
ದುಬೈ(ಫೆ.25): ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆಸಲು ಯತ್ನಿಸಿದ್ದ ಒಮಾನ್‌ನ ಕ್ರಿಕೆಟಿಗ ಯೂಸುಫ್ ಅಬ್ದುಲ್ ರಹೀಂರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) 7 ವರ್ಷಗಳ ಕಾಲ ನಿಷೇಧಿಸಿದೆ.
ಕ್ರಿಕೆಟ್ ಎನ್ನುವ ಜಂಟಲ್‌ಮನ್ ಕ್ರೀಡೆಗೆ ಕಳಂಕ ತಂದು ಮಣ್ಣು ತಿನ್ನುವ ಕೆಲಸ ಮಾಡಿದ ಆಟಗಾರನಿಗೆ ಐಸಿಸಿ ಕಠಿಣ ಶಿಕ್ಷೆಯನ್ನು ವಿಧಿಸಿದೆ. ಫಿಕ್ಸಿಂಗ್ ನಡೆಸಲು ಯತ್ನಿಸಿದ್ದಾಗಿ ಯೂಸುಫ್ ತಪ್ಪೊಪ್ಪಿಕೊಂಡಿದ್ದಾರೆ ಎಂದು ಐಸಿಸಿ ತಿಳಿಸಿದೆ.
3 ಪ್ರಸಿದ್ಧ ಚಿತ್ರನಟಿಯರ ಬಳಸಿ ಕೆಪಿಎಲ್ ಕ್ರಿಕೆಟಿಗರ ಹನಿಟ್ರ್ಯಾಪ್!
2019ರಲ್ಲಿ ಯುಎಇನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಅರ್ಹತಾ ಟೂರ್ನಿ ವೇಳೆ ಯೂಸುಫ್ ಮ್ಯಾಚ್ ಫಿಕ್ಸಿಂಗ್‌ಗೆ ಯತ್ನಿಸಿದ್ದರು. ಜತೆಗೆ ಇತರ ಆಟಗಾರರನ್ನು ಭ್ರಷ್ಟಾಚಾರದಲ್ಲಿ ತೊಡಗುವಂತೆ ಪ್ರಚೋದಿಸಿದ್ದರು ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.