ಹ್ಯಾಟ್ರಿಕ್ ಸೋಲಿನ ಭೀತಿಯಲ್ಲಿರುವ ಮುಂಬೈಗಿಂದು ರಾಜಸ್ಥಾನ ರಾಯಲ್ಸ್ ಸವಾಲು..!

By Naveen Kodase  |  First Published Apr 1, 2024, 1:14 PM IST

ಆರಂಭಿಕ 2 ಪಂದ್ಯಗಳಲ್ಲಿ ತಂಡ ಎಲ್ಲಾ ವಿಭಾಗದಲ್ಲೂ ವಿಫಲವಾಗಿದ್ದು, ನಾಯಕತ್ವದ ವಿಚಾರದಲ್ಲೂ ತಂಡದಲ್ಲಿ ಬಣಗಳು ಸೃಷ್ಟಿಯಾಗಿರುವ ಬಗ್ಗೆ ವರದಿಯಾಗುತ್ತಿದೆ. ಹೀಗಾಗಿ ಎಲ್ಲಾ ಸಮಸ್ಯೆಗಳನ್ನು ಮೆಟ್ಟಿನಿಂತು, ಒಗ್ಗಟ್ಟಾಗಿ ಪಂದ್ಯ ಗೆಲ್ಲಬೇಕಾದ ಒತ್ತಡ ಮುಂಬೈಗಿದೆ.


ಮುಂಬೈ(ಏ.01): ತಂಡದ ಸೋಲಿಗಿಂತಲೂ ಹೆಚ್ಚಾಗಿ ತಮ್ಮ ನಾಯ ಕತ್ವದ ವಿಚಾರದಲ್ಲಿ ಭಾರಿ ಟೀಕೆಗೊಳಗಾಗುತ್ತಿರುವ ಮುಂಬೈ ನಾಯಕ ಹಾರ್ದಿಕ್‌ಗೆ ಮತ್ತೊಂದು ಅಗ್ನಿಪರೀಕ್ಷೆ ಎದುರಾಗಲಿದೆ. ಮುಂಬೈ ತಂಡ ಸೋಮವಾರ ರಾಜಸ್ಥಾನ ವಿರುದ್ಧ ಸೆಣಸಾಡಲಿದ್ದು, ಹ್ಯಾಟ್ರಿಕ್ ಸೋಲು ತಪ್ಪಿಸಿ ಮೊದಲ ಗೆಲುವು ದಾಖಲಿಸಲು ಎದುರು ನೋಡುತ್ತಿದೆ. ಅತ್ತ ರಾಜಸ್ಥಾನ ಸತತ 3ನೇ ಗೆಲುವಿನ ಕಾತರದಲ್ಲಿದೆ.

ಆರಂಭಿಕ 2 ಪಂದ್ಯಗಳಲ್ಲಿ ತಂಡ ಎಲ್ಲಾ ವಿಭಾಗದಲ್ಲೂ ವಿಫಲವಾಗಿದ್ದು, ನಾಯಕತ್ವದ ವಿಚಾರದಲ್ಲೂ ತಂಡದಲ್ಲಿ ಬಣಗಳು ಸೃಷ್ಟಿಯಾಗಿರುವ ಬಗ್ಗೆ ವರದಿಯಾಗುತ್ತಿದೆ. ಹೀಗಾಗಿ ಎಲ್ಲಾ ಸಮಸ್ಯೆಗಳನ್ನು ಮೆಟ್ಟಿನಿಂತು, ಒಗ್ಗಟ್ಟಾಗಿ ಪಂದ್ಯ ಗೆಲ್ಲಬೇಕಾದ ಒತ್ತಡ ಮುಂಬೈಗಿದೆ. ಮುಂಬೈ ಇಂಡಿಯನ್ಸ್ ಬೃಹತ್ ಮೊತ್ತ ಕಲೆಹಾಕಬೇಕಿದ್ದರೆ ರೋಹಿತ್ ಶರ್ಮಾ ಜತೆಗೆ ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ ಹಾಗೂ ಟಿಮ್ ಡೇವಿಡ್ ಜವಾಬ್ದಾರಿಯುತ ಆಟ ಆಡಬೇಕಿದೆ. ಇನ್ನೊಂದೆಡೆ ಅನುಭವಿ ಬೌಲರ್‌ಗಳಾದ ಜಸ್ಪ್ರೀತ್ ಬುಮ್ರಾ, ಪೀಯೂಸ್ ಚಾವ್ಲಾ ಜತೆಗೆ ಗೆರಾಲ್ಡ್ ಕೋಟ್ಜೀ ಮಿಂಚಬೇಕಿದೆ

Tap to resize

Latest Videos

ಪಾಕ್ ತಂಡಕ್ಕೆ ಮತ್ತೆ ಬಾಬರ್ ಅಜಂ ನಾಯಕ: ಕೇವಲ ಒಂದು ಸರಣಿ ಸೋಲಿನ ಬೆನ್ನಲ್ಲೇ ಕ್ಯಾಪ್ಟನ್ಸಿ ಕಳೆದುಕೊಂಡ ಅಫ್ರಿದಿ

ಅತ್ತ ರಾಜಸ್ಥಾನ ತಂಡ ಲಖನ್ ಸೂಪರ್ ಜೈಂಟ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸಿದ್ದು, ಜಯದ ಓಟ ಮುಂದುವರಿಸುವ ನಿರೀಕ್ಷೆಯಲ್ಲಿದೆ. ಯಶಸ್ವಿ ಜೈಸ್ವಾಲ್ ಒಳ್ಳೆಯ ಲಯದಲ್ಲಿದ್ದು, ಇಂದು ಜೋಸ್ ಬಟ್ಲರ್ ಕೂಡಾ ಅಬ್ಬರಿಸುವ ನಿರೀಕ್ಷೆಯಲ್ಲಿದ್ದಾರೆ. ಇದರ ಜತೆಗೆ ಸಂಜು ಸ್ಯಾಮ್ಸನ್ ತಮ್ಮ ಸ್ಥಿರ ಪ್ರದರ್ಶನ ಮುಂದುವರೆಸಿಕೊಂಡು ಹೋಗುವ ವಿಶ್ವಾಸದಲ್ಲಿದ್ದಾರೆ. ರಿಯಾನ್ ಪರಾಗ್ ಅವರ ಫಾರ್ಮ್ ಎದುರಾಳಿ ಪಾಳಯದಲ್ಲಿ ನಡುಕ ಹುಟ್ಟಿಸುವ ಸಾಧ್ಯತೆಯಿದೆ

ಇನ್ನು ಟ್ರೆಂಟ್ ಬೌಲ್ಟ್, ಆವೇಶ್ ಖಾನ್, ಸಂದೀಪ್ ಶರ್ಮಾ ಜತೆಗೆ ಸ್ಪಿನ್ನರ್‌ಗಳಾದ ರವಿಚಂದ್ರನ್ ಅಶ್ವಿನ್ ಹಾಗೂ ಯುಜುವೇಂದ್ರ ಚಹಲ್, ಮುಂಬೈ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.

ಮಯಾಂಕ್ ಬೆಂಕಿಯುಗುಳುವ ಚೆಂಡಿನ ಬಗ್ಗೆ ಸ್ಟೀವ್‌ ಸ್ಮಿತ್‌ಗೆ ವಾರ್ನಿಂಗ್ ಕೊಟ್ಟ ಸ್ಟುವರ್ಟ್ ಬ್ರಾಡ್..!

ಸಂಭವನೀಯ ಆಟಗಾರರ ಪಟ್ಟಿ

ಮುಂಬೈ ಇಂಡಿಯನ್ಸ್: ಇಶಾನ್ ಕಿಶಾನ್, ರೋಹಿತ್ ಶರ್ಮಾ, ತಿಲಕ್ ವರ್ಮಾ, ನಮನ್, ಹಾರ್ದಿಕ್ ಪಾಂಡ್ಯ (ನಾಯಕ), ಟಿಮ್ ಡೇವಿಡ್, ಗೆರಾಲ್ಡ್ ಕೋಟ್ಜಿ, ಶಮ್ಸ್ ಮುಲಾನಿ, ಪೀಯೂಸ್ ಚಾವ್ಹಾ, ಜಸ್ಪ್ರೀತ್ ಬುಮ್ರಾ, ಮಫಾಕ.

ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮನ್ (ನಾಯಕ), ರಿಯಾನ್ ಪರಾಗ್, ಶಿಮ್ರೋನ್ ಹೆಟೇಯರ್, ಧೃವ್ ಜುರೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಡ್, ಯುಜುವೇಂದ್ರ ಚಹಲ್, ಸಂದೀಪ್ ಶರ್ಮಾ, ಆವೇಶ್ ಖಾನ್.

ಪಂದ್ಯ: ಸಂಜೆ. 7:30ಕ್ಕೆ
ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಸಿನಿಮಾ

click me!