
ಬೆಂಗಳೂರು: ನ್ಯೂಜಿಲೆಂಡ್ ಎದುರು ಆರಂಭವಾಗಲಿರುವ ಐದು ಪಂದ್ಯಗಳ ಏಕದಿನ ಸರಣಿಗೆ ಇದೀಗ ಭಾರತ ತಂಡ ಪ್ರಕಟವಾಗಿದ್ದು, ಅನುಭವಿ ವೇಗಿ ಮೊಹಮ್ಮದ್ ಶಮಿ ಮತ್ತೊಮ್ಮೆ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ದೇಶಿ ಕ್ರಿಕೆಟ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೂ ಶಮಿ ಅವರನ್ನು ಆಯ್ಕೆ ಸಮಿತಿ ಕಡೆಗಣಿಸಿರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಇದೀಗ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಾಸಿತ್ ಅಲಿ, ಶಮಿ ಬೆಂಬಲಕ್ಕೆ ನಿಂತಿದ್ದು, ಆಯ್ಕೆ ಸಮಿತಿ ಮಾಡಿದ ಈ ಎಡವಟ್ಟು ಅವರಿಗೆ ತಾವು ಮಾಡಿದ್ದು ತಪ್ಪು ಎನ್ನುವುದು ಅರ್ಥವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮೊಹಮ್ಮದ್ ಶಮಿ ಭಾರತ ತಂಡದಲ್ಲಿ ಸ್ಥಾನ ಪಡೆಯದೇ ಇರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಬಾಸಿತ್ ಅಲಿ, ನ್ಯೂಜಿಲೆಂಡ್ ಎದುರಿನ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಿದಾಗ ಅಲ್ಲಿ ಮೊಹಮ್ಮದ್ ಶಮಿ ಹೆಸರು ಕಾಣಿಸಲಿಲ್ಲ. ಶಮಿ ಎಲ್ಲಿ ಹೋದರು? ವಿಶ್ವಕಪ್ ಇತಿಹಾಸವನ್ನು ನೋಡಿದರೇ ಶಮಿ ಭಾರತದ ಅತ್ಯುತ್ತಮ ವೇಗದ ಬೌಲರ್ ಆಗಿದ್ದಾರೆ. ಹೀಗಿದ್ದೂ ಅವರಿಗೆ ಭಾರತ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ನನ್ನ ಪ್ರಕಾರ, ಶಮಿಗೆ ಭಾರತ ಕ್ರಿಕೆಟ್ ತಂಡದ ಬಾಗಿಲು ಮುಚ್ಚಿದೆ. ಅವರು ಮತ್ತೆ ಟೀಂ ಇಂಡಿಯಾಗೆ ಕಮ್ಬ್ಯಾಕ್ ಮಾಡುವುದು ಕಷ್ಟಸಾಧ್ಯ. ಭಾರತೀಯ ಆಯ್ಕೆ ಸಮಿತಿಯು ಅತಿದೊಡ್ಡ ಪ್ರಮಾದವನ್ನು ಮಾಡಿದ್ದಾರೆ. ಅವರಿಗೆ ತಾವು ಮಾಡಿದ್ದು ತಪ್ಪು ಎನ್ನುವುದು ಆದಷ್ಟು ಬೇಗ ಅರ್ಥವಾಗಲಿದೆ. ಇದು ಭಾರತ ತಂಡಕ್ಕೆ ಆದ ದೊಡ್ಡ ನಷ್ಟ. ಇದರಿಂದ ಮೊಹಮ್ಮದ್ ಶಮಿಗೆ ಏನೂ ನಷ್ಟವಿಲ್ಲ, ಆದರೆ ಇದರಿಂದ ಭಾರತ ತಂಡವು ಮುಂಬರುವ ದಿನಗಳಲ್ಲಿ ದೊಡ್ಡ ಹೊಡೆತ ತಿನ್ನಲಿದೆ ಎಂದು ಶಮಿ ಅಭಿಪ್ರಾಯಪಟ್ಟಿದ್ದಾರೆ.
ಅಂದಹಾಗೆ ನ್ಯೂಜಿಲೆಂಡ್ ಎದುರಿನ ಏಕದಿನ ಸರಣಿಗೆ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಅವಕಾಶ ಸಿಗಬಹುದು ಎಂದು ನಿರೀಕ್ಷಿಸಲಾಗಿತ್ತು. ಯಾಕೆಂದರೆ ಶಮಿ, ರಣಜಿ ಟ್ರೋಫಿಯ ಮೊದಲ ಪಂದ್ಯದಲ್ಲಿ ಡೆಲ್ಲಿ ಎದುರು ಐದು ವಿಕೆಟ್ ಕಬಳಿಸಿ ಮಿಂಚಿದ್ದರು. ಹೀಗಾಗಿ ಶಮಿಯ ಪ್ರದರ್ಶನ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿತ್ತು. ಆದರೆ ಶಮಿ ಮತ್ತೊಮ್ಮೆ ಆಯ್ಕೆ ಸಮಿತಿಯ ನಿರ್ಲಕ್ಷ್ಯಕ್ಕೆ ಗುರಿಯಾಗಿದ್ದಾರೆ.
ಶುಭ್ಮನ್ ಗಿಲ್(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್(ಉಪನಾಯಕ), ಕೆ ಎಲ್ ರಾಹುಲ್. ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ಧೀರ್, ಅನ್ಶುಲ್ ಕಂಬೋಜ್, ಗುರ್ನೂರ್ ಬ್ರಾರ್, ಋತುರಾಜ್ ಗಾಯಕ್ವಾಡ್, ಅರ್ಶ್ದೀಪ್ ಸಿಂಗ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಕುಲ್ದೀಪ್ ಯಾದವ್.
ಶ್ರೇಯಸ್ ಅಯ್ಯರ್(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಇಶಾನ್ ಕಿಶನ್(ಉಪನಾಯಕ), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ಧೀರ್, ಆಖಿಬ್ ನಬಿ, ಗುರ್ನೂರ್ ಬ್ರಾರ್, ಋತುರಾಜ್ ಗಾಯಕ್ವಾಡ್, ಅರ್ಶ್ದೀಪ್ ಸಿಂಗ್, ಕುಮಾರ್ ಕುಶಾಗ್ರ, ಮೊಹಮ್ಮದ್ ಸಿರಾಜ್, ಯಶ್ ಠಾಕೂರ್, ಕುಲ್ದೀಪ್ ಯಾದವ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.