
ಮುಂಬೈ (ಮಾ.21): ಐಪಿಎಲ್‌ನ ಅತ್ಯಂತ ಯಶಸ್ವಿ ತಂಡಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್‌ನ ನಾಯಕ ಸ್ಥಾನದಿಂದ ಅನುಭವಿ ಆಟಗಾರ ಎಂಎಸ್ ಧೋನಿ ಕೆಳಗಿಳಿದಿದ್ದಾರೆ. ಅವರ ಬದಲಿಗೆ ರುತುರಾಜ್ ಗಾಯಕ್ವಾಡ್ ತಂಡದ ನಾಯಕರಾಗಿ ನೇಮಕವಾಗಿದ್ದಾರೆ.' 2024 ರ ಟಾಟಾ ಐಪಿಎಲ್ ಆರಂಭಕ್ಕೂ ಮುನ್ನ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ರುತುರಾಜ್ ಗಾಯಕ್ವಾಡ್‌ಗೆ ಹಸ್ತಾಂತರಿಸಿದ್ದಾರೆ. ರುತುರಾಜ್ 2019 ರಿಂದ ಚೆನ್ನೈ ಸೂಪರ್ ಕಿಂಗ್ಸ್‌ನ ಅವಿಭಾಜ್ಯ ಅಂಗವಾಗಿದ್ದಾರೆ ಮತ್ತು ಈ ಅವಧಿಯಲ್ಲಿ ಐಪಿಎಲ್‌ನಲ್ಲಿ 52 ಪಂದ್ಯಗಳನ್ನು ಆಡಿದ್ದಾರೆ. ಮುಂಬರುವ ಋತುವಿನಲ್ಲಿ ಇವರ ನಾಯಕತ್ವದಲ್ಲಿ ಆಡುವುದನ್ನು ತಂಡ ಎದುರು ನೋಡುತ್ತಿದೆ' ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವದಿಂದ ಎಂಎಸ್ ಧೋನಿ ಕೆಳಗಿಳಿಯುತ್ತಿರುವುದು ಇದು 2ನೇ ಬಾರಿ. ಇದಕ್ಕೂ ಮುನ್ನ ತಂಡದ ನಾಯಕತ್ವದಿಂದ ಕೆಳಗಿಳಿದು ಈ ಸ್ಥಾನವನ್ನು ರವೀಂದ್ರ ಜಡೇಜಾಗೆ ನೀಡಿದ್ದರು. ಆದರೆ, ಆ ವರ್ಷದ ಐಪಿಎಲ್‌ನಲ್ಲಿ ತಂಡದ ದಯನೀಯ ಸೋಲುಗಳ ಕಾರಣದಿಂದಾಗಿ ಟೂರ್ನಿಯ ನಡುವೆಯೇ ಜಡೇಜಾ ನಾಯಕತ್ವವನ್ನು ಮರಳಿ ಎಂಎಸ್ ಧೋನಿಗೆ ನೀಡಿದ್ದರು. ಈಗ ಮತ್ತೊಮ್ಮೆ ಎಂಎಸ್ ಧೋನಿ ಮತ್ತೊಮ್ಮೆ ತಂಡದ ನಾಯಕತ್ವವನ್ನು ಹಸ್ತಾಂತರ ಮಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.