ಸದ್ಯ ಮುಂಬೈ ಇಂಡಿಯನ್ಸ್ ತಂಡವು ಆಡಿದ 12 ಪಂದ್ಯಗಳಲ್ಲಿ ಕೇವಲ 4 ಗೆಲುವು ಹಾಗೂ 8 ಸೋಲುಗಳ ಸಹಿತ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಈಗಾಗಲೇ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ಇಂಡಿಯನ್ಸ್ ತಂಡವು ಇನ್ನೆರಡು ಪಂದ್ಯಗಳನ್ನು ಪ್ರತಿಷ್ಠೆಗಾಗಿ ಆಡಬೇಕಿದೆ.
ಹೈದರಾಬಾದ್(ಮೇ.09): ಲಖನೌ ಸೂಪರ್ ಜೈಂಟ್ಸ್ ಎದುರು ಸನ್‌ರೈಸರ್ಸ್ ಹೈದರಾಬಾದ್ ತಂಡವು ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆಯೇ 5 ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವು ಅಧಿಕೃತವಾಗಿ 17ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿದೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡವು ಇದೀಗ ಮೊದಲ ತಂಡವಾಗಿ 2024ನೇ ಸಾಲಿನ ಐಪಿಎಲ್ ಟೂರ್ನಿಯಿಂದ ಅಧಿಕೃತವಾಗಿ ಹೊರಬಿದ್ದ ತಂಡ ಎನ್ನುವ ಕುಖ್ಯಾತಿಗೆ ಪಾತ್ರವಾಗಿದೆ.
ಇನ್ನು ಇದೆಲ್ಲದರ ನಡುವೆ ಮುಂಬೈ ಇಂಡಿಯನ್ಸ್ ತಂಡದ ಕೆಲವು ಹಿರಿಯ ಆಟಗಾರರು ಹಾರ್ದಿಕ್ ಪಾಂಡ್ಯ ಅವರ ನಾಯಕತ್ವದ ಬಗ್ಗೆ ಅಸಾಮಾಧಾನ ಹೊರಹಾಕಿದ್ದಾರೆ ಎಂದು ವರದಿಯಾಗಿದೆ. ಮುಂಬೈ ಇಂಡಿಯನ್ಸ್ ತಂಡವು ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ ಹಾಗೂ ಸೂರ್ಯಕುಮಾರ್ ಯಾದವ್ ಒಂದು ಕಡೆ ಸೇರಿ ಮೀಟಿಂಗ್ ನಡೆಸಿದ್ದು, ತಂಡದ ಸೋಲಿನ ಬಗ್ಗೆ ಪರಾಮರ್ಶೆ ನಡೆಸಿದ್ದಾರೆ ಎಂದು ಇಂಡಿಯನ್ಸ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.
ಟಿ20 ವಿಶ್ವಕಪ್‌ನಲ್ಲೂ ಅಬ್ಬರಿಸಲು ಸೂರ್ಯಕುಮಾರ್ ಯಾದವ್ ಮಾಸ್ಟರ್ ಪ್ಲ್ಯಾನ್..!
ರೋಹಿತ್ ಶರ್ಮಾ ಬರೋಬ್ಬರಿ ಒಂದು ದಶಕಗಳ ಕಾಲ ಐಪಿಎಲ್ ಟೂರ್ನಿಯಲ್ಲಿ ನಾಯಕನಾಗಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸಿದ್ದರು. ರೋಹಿತ್ ಶರ್ಮಾ ನಾಯಕತ್ವದಲ್ಲೇ ಮುಂಬೈ ಇಂಡಿಯನ್ಸ್ ತಂಡವು ದಾಖಲೆಯ 5 ಬಾರಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆದರೆ 17ನೇ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ದಿಢೀರ್ ಎನ್ನುವಂತೆ ಹಾರ್ದಿಕ್ ಪಾಂಡ್ಯ ಅವರನ್ನು ಗುಜರಾತ್ ಟೈಟಾನ್ಸ್ ತಂಡದಿಂದ ಕರೆ ತಂದು, ಮುಂಬೈ ತಂಡದ ನಾಯಕ ಪಟ್ಟ ಕಟ್ಟಿತು. ಇದರ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದಲ್ಲಿ ರೋಹಿತ್ ಶರ್ಮಾ ಬಣ ಹಾಗೂ ಹಾರ್ದಿಕ್ ಪಾಂಡ್ಯ ಬಣಗಳಾಗಿ ಬದಲಾಗಿವೆ ಎಂದು ವರದಿಯಾಗಿತ್ತು. ಸಾಲದೆನ್ನುವಂತೆ ತಂಡದ ಹೀನಾಯ ಪ್ರದರ್ಶನ ಅಭಿಮಾನಿಗಳಿಗೂ ನಿರಾಸೆ ಮೂಡಿಸಿದೆ.
ಲಖನೌ ಹೀನಾಯವಾಗಿ ಸೋಲುತ್ತಿದ್ದಂತೆಯೇ ಕೆ ಎಲ್ ರಾಹುಲ್ ಮೇಲೆ ಸಂಜೀವ್ ಗೋಯೆಂಕಾ ಸಿಡಿಮಿಡಿ.! ವಿಡಿಯೋ ವೈರಲ್
ಸದ್ಯ ಮುಂಬೈ ಇಂಡಿಯನ್ಸ್ ತಂಡವು ಆಡಿದ 12 ಪಂದ್ಯಗಳಲ್ಲಿ ಕೇವಲ 4 ಗೆಲುವು ಹಾಗೂ 8 ಸೋಲುಗಳ ಸಹಿತ 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಈಗಾಗಲೇ ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿರುವ ಮುಂಬೈ ಇಂಡಿಯನ್ಸ್ ತಂಡವು ಇನ್ನೆರಡು ಪಂದ್ಯಗಳನ್ನು ಪ್ರತಿಷ್ಠೆಗಾಗಿ ಆಡಬೇಕಿದೆ. ಮುಂಬರುವ ಆವೃತ್ತಿಯ ಐಪಿಎಲ್ ಟೂರ್ನಿಗೂ ಮುನ್ನ ಫ್ರಾಂಚೈಸಿಯು ಯಾವ ತೀರ್ಮಾನಗಳನ್ನು ತೆಗೆದುಕೊಳ್ಳಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.