ಐಪಿಎಲ್‌ನಲ್ಲಿ ಅವಕಾಶ ಸಿಗದ್ದಕ್ಕೆ ಕ್ರಿಕೆಟಿಗ ಆತ್ಮಹತ್ಯೆ!

By Suvarna News  |  First Published Aug 14, 2020, 4:15 PM IST

ಐಪಿಎಲ್ ಟೂರ್ನಿಯಲ್ಲಿ ಆಡಲು ಅವಕಾಶ ಸಿಗಲಿಲ್ಲ ಎಂದು ಮನನೊಂದು ಕ್ರಿಕೆಟ್ ಆಟಗಾರನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಣ್‌ ತಿವಾರಿ ಬೆಳಕಿಗೆ ಬಂದಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ


ಮುಂಬೈ(ಆ.14): ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನಲ್ಲಿ ಆಡುವ ಅವಕಾಶ ಸಿಗಲಿಲ್ಲ ಎನ್ನುವ ಕಾರಣಕ್ಕೆ ಮುಂಬೈನ ಯುವ ಕ್ರಿಕೆಟಿಗ ಕರಣ್‌ ತಿವಾರಿ (27) ಆತ್ಮಹತ್ಯೆಗೆ ಶರಣಾದ ಘಟನೆ ಇತ್ತೀಚೆಗೆ ನಡೆದಿದೆ. 

ಕೊರೋನಾ ಲಾಕ್‌ಡೌನ್‌ಗೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್‌ ತಂಡ ನಡೆಸಿದ್ದ ಆಯ್ಕೆ ಟ್ರಯಲ್ಸ್‌ನಲ್ಲಿ ವೇಗದ ಬೌಲರ್‌ ಕರಣ್‌ ಆಯ್ಕೆಯಾಗಿರಲಿಲ್ಲ. ಮುಂಬೈ ಕ್ರಿಕೆಟ್‌ ವಲಯದಲ್ಲಿ ‘ಜೂನಿಯರ್‌ ಡೇಲ್‌ ಸ್ಟೈನ್‌’ ಎಂದೇ ಕರೆಸಿಕೊಳ್ಳುತ್ತಿದ್ದ ಕರಣ್‌ಗೆ ರಣಜಿ ಸಂಭವನೀಯರ ತಂಡದಲ್ಲೂ ಸ್ಥಾನ ಸಿಕ್ಕಿರಲಿಲ್ಲ. 

Tap to resize

Latest Videos

ಇದರಿಂದ ನೊಂದಿದ್ದ ಅವರು, ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಬಳಿಕ ಸೀಲಿಂಗ್ ಫ್ಯಾನ್‌ಗೆ ನೇಣುಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಖಿನ್ನತೆಯೇ ಕಾರಣ ಎಂದು ಅವರ ಆಪ್ತ ಸ್ನೇಹಿತರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕಳೆದ ಕೆಲವು ಸಮಯದಿಂದ ಕರಣ್‌ ತಿವಾರಿ ತಮ್ಮ ಬೆಡ್ ರೂಂ ಬಾಗಿಲು ಹಾಕಿಕೊಂಡಿದ್ದರು. ಬಳಿಕ ಅನುಮಾನಗೊಂಡ ಪೋಷಕರು ಬಾಗಿಲು ಮುಚ್ಚಿದ್ದಾರೆ. ಬಾಗಿಲು ಮುರಿದು ಒಳ ಹೋದಾಗ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. 

ನಿಂಗೊಳ್ಳೆ ಭವಿಷ್ಯವಿದೆ ಕಂದ ಎಂದ ವೇಗಿ ಜಸ್ಪ್ರೀತ್ ಬುಮ್ರಾ

ಬಿಸಿಸಿಐ ಮಾರ್ಗಸೂಚಿಯನ್ವಯ ರಾಜ್ಯ ತಂಡವನ್ನು ಪ್ರತಿನಿಧಿಸಿದ ಆಟಗಾರರು ಮಾತ್ರ ಐಪಿಎಲ್ ಹರಾಜಿಗೆ ಅರ್ಹತೆಯನ್ನು ಗಿಟ್ಟಿಸಿಕೊಳ್ಳುತ್ತಾರೆ. ಮುಂಬೈನ ವಾಂಖೆಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ನೆಟ್ಸ್‌ನಲ್ಲಿ ಬೌಲಿಂಗ್ ಮಾಡುತ್ತಿದ್ದರು. ಅವರ ಬೌಲಿಂಗ್ ಹಾಗೂ ಬ್ಯಾಟಿಂಗ್ ವಿಡಿಯೋಗಳನ್ನು ವಾಟ್ಸ್‌ಅಪ್ ಸ್ಟೇಟಸ್‌ನಲ್ಲಿ ಅಪ್‌ಲೋಡ್‌ ಮಾಡುತ್ತಿದ್ದರು. ಒಬ್ಬ ಭರವಸೆಯ ಆಟಗಾರರನ್ನು ಕಳೆದುಕೊಂಡಂತೆ ಆಗಿದೆ ಎಂದು ಆತನ ಸ್ನೇಹಿತರು ಬೇಸರ ವ್ಯಕ್ತಪಡಿಸಿದ್ದಾರೆ.

click me!