ಭಾರತ-ನ್ಯೂಜಿಲೆಂಡ್ ನಡುವಿನ ಮುಂಬೈ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಾಮ್ ಲೇಥಮ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟಾಮ್ ಲೇಥಮ್ ನೇತೃತ್ವದ ನ್ಯೂಜಿಲೆಂಡ್ ತಂಡವು ಈಗಾಗಲೇ ಮೊದಲೆರಡು ಟೆಸ್ಟ್ ಪಂದ್ಯಗಳನ್ನು ಜಯಿಸುವ ಮೂಲಕ ಟೆಸ್ಟ್ ಸರಣಿ ಕೈವಶ ಮಾಡಿಕೊಂಡಿದೆ. ಆದರೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ದೃಷ್ಟಿಕೋನದಿಂದ ಭಾರತ ತಂಡಕ್ಕೆ ಕೊನೆಯ ಟೆಸ್ಟ್ ಪಂದ್ಯವು ಸಾಕಷ್ಟು ಮಹತ್ವದ್ದೆನಿಸಿದೆ.
ಭಾರತ-ಕಿವೀಸ್ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೆ ಇಲ್ಲಿನ ವಾಂಖೇಡೆ ಮೈದಾನ ಆತಿಥ್ಯ ವಹಿಸಿದೆ. ನಿರೀಕ್ಷೆಯಂತೆಯೇ ಮೂರನೇ ಟೆಸ್ಟ್ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಮುಂಬರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಬುಮ್ರಾಗೆ ವಿಶ್ರಾಂತಿ ನೀಡಲಾಗಿದೆ. ಬುಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ತಂಡ ಕೂಡಿಕೊಂಡಿದ್ದಾರೆ.
🚨 Toss Update 🚨
New Zealand elect to bat in the Third and Final Test in Mumbai.
Live - https://t.co/KNIvTEyxU7 | | pic.twitter.com/hTUgULtT43
undefined
ವೈಟ್‌ವಾಶ್ ಮುಖಭಂಗದಿಂದ ಪಾರಾಗುತ್ತಾ ಟೀಂ ಇಂಡಿಯಾ?
ಇನ್ನು ನ್ಯೂಜಿಲೆಂಡ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಕಳೆದ ಟೆಸ್ಟ್ ಪಂದ್ಯದ ಹೀರೋ ಮಿಚೆಲ್ ಸ್ಯಾಂಟ್ನರ್ ಹಾಗೂ ಟಿಮ್ ಸೌಥಿ ಹೊರಬಿದ್ದಿದ್ದು, ಇಶ್ ಸೋಧಿ ಹಾಗೂ ಮ್ಯಾಟ್ ಹೆನ್ರಿ ತಂಡ ಕೂಡಿಕೊಂಡಿದ್ದಾರೆ.
ಉಭಯ ತಂಡಗಳು ಹೀಗಿವೆ ನೋಡಿ:
ಭಾರತ:
ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ರಿಷಭ್ ಪಂತ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ವಾಷಿಂಗ್ಟನ್ ಸುಂದರ್, ಆಕಾಶ್‌ದೀಪ್, ಮೊಹಮ್ಮದ್ ಸಿರಾಜ್.
ನ್ಯೂಜಿಲೆಂಡ್:
ಟಾಮ್ ಲೇಥಮ್, ಡೆವೊನ್ ಕಾನ್‌ವೇ, ವಿಲ್ ಕಾನ್‌ವೇ, ರಚಿನ್ ರವೀಂದ್ರ, ಡೇರಲ್ ಮಿಚೆಲ್, ಟಾಮ್ ಬ್ಲಂಡೆಲ್, ಗ್ಲೆನ್ ಫಿಲಿಫ್ಸ್, ಇಶ್ ಸೋಧಿ, ಮ್ಯಾಟ್ ಹೆನ್ರಿ, ಅಜಾಜ್ ಪಟೇಲ್, ವಿಲಿಯಮ್ ಓ ರೂರ್ಕೆ.
ಪಂದ್ಯ ಆರಂಭ: ಬೆಳಗ್ಗೆ 9.30ಕ್ಕೆ,
ನೇರಪ್ರಸಾರ: ಸ್ಪೋರ್ಟ್ಸ್18 ಚಾನೆಲ್, ಜಿಯೋ ಸಿನಿಮಾ ಆ್ಯಪ್.