ನಾನಿನ್ನೂ ಬೆಸ್ಟ್ ಫಾರ್ಮ್‌ನಲ್ಲಿದ್ದೇನೆ: ಫಿಟ್‌ನೆಸ್ ಟೀಕಾಕಾರರಿಗೆ ಮೊಹಮ್ಮದ್ ಶಮಿ ತಿರುಗೇಟು

Published : Oct 21, 2026, 10:47 AM IST
Mohammed Shami comeback

ಸಾರಾಂಶ

ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ತಮ್ಮ ಫಿಟ್‌ನೆಸ್ ಮತ್ತು ವರ್ಕ್ ಲೋಡ್ ಬಗ್ಗೆ ಕೇಳಿಬರುತ್ತಿರುವ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ತಾವು ವೃತ್ತಿಜೀವನದ ಅತ್ಯುತ್ತಮ ಹಂತದಲ್ಲಿದ್ದು, ತಂಡಕ್ಕೆ ಆಯ್ಕೆಯಾಗದ ಬಗ್ಗೆ ಯಾವುದೇ ಬೇಸರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮುಂಬರುವ ಟೂರ್ನಿಗಳಲ್ಲಿ ಹೆಚ್ಚು ಪಂದ್ಯಗಳನ್ನಾಡಿ 2027ರ ಏಕದಿನ ವಿಶ್ವಕಪ್ ಆಡುವ ಗುರಿ ಹೊಂದಿರುವುದಾಗಿ ಅವರು ತಿಳಿಸಿದ್ದಾರೆ.

ಟೀಂ ಇಂಡಿಯಾದ ಹಿರಿಯ ವೇಗದ ಬೌಲರ್ ಮೊಹಮ್ಮದ್ ಶಮಿ ತಮ್ಮ ಫಿಟ್‌ನೆಸ್ ಮತ್ತು ವರ್ಕ್ ಲೋಡ್ ಬಗ್ಗೆ ಕೇಳಿಬರುತ್ತಿರುವ ಟೀಕೆಗಳಿಗೆ ಕೊನೆಗೂ ಮೌನ ಮುರಿದಿದ್ದಾರೆ. ತಂಡಕ್ಕೆ ಆಯ್ಕೆಯಾಗದ ಬಗ್ಗೆ ತನಗೆ ಯಾವುದೇ ಬೇಸರವಿಲ್ಲ, ನಾನಿನ್ನೂ ನನ್ನ ವೃತ್ತಿಜೀವನದ ಅತ್ಯುತ್ತಮ ಹಂತದಲ್ಲಿದ್ದೇನೆ ಎಂದು ಅವರು ಹೇಳಿದ್ದಾರೆ. ರಣಜಿ ಟ್ರೋಫಿಯಲ್ಲಿ ಶಮಿ ಕೇವಲ ಸಣ್ಣ ಸ್ಪೆಲ್‌ಗಳನ್ನು ಮಾತ್ರ ಮಾಡುತ್ತಿದ್ದಾರೆ ಎಂಬ ಟೀಕೆಗಳಿಗೆ ಅವರು ಈ ರೀತಿ ತಿರುಗೇಟು ನೀಡಿದ್ದಾರೆ.

"ನಾನು ಉದ್ದನೆಯ ಸ್ಪೆಲ್ ಮಾಡಬೇಕೋ ಬೇಡವೋ ಅನ್ನೋದನ್ನ ಹೊರಗಿನವರು ಹೇಗೆ ನಿರ್ಧರಿಸುತ್ತಾರೆ? ತಂಡದ ಅಗತ್ಯಕ್ಕೆ ತಕ್ಕಂತೆ ಅದನ್ನು ನಿರ್ಧಾರ ಮಾಡಲಾಗುತ್ತದೆ. ಸುಮ್ಮನೆ ಓವರ್‌ಗಳ ಮೇಲೆ ಓವರ್‌ಗಳನ್ನು ಎಸೆಯುತ್ತಾ ಕೂರಲು ಆಗುವುದಿಲ್ಲ" ಎಂದು ಸರ್ವಿಸಸ್ ವಿರುದ್ಧ ಬಂಗಾಳ ತಂಡದ ಗೆಲುವಿನ ನಂತರ ಶಮಿ ಮಾಧ್ಯಮಗಳಿಗೆ ತಿಳಿಸಿದರು. ಪಂದ್ಯದ ಪರಿಸ್ಥಿತಿ ಮತ್ತು ಪಿಚ್ ಸ್ವಭಾವವನ್ನು ನೋಡಿಕೊಂಡು ಕ್ಯಾಪ್ಟನ್ ಬೌಲಿಂಗ್ ಬದಲಾವಣೆ ಮಾಡುತ್ತಾರೆ. ಪಂದ್ಯದ ದಿನವೂ ನಾನು ನೆಟ್ಸ್‌ನಲ್ಲಿ ಒಂದೂವರೆ ಗಂಟೆಗಳ ಕಾಲ ಬೌಲಿಂಗ್ ಮಾಡಿದ್ದೇನೆ ಎಂದು ಅವರು ವಿವರಿಸಿದರು.

ನಾನಿನ್ನು ವೃತ್ತಿಜೀವನದ ಉತ್ತುಂಗದಲ್ಲಿದ್ದೇನೆ:

ವಯಸ್ಸು ನಿಮ್ಮ ಫಿಟ್‌ನೆಸ್ ಮೇಲೆ ಪರಿಣಾಮ ಬೀರಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಶಮಿ, "ನಾನಿನ್ನೂ ನನ್ನ ವೃತ್ತಿಜೀವನದ ಉತ್ತುಂಗದಲ್ಲಿದ್ದೇನೆ. ನೇರವಾಗಿ ಹೇಳಬೇಕೆಂದರೆ, ನಾನೀಗ ನನ್ನ ಬೆಸ್ಟ್ ಫಾರ್ಮ್‌ನಲ್ಲಿದ್ದೇನೆ" ಎಂದರು. ದೆಹಲಿ ವಿರುದ್ಧದ ಮೊದಲ ಪಂದ್ಯದಲ್ಲಿ ಶಮಿ 17.3 ಓವರ್‌ಗಳಲ್ಲಿ 30 ರನ್ ನೀಡಿ 4 ವಿಕೆಟ್ ಕಬಳಿಸಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲೂ ಒಂದು ವಿಕೆಟ್ ತಮ್ಮ ಬುಟ್ಟಿಗೆ ಹಾಕಿಕೊಂಡಿದ್ದರು. ಆದರೆ ಮುಂದಿನ ಪಂದ್ಯದಲ್ಲಿ ಅವರು ಆಡಿರಲಿಲ್ಲ. ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಿಂದ ಅವರನ್ನು ಕೈಬಿಟ್ಟ ಬೆನ್ನಲ್ಲೇ ಈ ಬೆಳವಣಿಗೆ ನಡೆದಿತ್ತು.

ಈ ಬಗ್ಗೆ ಮಾತನಾಡಿದ ಶಮಿ, "ಪಿಚ್ ಪರಿಸ್ಥಿತಿ ಹೇಗಿತ್ತು ಅಂತ ನೀವೇ ನೋಡಿದ್ದೀರಲ್ಲ? ಅಂಥಾ ಪಿಚ್‌ಗಳಲ್ಲಿ 2-4 ಓವರ್ ಬೌಲಿಂಗ್ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಅದರ ಬದಲು ಯುವ ಆಟಗಾರರಿಗೆ ಅವಕಾಶ ಕೊಡುವುದು ಒಳ್ಳೆಯದು. ತಂಡಕ್ಕೆ ನನ್ನ ಅಗತ್ಯವಿದ್ದಾಗ ನಾನು ಖಂಡಿತ ಆಡುತ್ತೇನೆ" ಎಂದರು. ಟೀಂ ಇಂಡಿಯಾಗೆ ಮರಳಲು ಸಾಧ್ಯವಾಗದ ಬಗ್ಗೆ ತನಗೆ ಯಾವುದೇ ನಿರಾಸೆಯಿಲ್ಲ, ಮುಂಬರುವ ಟೂರ್ನಿಗಳಲ್ಲಿ ಆದಷ್ಟು ಹೆಚ್ಚು ಪಂದ್ಯಗಳನ್ನು ಆಡುವುದೇ ನನ್ನ ಗುರಿ ಎಂದು ಅವರು ಸ್ಪಷ್ಟಪಡಿಸಿದರು. ಬಿಸಿಸಿಐ ಆಯ್ಕೆಗಾರರ ಜೊತೆ ನಾನಿನ್ನೂ ಮಾತನಾಡಿಲ್ಲ, ಸದ್ಯಕ್ಕೆ ಬಿಸಿಸಿಐ ಕಾಂಟ್ರಾಕ್ಟ್ ಇಲ್ಲದೇ ಇರುವುದರಿಂದ ಅದರ ಅಗತ್ಯವೂ ಇಲ್ಲ ಎಂದು ಶಮಿ ತಮಾಷೆಯಾಗಿ ಹೇಳಿದರು.

ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡುವ ವಿಶ್ವಾಸದಲ್ಲಿ ಶಮಿ

ಅನುಭವಿ ವೇಗಿ ಮೊಹಮ್ಮದ್ ಶಮಿ 2025ರ ಮಾರ್ಚ್‌ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ಕೊನೆಯ ಬಾರಿಗೆ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಇದಾದ ಬಳಿಕ ಐಪಿಎಲ್ ಹಾಗೂ ದೇಶಿ ಕ್ರಿಕೆಟ್‌ನಲ್ಲಿ ಶಮಿ ಮೊನಚಾದ ದಾಳಿ ನಡೆಸಿದ್ದರೂ ಟೀಂ ಇಂಡಿಯಾಗೆ ಕಮ್‌ಬ್ಯಾಕ್ ಮಾಡಲು ಸಾಧ್ಯವಾಗಿಲ್ಲ. ಆದರೆ ಶಮಿ ತಾವು ಇನ್ನೂ 2027ರ ಏಕದಿನ ವಿಶ್ವಕಪ್ ಆಡುವ ಕನಸು ಹೊಂದಿರುವುದಾಗಿ ತಿಳಿಸಿದ್ದು, ಅದಕ್ಕಾಗಿ ತಕ್ಕ ಪ್ರಯತ್ನ ಮಾಡಲಿದ್ದೇನೆ ಎಂದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು-ಅಭಿಷೇಕ್ ಓಪನ್ನರ್; ವೈಭವ್ ಔಟ್, ಭುವಿ ಇನ್..! ಕಿವೀಸ್ ಎದುರಿನ ಮೊದಲ ಟಿ20 ಪಂದ್ಯಕ್ಕೆ ಬಲಿಷ್ಠ ಭಾರತ ಸಂಭಾವ್ಯ ತಂಡ ಪ್ರಕಟ..!
ಭಾರತ ತಂಡದಲ್ಲಿ ಸ್ಥಾನ ಸಿಗಲಿಲ್ಲ, ಈಗ ರಣಜಿ ಪಂದ್ಯಕ್ಕೂ ಗೈರು! ಈಗ ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಕೋಚ್