
ಮುಂಬೈ(ಅ.24): ಭಾರತೀಯ ದೇಸಿ ಕ್ರಿಕೆಟ್‌ನ ತಾರಾ ಆಲ್ರೌಂಡರ್‌ಗಳಲ್ಲಿ ಒಬ್ಬರೆನಿಸಿದ್ದ ಮುಂಬೈನ ಅಭಿಷೇಕ್ ನಾಯರ್, ಬುಧವಾರ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಪಡೆದರು.
2009ರಲ್ಲಿ ಧೋನಿ ನಾಯಕತ್ವದಲ್ಲಿ ಭಾರತ ಪರ 3 ಏಕದಿನ ಪಂದ್ಯಗಳನ್ನಾಡಿದ್ದ ಅಭಿಷೇಕ್, ಹಲವು ವರ್ಷಗಳ ಕಾಲ ರಣಜಿ ಟ್ರೋಫಿಯಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸಿದ್ದರು. 103 ಪ್ರಥಮ ದರ್ಜೆ ಪಂದ್ಯಗಳಲ್ಲಿ 5749 ರನ್ ಗಳಿಸಿರುವ ಅಭಿಷೇಕ್, 13 ಶತಕ ಹಾಗೂ 32 ಅರ್ಧಶತಕಗಳನ್ನು ದಾಖಲಿಸಿದ್ದರು. ಮುಂಬೈ 5 ಬಾರಿ ರಣಜಿ ಟ್ರೋಫಿ ಗೆಲುವಿನಲ್ಲಿ ನಾಯರ್ ಪ್ರಮುಖ ಪಾತ್ರವಹಿಸಿದ್ದರು.
ಬಾಂಗ್ಲಾ ಸರಣಿಗೆ ಧೋನಿ, ಕೊಹ್ಲಿ ಆಯ್ಕೆ ಡೌಟ್?
ಇತ್ತೀಚೆಗೆ ಕ್ರಿಕೆಟ್ ಸಲಹೆಗಾರರಾಗಿ ಕಾರ್ಯನಿರ್ವಹಿಸಲು ಆರಂಭಿಸಿದ ಅಭಿಷೇಕ್, ದಿನೇಶ್ ಕಾರ್ತಿಕ್, ಶ್ರೇಯಸ್ ಅಯ್ಯರ್ ಸೇರಿದಂತೆ ಹಲವು ಆಟಗಾರರಿಗೆ ಟೀಂ ಇಂಡಿಯಾಗೆ ಕಮ್’ಬ್ಯಾಕ್ ಮಾಡಲು ನೆರವಾಗಿದ್ದಾರೆ. ಕಳೆದ ಆವೃತ್ತಿಯ ಐಪಿಎಲ್ನಲ್ಲಿ ಕೆಕೆಆರ್ ತಂಡದ ಮೆಂಟರ್ ಆಗಿಯೂ ಅವರು ಕೆಲಸ ಮಾಡಿದ್ದರು.
INDvSA ಟೆಸ್ಟ್ ಸರಣಿಯಲ್ಲಿ ನಿರ್ಮಾಣವಾಯ್ತು ಹಲವು ದಾಖಲೆ!
ನಾನು ಸಂಪುರ್ಣ ಸಂತುಷ್ಟನಾಗಿದ್ದೇನೆ. ನಾನಿರುವ ಸ್ಥಾನ ತಲುಪಲು ಸಾಕಷ್ಟು ಕ್ರಿಕೆಟಿಗರು ಪರದಾಡುತ್ತಿದ್ದಾರೆ. ಇಷ್ಟು ದೀರ್ಘಕಾಲ ಕ್ರಿಕೆಟ್ ಆಡಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ. ನಾನು ಖುಷಿಯಿಂದಲೇ ಕ್ರಿಕೆಟ್’ಗೆ ವಿದಾಯ ಹೇಳುತ್ತಿದ್ದೇನೆಂದು ನಿವೃತ್ತಿ ಬಳಿಕ ನಾಯರ್ ಪ್ರತಿಕ್ರಿಯಿಸಿದ್ದಾರೆ.
ಅಭಿಷೇಕ್ ನಾಯರ್ ವಿದಾಯಕ್ಕೆ ಹಲವು ಹಿರಿ-ಕಿರಿಯ ಕ್ರಿಕೆಟಿಗರು ಶುಭಕೋರಿದ್ದಾರೆ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.