ಧೋನಿ ನಿವೃತ್ತಿ ಸದ್ಯಕ್ಕಿಲ್ಲ; 2021ರ ಐಪಿಎಲ್ ಆಡ್ತಾರೆ ಸಿಎಸ್‌ಕೆ ನಾಯಕ?

By Web Desk  |  First Published Nov 30, 2019, 7:01 PM IST

ಎಂ.ಎಸ್.ಧೋನಿ ನಿವೃತ್ತಿ ಯಾವಾಗ ಅನ್ನೋ ಪ್ರಶ್ನೆ ಹಲವು ವರ್ಷಗಳಿಂದ ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಆಯ್ಕೆ ಸಮಿತಿ, ಬಿಸಿಸಿಐ ಅಧ್ಯಕ್ಷ ಹಾಗೂ ಕೋಚ್ ಕೂಡ ಧೋನಿ ನಿವೃತ್ತಿ ಮಾತುಗಳನ್ನು ಆಡಿದ್ದಾರೆ. ಇದೀಗ ಧೋನಿ ಸದ್ಯಕ್ಕೆ ನಿವೃತ್ತಿ ಇಲ್ಲ ಅನ್ನೋ ಸೂಚನೆ ನೀಡಿದ್ದಾರೆ. 


ರಾಂಚಿ(ನ.30): ಐಪಿಎಲ್ ಟೂರ್ನಿ ಬಳಿಕ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ವಿದಾಯದ ಸ್ಪಷ್ಟತೆ ಸಿಗಲಿದೆ ಎಂದು  ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಇತ್ತೀಚೆಗಷ್ಟೇ ಹೇಳಿದ್ದರು. ಇತ್ತ ಟೀಂ ಇಂಡಿಯಾದಿಂದ ದೂರ ಉಳಿದಿರುವ ಧೋನಿ ಶೀಘ್ರದಲ್ಲೇ ವಿದಾಯ ಹೇಳಲಿದ್ದಾರೆ ಅನ್ನೋ ಮಾಹಿತಿ ಕೇಳಿಬರುತ್ತಿದೆ. ಇದೀಗ ಧೋನಿ 2021ರ ಐಪಿಎಲ್ ಟೂರ್ನಿ ಆಡಿ ವಿದಾಯ ಹೇಳಲಿದ್ದಾರೆ ಅನ್ನೋ ಮಾಹಿತಿ ಹೊರಬಿದ್ದಿದೆ.

ಇದನ್ನೂ ಓದಿ: ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ಧೋನಿ..!

Tap to resize

Latest Videos

ಧೋನಿ ಈಗಾಗಲೇ ಫ್ರಾಂಚೈಸಿ  ಮಾಲೀಕರಲ್ಲಿ ತಾನು 2021ರ ಐಪಿಎಲ್ ಟೂರ್ನಿ ಆಡುವುದಾಗಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 2020 ಹಾಗೂ 2021ರ ಐಪಿಎಲ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದಿದ್ದಾರೆ. ಆದರೆ ಟೀಂ ಇಂಡಿಯಾ ಪರ ಆಡೋ ಕುರಿತು ಯಾವುದೇ ಸುಳಿವು ಬಿಟ್ಟಕೊಟ್ಟಿಲ್ಲ.

ಇದನ್ನೂ ಓದಿ: ಧೋನಿ ನಿವೃತ್ತಿಗೆ ಮುಹೂರ್ತ ಫಿಕ್ಸ್ ಮಾಡಿದ ಕೋಚ್ ಶಾಸ್ತ್ರಿ!

2021ರಲ್ಲಿ ಬಹುತೇಕ ಎಲ್ಲಾ ಆಟಗಾರರು ಹರಾಜಿನಲ್ಲಿ ಪಾಲ್ಗೊಳ್ಳಬೇಕಿದೆ. 2021ರ ಐಪಿಎಲ್ ಟೂರ್ನಿ ಬಳಿಕ ಧೋನಿ ವಿದಾಯ ಹೇಳಲಿದ್ದಾರೆ ಅನ್ನೋ ಮಾತು ಕೇಳಿ ಬಂದಿದೆ. ಇತ್ತ ಬಿಸಿಸಿಐ ನೂತನ ಅಧ್ಯಕ್ಷ ಸೌರವ್ ಗಂಗೂಲಿ ಕೂಡ ಧೋನಿ ವಿದಾಯ ಕುರಿತು ಮೌನ ಮುರಿದಿದ್ದಾರೆ. ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ. ಆದರೆ ಶೀಘ್ರದಲ್ಲೇ ಧೋನಿ ಭವಿಷ್ಯದ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದಿದ್ದಾರೆ. 
 

click me!