Ind vs Aus ಆಸೀಸ್‌ ಬ್ಯಾಟರ್ ವಿಕೆಟ್ ಚೆಲ್ಲಾಪಿಲ್ಲಿ ಮಾಡಿದ ಮೊಹಮ್ಮದ್ ಶಮಿ ಮಾರಕ ದಾಳಿ..! ವಿಡಿಯೋ ವೈರಲ್‌

Published : Mar 09, 2023, 04:09 PM IST
Ind vs Aus ಆಸೀಸ್‌ ಬ್ಯಾಟರ್ ವಿಕೆಟ್ ಚೆಲ್ಲಾಪಿಲ್ಲಿ ಮಾಡಿದ ಮೊಹಮ್ಮದ್ ಶಮಿ ಮಾರಕ ದಾಳಿ..! ವಿಡಿಯೋ ವೈರಲ್‌

ಸಾರಾಂಶ

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಹಮದಾಬಾದ್‌ ಟೆಸ್ಟ್‌ನಲ್ಲಿ ಶಮಿ ಮಿಂಚಿನ ದಾಳಿ ಆಸ್ಟ್ರೇಲಿಯಾದ ಪ್ರಮುಖ ಎರಡು ವಿಕೆಟ್ ಕಬಳಿಸಿ ಮಿಂಚಿದ ಮೊಹಮ್ಮದ್ ಶಮಿ ಶಮಿ ಮಾರಕ ದಾಳಿಗೆ ವಿಕೆಟ್ ಚೆಲ್ಲಾಪಿಲ್ಲಿ

ಅಹಮದಾಬಾದ್‌(ಮಾ.09): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯ ನಾಲ್ಕನೇ ಹಾಗೂ ಕೊನೆಯ ಟೆಸ್ಟ್‌ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ಮೂರನೇ ಟೆಸ್ಟ್ ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಆಸ್ಟ್ರೇಲಿಯಾ ತಂಡವು, ಇದೀಗ ಕೊನೆಯ ಟೆಸ್ಟ್‌ನಲ್ಲಿ ಆತಿಥೇಯರ ಮೇಲೆ ಹಿಡಿತ ಸಾಧಿಸುವತ್ತ ದಿಟ್ಟ ಹೆಜ್ಜೆಯಿಟ್ಟಿದೆ. ಹೀಗಿದ್ದೂ ಟೀಂ ಇಂಡಿಯಾ ಅನುಭವಿ ವೇಗಿ ಮೊಹಮ್ಮದ್, ಆಸೀಸ್‌ನ ಇಬ್ಬರು ತಾರಾ ಬ್ಯಾಟರ್‌ಗಳನ್ನು ಪೆವಿಲಿಯನ್ನಿಗಟ್ಟಿದ ವಿಡಿಯೋವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮೊದಲ ವಿಕೆಟ್‌ಗೆ ಟ್ರಾವಿಸ್ ಹೆಡ್ ಹಾಗೂ ಉಸ್ಮಾನ್ ಖವಾಜ 61 ರನ್‌ಗಳ ಜತೆಯಾಟವಾಡುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ರವಿಚಂದ್ರನ್ ಅಶ್ವಿನ್ ಯಶಸ್ವಿಯಾದರು. ಟ್ರಾವಿಸ್ ಹೆಡ್ 32 ರನ್ ಬಾರಿಸಿ ರವೀಂದ್ರ ಜಡೇಜಾಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು. ಇನ್ನು ಇದರ ಬೆನ್ನಲ್ಲೇ ನಂ.1 ಬ್ಯಾಟರ್ ಮಾರ್ನಸ್ ಲಬುಶೇನ್ ಅವರನ್ನು ಪೆವಿಲಿಯನ್ನಿಗಟ್ಟುವಲ್ಲಿ ವೇಗಿ ಮೊಹಮ್ಮದ್ ಶಮಿ ಯಶಸ್ವಿಯಾದರು.

ಮೂರನೇ ಟೆಸ್ಟ್ ಪಂದ್ಯದಲ್ಲಿ ವಿಶ್ರಾಂತಿ ಪಡೆದುಕೊಂಡಿದ್ದ ಮೊಹಮ್ಮದ್ ಶಮಿ, ನಾಲ್ಕನೇ ಟೆಸ್ಟ್‌ ಪಂದ್ಯದಲ್ಲಿ ಭರ್ಜರಿಯಾಗಿಯೇ ಕಮ್‌ಬ್ಯಾಕ್ ಮಾಡುವಲ್ಲಿ ಶಮಿ ಯಶಸ್ವಿಯಾದರು. 23ನೇ ಓವರ್‌ನ ಮೊದಲ ಎಸೆತದಲ್ಲಿ ಶಮಿ ಎಸೆದ ಚೆಂಡು, ಲಬುಶೇನ್‌ ಒಳ ಬ್ಯಾಟ್ ಅಂಚು ಸವುರಿ ವಿಕೆಟ್‌ಗೆ ಅಪ್ಪಳಿಸುವಲ್ಲಿ ಯಶಸ್ವಿಯಾಯಿತು. 

Ahmedabad Test: ಅಪರೂಪದ ದಾಖಲೆಯ ಹೊಸ್ತಿಲಲ್ಲಿ ವಿರಾಟ್ ಕೊಹ್ಲಿ - ರವಿಚಂದ್ರನ್ ಅಶ್ವಿನ್‌..!

ಹೀಗಿತ್ತು ನೋಡಿ ಶಮಿ ಕಬಳಿಸಿದ ಮೊದಲ ವಿಕೆಟ್‌:

ಇನ್ನು ಇದಾದ ಬಳಿಕ ಆಸ್ಟ್ರೇಲಿಯಾ ತಂಡವು ಎರಡನೇ ಸೆಷನ್‌ನಲ್ಲಿ ವಿಕೆಟ್‌ ಕಳೆದುಕೊಳ್ಳದೇ ದಿಟ್ಟ ಬ್ಯಾಟಿಂಗ್ ನಡೆಸುವ ಮೂಲಕ ಸ್ಟೀವ್ ಸ್ಮಿತ್ ಹಾಗೂ ಉಸ್ಮಾನ್ ಖವಾಜ, ಭಾರತೀಯ ಬೌಲರ್‌ಗಳನ್ನು ಕಾಡಿದರು. ಇನ್ನು ಚಹಾ ವಿರಾಮದ ಬಳಿಕ ಕ್ರೀಸ್‌ಗಿಳಿದ ಆಸ್ಟ್ರೇಲಿಯಾ ತಂಡಕ್ಕೆ ರವೀಂದ್ರ ಜಡೇಜಾ ಶಾಕ್ ನೀಡಿದರು. ನೆಲಕಚ್ಚಿ ಆಡುತ್ತಿದ್ದ ಸ್ಟೀವ್ ಸ್ಮಿತ್ ಅವರನ್ನು ಬಲಿ ಪಡೆಯುವಲ್ಲಿ ಜಡ್ಡು ಯಶಸ್ವಿಯಾದರು. ಇದಾದ 17 ರನ್ ಗಳಿಸಿ ಅಪಾಯಕಾರಿಯಾಗುವ ಮುನ್ಸೂಚನೆ ನೀಡಿದ್ದ ಪೀಟರ್ ಹ್ಯಾಂಡ್ಸ್‌ಕಂಬ್ ಅವರನ್ನು ಕ್ಲೀನ್ ಬೌಲ್ಡ್‌ ಮಾಡುವ ಮೂಲಕ ಮೊಹಮ್ಮದ್ ಶಮಿ, ಆಸೀಸ್‌ಗೆ ಡಬಲ್ ಶಾಕ್ ನೀಡಿದರು. ಪೀಟರ್‌ ಹ್ಯಾಂಡ್ಸ್‌ಕಂಬ್ ರಕ್ಷಣಾತ್ಮಕ ಆಟಕ್ಕೆ ಮೊರೆಹೋದ ಸಂದರ್ಭದಲ್ಲೇ ಆಫ್‌ ಸ್ಟಂಪ್ ಚೆಲ್ಲಾಪಿಲ್ಲಿ ಮಾಡುವಲ್ಲಿ ಶಮಿ ಯಶಸ್ವಿಯಾಗಿದ್ದಾರೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

ಇನ್ನೂರರ ಗಡಿ ದಾಟಿದ ಆಸ್ಟ್ರೇಲಿಯಾ: ಆಸ್ಟ್ರೇಲಿಯಾ ತಂಡವು ಟಾಸ್ ಗೆದ್ದು, ಮೊದಲ ದಿಟ್ಟ ಆರಂಭವನ್ನೇ ಪಡೆದಿದ್ದು, ಇದೀಗ 82 ಓವರ್ ಅಂತ್ಯದ ವೇಳೆಗೆ ಕೇವಲ 4 ವಿಕೆಟ್ ಕಳೆದುಕೊಂಡು 213 ರನ್ ಬಾರಿಸಿದೆ. ಆರಂಭಿಕ ಬ್ಯಾಟರ್ ಉಸ್ಮಾನ್ ಖವಾಜ 88 ರನ್ ಬಾರಿಸಿ ಶತಕದತ್ತ ದಾಪುಗಾಲಿಡುತ್ತಿದ್ದಾರೆ. ಇನ್ನು ಮತ್ತೊಂದು ತುದಿಯಲ್ಲಿ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ 24 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?