ ಬಿಸಿಸಿಐ, ಐಸಿಸಿ, ಟೀಂ ಇಂಡಿಯಾ ಕ್ರಿಕೆಟಿಗರು ಸೇರಿದಂತೆ ಹಲವು ದಿಗ್ಗಜರು ಪ್ರಾರ್ಥಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.