Mithali Raj retirement: ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್‌

Published : Jun 08, 2022, 02:22 PM ISTUpdated : Jun 08, 2022, 02:50 PM IST
Mithali Raj retirement: ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಮಿಥಾಲಿ ರಾಜ್‌

ಸಾರಾಂಶ

Mithali Raj retirement: ಭಾರತ ಮಹಿಳಾ ಕ್ರಿಕೆಟ್‌ನ ದಿಗ್ಗಜ ಪ್ರತಿಭೆ ಮಿಥಾಲಿ ರಾಜ್‌ ಎಲ್ಲಾ ಆವೃತ್ತಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ನಿನ್ನೆಯಷ್ಟೇ ಬಿಡುಗಡೆಯಾದ ಮಹಿಳಾ ಕ್ರಿಕೆಟ್‌ ರ್ಯಾಂಕಿಂಗ್‌ನಲ್ಲಿ ಏಳನೇ ಸ್ಥಾನ ಕಾಯ್ದುಕೊಂಡಿದ್ದ ಮಿಥಾಲಿ ಇಂದು ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಮಹಿಳಾ ಕ್ರಿಕೆಟ್‌ನ ಒಂದು ಯುಗಾಂತ್ಯವಾದಂತಾಗಿದೆ.

ನವದೆಹಲಿ: ಮಹಿಳಾ ಕ್ರಿಕಟ್‌ನ ದಿಗ್ಗಜ ಪ್ರತಿಭೆ ಮತ್ತು ಭಾರತದಲ್ಲಿ ಸಾವಿರಾರು ಹೆಣ್ಣುಮಕ್ಕಳಿಗೆ ಸ್ಪೂರ್ತಿಯಾಗಿರುವ ಮಿಥಾಲಿ ರಾಜ್‌ (Mithali Raj Retires) ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಮಿಥಾಲಿ ರಾಜ್‌ ದಶಕದಿಂದ ಭಾರತ ಕ್ರಿಕೆಟ್‌ಗೆ ಮತ್ತು ಕ್ರಿಕೆಟ್‌ ಲೋಕಕ್ಕೆ ಅತೀವ ಕೊಡುಗೆಯನ್ನು ನೀಡಿದ್ದಾರೆ. ಸುಮಾರು ಎರಡು ದಶಕಗಳ ಕಾಲ ಭಾರತ ಮಹಿಳಾ ಕ್ರಿಕೆಟ್‌ ತಂಡದ ಪರ ತಮ್ಮದೇ ಛಾಪು ಮೂಡಿಸಿದ್ದ 39 ವರ್ಷದ ಮಿಥಾಲಿ ರಾಜ್, ಬುಧವಾರವಾದ ಇಂದು ದಿಢೀರ್ ಎನ್ನುವಂತೆ ಎಲ್ಲಾ ಮಾದರಿಯ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.

ನಾನು ಕ್ರಿಕೆಟ್ ವೃತ್ತಿಜೀವನದಿಂದ ನಿವೃತ್ತಿಯಾಗಲು ಇದು ಸರಿಯಾದ ಸಮಯವೆಂದು ನನಗನಿಸುತ್ತಿದೆ. ನಮ್ಮ ತಂಡವು ಉತ್ತಮ ಪ್ರತಿಭಾನ್ವಿತ ಆಟಗಾರ್ತಿರನ್ನೊಳಗೊಂಡಿದ್ದು, ಭಾರತ ಮಹಿಳಾ ಕ್ರಿಕೆಟ್ ತಂಡದ ಭವಿಷ್ಯ ಮತ್ತಷ್ಟು ಉಜ್ವಲವಾಗಿರಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ತಮ್ಮ ನಿವೃತ್ತಿಯ ನಿರ್ಧಾರವನ್ನು ಟ್ವೀಟ್‌ ಮೂಲಕ ಜಗತ್ತಿನ ಮುಂದೆ ಅನಾವರಣ ಮಾಡಿರುವ ಮಿಥಾಲಿ ರಾಜ್‌, ಕಳೆದ ಹಲವು ವರ್ಷಗಳಿಂದ ನನಗೆ ಪ್ರೀತಿ ಹಾಗೂ ಬೆಂಬಲ ನೀಡಿದ ನಿಮಗೆಲ್ಲರಿಗೂ ಅನಂತ ಧನ್ಯವಾದಗಳು. ನಿಮ್ಮೆಲ್ಲರ ಹಾರೈಕೆ ಹಾಗೂ ಬೆಂಬಲದೊಂದಿಗೆ ನಾನು ಎರಡನೇ ಇನಿಂಗ್ಸ್‌ನತ್ತ ಮುಖ ಮಾಡುತ್ತಿದ್ದೇನೆ ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ.

ಭಾರತ ಮಹಿಳಾ ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ತಂಡದ ನಾಯಕಿಯಾಗಿದ್ದ ಮಿಥಾಲಿ ರಾಜ್, 1999ರಲ್ಲಿ ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇದಾದ ಬಳಿಕ ದಶಕಗಳ ಕಾಲ ಕ್ರಿಕೆಟ್ ಆಡುವ ಮೂಲಕ ಕೋಟ್ಯಾಂತರ ಮಹಿಳೆಯರ ಪಾಲಿಗೆ ಮಿಥಾಲಿ ರಾಜ್ ಸ್ಪೂರ್ತಿಯ ಚಿಲುಮೆಯಾಗಿದ್ದರು. ಭಾರತ ಮಹಿಳಾ ತಂಡದ ನಾಯಕಿಯಾಗಿ ಮಿಥಾಲಿ ರಾಜ್ ಎರಡು ಬಾರಿ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ತಂಡವನ್ನು ಫೈನಲ್‌ಗೇರಿಸಿದ್ದರು. 

Ind vs SA: ಆಫ್ರಿಕಾ ಎದುರಿನ ಮೊದಲ ಟಿ20 ಪಂದ್ಯಕ್ಕೆ ಈ ಇಬ್ಬರಿಗೆ ಸಿಗುತ್ತಾ ಸ್ಥಾನ..?

ಮಿಥಾಲಿ ರಾಜ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡವು (Indian Women's Cricket Team) 2005ರಲ್ಲಿ ಮೊದಲ ಬಾರಿಗೆ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ದ ಮುಗ್ಗರಿಸುವ ಕಪ್ ಗೆಲ್ಲುವ ಅವಕಾಶವನ್ನು ಕೈಚೆಲ್ಲಿತ್ತು. ಇದಾದ ಬಳಿಕ 2017ರಲ್ಲಿ ಕೂಡಾ ಮಹಿಳಾ ಕ್ರಿಕೆಟ್ ತಂಡವು ಎರಡನೇ ಬಾರಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿತ್ತು. ಆದರೆ ಇಂಗ್ಲೆಂಡ್ ಎದುರು ರೋಚಕ ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿತ್ತು. ಇನ್ನು ಕೆಲ ತಿಂಗಳ ಹಿಂದಷ್ಟೇ ಮುಕ್ತಾಯವಾದ ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ತಂಡವು ನಾಕೌಟ್ ಹಂತಕ್ಕೇರಲು ವಿಫಲವಾಗಿತ್ತು. ಇದರ ಬೆನ್ನಲ್ಲೇ ಮಿಥಾಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೂಡಾ ತೆರೆಮರೆಗೆ ತೆರೆದಿತ್ತು.

ಮಿಥಾಲಿ ರಾಜ್ ಭಾರತ ಮಹಿಳಾ ತಂಡದ ಪರ 232 ಏಕದಿನ ಪಂದ್ಯಗಳನ್ನಾಡಿ 50.68ರ ಬ್ಯಾಟಿಂಗ್ ಸರಾಸರಿಯಲ್ಲಿ 7,805 ರನ್ ಬಾರಿಸಿದ್ದಾರೆ. ಇನ್ನು 89 ಟಿ20 ಪಂದ್ಯಗಳಿಂದ ಮಿಥಾಲಿ ರಾಜ್ 2,364 ರನ್ ಸಿಡಿಸಿದ್ದರು. ಇದಷ್ಟೇ ಅಲ್ಲದೇ ಭಾರತ ಪರ 12 ಟೆಸ್ಟ್ ಪಂದ್ಯಗಳನ್ನಾಡಿ 699 ರನ್ ಬಾರಿಸಿದ್ದರು. ಎರಡು ವರ್ಷಗಳ ಸುದೀರ್ಘ ಕ್ರಿಕೆಟ್ ವೃತ್ತಿಜೀವನದಲ್ಲಿ ಮಿಥಾಲಿ 7 ಏಕದಿನ ಹಾಗೂ ಒಂದು ಟೆಸ್ಟ್ ಶತಕವನ್ನು ಸಿಡಿಸಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ