India Tour of South Africa: ಅಜಿಂಕ್ಯ ರಹಾನೆ ಆಯ್ಕೆಯನ್ನು ಸಮರ್ಥಿಸಿಕೊಂಡ ಎಂಸ್‌ಕೆ ಪ್ರಸಾದ್‌

Suvarna News   | Asianet News
Published : Dec 10, 2021, 05:05 PM ISTUpdated : Dec 10, 2021, 05:15 PM IST
India Tour of South Africa: ಅಜಿಂಕ್ಯ ರಹಾನೆ ಆಯ್ಕೆಯನ್ನು ಸಮರ್ಥಿಸಿಕೊಂಡ ಎಂಸ್‌ಕೆ ಪ್ರಸಾದ್‌

ಸಾರಾಂಶ

* ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಅಜಿಂಕ್ಯ ರಹಾನೆ ಆಯ್ಕೆ ಸಮರ್ಥಿಸಿಕೊಂಡ ಎಂಎಸ್‌ಕೆ ಪ್ರಸಾದ್ * ವಿದೇಶಿ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ತೋರಿರುವ ರಹಾನೆ * ಸದ್ಯ ಫಾರ್ಮ್‌ ಸಮಸ್ಯೆ ಎದುರಿಸಿ ಉಪನಾಯಕತ್ವ ಕಳೆದುಕೊಂಡಿರುವ ರಹಾನೆ

ನವದೆಹಲಿ(ಡಿ.10): ನಿರಂತರ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಅಜಿಂಕ್ಯ ರಹಾನೆ (Ajinkya Rahane) ಈಗಾಗಲೇ ಟೆಸ್ಟ್ ತಂಡದ ಉಪನಾಯಕತ್ವವನ್ನು ಕಳೆದುಕೊಂಡಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ (India Tour of South Africa) ಆಯ್ಕೆಯಾದ 18 ಆಟಗಾರರ ಭಾರತ ತಂಡದಲ್ಲಿ (Indian Cricket Team) ರಹಾನೆ ಸ್ಥಾನ ಗಿಟ್ಟಿಸಿಕೊಂಡಿದ್ದು ಹಲವರ ಅಚ್ಚರಿಗೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಭಾರತ ಆಯ್ಕೆ ಸಮಿತಿಯ ಮಾಜಿ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್‌(MSK Prasad), ಅಜಿಂಕ್ಯ ರಹಾನೆ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ವಿದೇಶಿ ಪ್ರವಾಸದಲ್ಲಿ ಅನುಭವಿ ಆಟಗಾರರರು ಮಹತ್ವದ ಪಾತ್ರವನ್ನು ನಿಭಾಯಿಸಲಿದ್ದಾರೆ. ವಿದೇಶಿ ಪ್ರವಾಸದಲ್ಲಿ ಅಜಿಂಕ್ಯ ರಹಾನೆ ಉತ್ತಮ ಪ್ರದರ್ಶನ ತೋರಿದ್ದಾರೆ ಎಂದು ಪ್ರಸಾದ್‌ ಅಭಿಪ್ರಾಯಪಟ್ಟಿದ್ದಾರೆ. ಒಟ್ಟಾರೆಯಾಗಿ ಹೇಳಬೇಕೆಂದರೆ, ತಂಡದಲ್ಲಿ ಯುವ ಹಾಗೂ ಅನುಭವಿ ಆಟಗಾರರ ಮಿಶ್ರಣವಿದ್ದರೆ ಉತ್ತಮವಾಗಿರುತ್ತದೆ. 2013ರ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ರಹಾನೆ ಉತ್ತಮ ಪ್ರದರ್ಶನ ತೋರಿದ್ದಾರೆ. ಅದರಲ್ಲೂ ಅಜಿಂಕ್ಯ ರಹಾನೆ ವಿದೇಶಿ ನೆಲದಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ. ಅಜಿಂಕ್ಯ ರಹಾನೆ ಆಯ್ಕೆಯ ಬಗ್ಗೆ ಕೆಲವರು ಅಚ್ಚರಿ ವ್ಯಕ್ತಪಡಿಸಿದ್ದರು. ರಹಾನೆ ಅನುಭವವನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಸಮಿತಿ ಅವರಿಗೆ ಮಣೆ ಹಾಕಲಾಗಿದೆ ಎಂದು ಎಂಎಸ್‌ಕೆ ಪ್ರಸಾದ್‌ ಅಭಿಪ್ರಾಯಪಟ್ಟಿದ್ದಾರೆ. 

ಅಜಿಂಕ್ಯ ರಹಾನೆ ಟೆಸ್ಟ್ ಕ್ರಿಕೆಟ್‌ನಲ್ಲಿ ತವರಿನಾಚೆ 40ರ ಬ್ಯಾಟಿಂಗ್ ಸರಾಸರಿಯಲ್ಲಿ 3,000ಕ್ಕೂ ಅಧಿಕ ರನ್ ಬಾರಿಸಿದ್ದಾರೆ. ಇದೀಗ ತಂಡದಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಪೈಪೋಟಿ ಏರ್ಪಟ್ಟಿರುವುದು ಆಯ್ಕೆ ಸಮಿತಿಗೆ ಒಳ್ಳೆಯ ಚಾಲೆಂಜ್ ಆಗಿದೆ ಎಂದು ಆಯ್ಕೆ ಸಮಿತಿ ಮಾಜಿ ಅಧ್ಯಕ್ಷ ಪ್ರಸಾದ್ ತಿಳಿಸಿದ್ದಾರೆ. ಭಾರತ ತಂಡದಲ್ಲಿ ಸ್ಥಾನ ಪಡೆಯಲು ಹಲವು ಆಟಗಾರರ ನಡುವೆ ಆರೋಗ್ಯಯುತ ಪೈಪೋಟಿಯಿದೆ. ಎಷ್ಟು ಜನ ಅನುಭವಿ ಆಟಗಾರರಿಗೆ ವಿದೇಶಿ ಪ್ರವಾಸಕ್ಕೆ ಮಣೆ ಹಾಕಬೇಕು?, ಇನ್ನು ಯುವ ಆಟಗಾರರು ಎಷ್ಟಿರಬೇಕು ಎನ್ನುವುದನ್ನು ಗಮನದಲ್ಲಿಟ್ಟು ಆಯ್ಕೆ ಸಮಿತಿಯು ತಂಡವನ್ನು ಆಯ್ಕೆ ಮಾಡಬೇಕು ಎಂದು ಎಂಎಸ್‌ಕೆ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ICC Test Rankings ಪ್ರಕಟ; ಅಶ್ವಿನ್‌, ಅಜಾಜ್‌ ಪಟೇಲ್‌ಗೆ ಜಾಕ್‌ಪಾಟ್..!

ಇತ್ತೀಚೆಗಷ್ಟೇ ಮುಕ್ತಾಯವಾದ ನ್ಯೂಜಿಲೆಂಡ್‌ ವಿರುದ್ದದ ಮೊದಲ ಟೆಸ್ಟ್‌ ಪಂದ್ಯದಲ್ಲಿ ರಹಾನೆ ಉತ್ತಮ ಆರಂಭದ ಹೊರತಾಗಿಯೂ ದೊಡ್ಡ ಮೊತ್ತ ಪರಿವರ್ತಿಸುವಲ್ಲಿ ವಿಫಲರಾಗಿದ್ದರು. ಕಾನ್ಪುರದಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ರಹಾನೆ 35 ರನ್ ಬಾರಿಸಿದ್ದರು. ಇನ್ನು ಎರಡನೇ ಇನಿಂಗ್ಸ್‌ನಲ್ಲಿ 4 ರನ್‌ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇನ್ನು ಮುಂಬೈ ಟೆಸ್ಟ್‌ ಪಂದ್ಯಕ್ಕೂ ಮುನ್ನ ಗಾಯಗೊಂಡಿದ್ದರಿಂದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು.

India Tour of South Africa: ಬಲಿಷ್ಠ ಭಾರತ ತಂಡ ಪ್ರಕಟ, ಏಕದಿನ ತಂಡಕ್ಕೂ ರೋಹಿತ್ ಕ್ಯಾಪ್ಟನ್‌..!

ಅಜಿಂಕ್ಯ ರಹಾನೆ ಇದೀಗ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ಶ್ರೇಯಸ್ ಅಯ್ಯರ್ ಹಾಗೂ ಹನುಮ ವಿಹಾರಿ ಜತೆ ಪೈಪೋಟಿ ನಡೆಸಬೇಕಿದೆ. ಶ್ರೇಯಸ್ ಅಯ್ಯರ್ (Shreyas Iyer) ಪಾದಾರ್ಪಣೆ ಟೆಸ್ಟ್‌ ಪಂದ್ಯದಲ್ಲಿ ಶತಕ ಹಾಗೂ ಅರ್ಧಶತಕ ಬಾರಿಸಿ ಗಮನ ಸೆಳೆದಿದ್ದರು. ಇನ್ನು ಹನುಮ ವಿಹಾರಿ (Hanuma Vihari) ಭಾರತ 'ಎ' (India Á) ತಂಡದ ಪರ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ಕಮ್‌ಬ್ಯಾಕ್‌ ಮಾಡಿದ್ದಾರೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟೆಸ್ಟ್‌ ಸರಣಿಯ ಮೊದಲ ಪಂದ್ಯ ಡಿಸೆಂಬರ್ 26ರಿಂದ ಆರಂಭವಾಗಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸೌತ್ ಆಫ್ರಿಕಾ ವಿರುದ್ದ 3ನೇ ಟಿ20 ಗೆದ್ದ ಟೀಂ ಇಂಡಿಯಾ, ಸರಣಿಯಲ್ಲಿ 2-1 ಮುನ್ನಡೆ
U19 ಏಷ್ಯಾಕಪ್, 150 ರನ್‌ಗೆ ಪಾಕಿಸ್ತಾನ ಆಲೌಟ್ ಮಾಡಿದ ಟೀಂ ಇಂಡಿಯಾಗೆ 90 ರನ್ ಗೆಲುವು