ಮಹದಿ ಹಸನ್ ಶತಕ: ವಿಂಡೀಸ್‌ ವಿರುದ್ಧ ಬಾಂಗ್ಲಾ ದೊಡ್ಡ ಮೊತ್ತ

Kannadaprabha News   | Asianet News
Published : Feb 05, 2021, 10:02 AM IST
ಮಹದಿ ಹಸನ್ ಶತಕ: ವಿಂಡೀಸ್‌ ವಿರುದ್ಧ ಬಾಂಗ್ಲಾ ದೊಡ್ಡ ಮೊತ್ತ

ಸಾರಾಂಶ

ಮಹದಿ ಹಸನ್ ಬಾರಿಸಿದ ಚೊಚ್ಚಲ ಶತಕದ ನೆರವಿನಿಂದ ಬಾಂಗ್ಲಾದೇಶ ತಂಡವು ಮೊದಲ ಇನಿಂಗ್ಸ್‌ನಲ್ಲಿ ಬೃಹತ್ ಮೊತ್ತ ಕಲೆಹಾಕಿದ್ದು, ಕೆರಿಬಿಯನ್ನರ ಮೇಲೆ ಆರಂಭಿಕ ಮೇಲುಗೈ ಸಾಧಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಢಾಕಾ(ಫೆ.05): ಮೆಹದಿ ಹಸನ್‌ (103) ಬಾರಿಸಿದ ಚೊಚ್ಚಲ ಆಕರ್ಷಕ ಶತಕದ ನೆರವಿನಿಂದ ಬಾಂಗ್ಲಾದೇಶ, ವೆಸ್ಟ್‌ ಇಂಡೀಸ್‌ ವಿರುದ್ಧ ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 430 ರನ್‌ಗಳ ದೊಡ್ಡ ಮೊತ್ತ ದಾಖಲಿಸಿದೆ. 

ಮೊದಲ ಇನ್ನಿಂಗ್ಸ್‌ ಆರಂಭಿಸಿರುವ ವಿಂಡೀಸ್‌ ಸದ್ಯ 39 ಓವರ್‌ ಮುಕ್ತಾಯದ ವೇಳೆಗೆ 3 ವಿಕೆಟ್‌ ಕಳೆದುಕೊಂಡು 122 ರನ್‌ ಬಾರಿಸಿದ್ದು, ಇನ್ನೂ 308 ರನ್‌ಗಳ ಹಿನ್ನಡೆಯಲ್ಲಿದೆ. ವೆಸ್ಟ್ ಇಂಡೀಸ್ ಪರ ಕ್ರೆಗ್ ಬ್ರಾಥ್‌ವೇಟ್‌ ಅಜೇಯ 70 ರನ್‌ ಬಾರಿಸಿ ಶತಕದತ್ತ ಮುನ್ನುಗ್ಗುತ್ತಿದ್ದರೆ, ಕೈಲ್‌ ಮೆರೀಸ್ 25  ರನ್ ಬಾರಿಸಿ ಉತ್ತಮ ಸಾಥ್‌ ನೀಡಿದ್ದಾರೆ.

ವಿಂಡೀಸ್‌ ವಿರುದ್ಧ ಬಾಂಗ್ಲಾದೇಶ ಗೌರವಾನ್ವಿತ ಮೊತ್ತ

ಸ್ಕೋರ್‌: ಬಾಂಗ್ಲಾ 430/10, 
ವಿಂಡೀಸ್‌ 75/2

ಪಾಕಿಸ್ತಾನ-ದ.ಆಫ್ರಿಕಾ 2ನೇ ಟೆಸ್ಟ್‌ಗೆ ಮಳೆ ಕಾಟ

ರಾವಲ್ಪಿಂಡಿ: ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ನಡುವಿನ 2ನೇ ಟೆಸ್ಟ್‌ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ. ಗುರುವಾರ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆರಂಭಿಸಿದ ಪಾಕಿಸ್ತಾನ 22 ರನ್‌ ಗಳಿಸುವಷ್ಟರಲ್ಲಿ 3 ವಿಕೆಟ್‌ ಕಳೆದುಕೊಂಡಿತು.  ನಾಯಕ ಬಾಬರ್‌ ಅಜಾಂ (77), ಫವಾದ್‌ ಆಲಂ (42) ಪಾಕ್‌ಗೆ ಆಸರೆಯಾದರು. ದಿನದಂತ್ಯಕ್ಕೆ ಪಾಕಿಸ್ತಾನ 3 ವಿಕೆಟ್‌ಗೆ 145 ರನ್‌ಗಳಿಸಿತು.

ಸ್ಕೋರ್‌: ಪಾಕಿಸ್ತಾನ 145/3 (ಮೊದಲ ದಿನದಂತ್ಯಕ್ಕೆ)

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸ್ಮೃತಿ ಮಂಧನಾ ಮದುವೆ ಮುರಿದ ಬಳಿಕ ಟೀಮ್‌ ಇಂಡಿಯಾ ಆಟಗಾರ್ತಿಯರ ಮಹಾ ನಿರ್ಧಾರ!
ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ