ಮೋದಿ ಸ್ಟೇಡಿಯಂ ಖಾಲಿ-ಖಾಲಿ, 'ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ 22 ಆಟಗಾರರು, 2 ಅಂಪೈರ್, 17 ಪ್ರೇಕ್ಷಕರು'..!

Published : Oct 05, 2023, 04:35 PM ISTUpdated : Oct 06, 2023, 05:54 PM IST
ಮೋದಿ ಸ್ಟೇಡಿಯಂ ಖಾಲಿ-ಖಾಲಿ, 'ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ 22 ಆಟಗಾರರು, 2 ಅಂಪೈರ್, 17 ಪ್ರೇಕ್ಷಕರು'..!

ಸಾರಾಂಶ

ಈ ರೀತಿ ಐಸಿಸಿ ಉದ್ಘಾಟನಾ ಪಂದ್ಯಕ್ಕೆ ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿರುವುದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಹಲವು ಹಿರಿಕಿರಿಯ ಕ್ರಿಕೆಟಿಗರು ಹಾಗೂ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದು ಮಾತ್ರವಲ್ಲದೇ ಆಯೋಜಕರನ್ನು ಟ್ರೋಲ್ ಮಾಡಿದ್ದಾರೆ. ಈ ಮೊದಲು ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದ ಟಿಕೆಟ್‌ಗಳು ಸಂಪೂರ್ಣವಾಗಿ ಸೋಲ್ಡೌಟ್ ಆಗಿವೆ ಎಂದೆಲ್ಲಾ ವರದಿಯಾಗಿತ್ತು. ಆದರೆ ವಾಸ್ತವ ಇದಕ್ಕೆ ವ್ಯತಿರಿಕ್ತ ಎನ್ನುವಂತಿದೆ. 

ಅಹಮದಾಬಾದ್‌(ಅ.05): 13ನೇ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದ್ದು, ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಕಾದಾಡುತ್ತಿವೆ. ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವು ಗೆಲುವಿನೊಂದಿಗೆ ಟೂರ್ನಿಯಲ್ಲಿ ಶುಭಾರಂಭ ಮಾಡಲು ಎದುರು ನೋಡುತ್ತಿದೆ. ಇನ್ನೊಂದೆಡೆ ನ್ಯೂಜಿಲೆಂಡ್ ತಂಡವು ಕಳೆದ ವಿಶ್ವಕಪ್ ಫೈನಲ್‌ನಲ್ಲಿ ಅನುಭವಿಸಿದ ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಇದೆಲ್ಲದರ ನಡುವೆ 2023ರ ಐಸಿಸಿ ಏಕದಿನ ವಿಶ್ವಕಪ್ ಉದ್ಘಾಟನಾ ಪಂದ್ಯವನ್ನು ಬಿಸಿಸಿಐ ಜಗತ್ತಿನ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂ ಎನಿಸಿಕೊಂಡಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜಿಸಿದೆ. ಈ ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಜನ ಮೊದಲ ಪಂದ್ಯವನ್ನು ವೀಕ್ಷಿಸಲು ಮೈದಾನಕ್ಕೆ ಬರಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ಪಂದ್ಯವನ್ನು ವೀಕ್ಷಿಸಲು ಮೈದಾನದ ಕಾಲು ಭಾಗವೂ ಭರ್ತಿಯಾಗದೇ ಇರುವುದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. 

ವಿಶ್ವಕಪ್ ಪಂದ್ಯ ವೀಕ್ಷಿಸಲು ಮೈದಾನಕ್ಕೆ ಬರುವ ಪ್ರೇಕ್ಷಕರಿಗೆ ಗುಡ್‌ ನ್ಯೂಸ್ ಕೊಟ್ಟ ಜಯ್ ಶಾ..!

ಈ ರೀತಿ ಐಸಿಸಿ ಉದ್ಘಾಟನಾ ಪಂದ್ಯಕ್ಕೆ ಪ್ರೇಕ್ಷಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿರುವುದಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಹಲವು ಹಿರಿಕಿರಿಯ ಕ್ರಿಕೆಟಿಗರು ಹಾಗೂ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದು ಮಾತ್ರವಲ್ಲದೇ ಆಯೋಜಕರನ್ನು ಟ್ರೋಲ್ ಮಾಡಿದ್ದಾರೆ. ಈ ಮೊದಲು ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದ ಟಿಕೆಟ್‌ಗಳು ಸಂಪೂರ್ಣವಾಗಿ ಸೋಲ್ಡೌಟ್ ಆಗಿವೆ ಎಂದೆಲ್ಲಾ ವರದಿಯಾಗಿತ್ತು. ಆದರೆ ವಾಸ್ತವ ಇದಕ್ಕೆ ವ್ಯತಿರಿಕ್ತ ಎನ್ನುವಂತಿದೆ. 

ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಡೇನಿಯಲ್ಲೇ ವ್ಯಾಟ್, ಪ್ರೇಕ್ಷಕರು ಎಲ್ಲಿ ಹೋದ್ರು ಎಂದು ಎಕ್ಸ್‌(ಟ್ವೀಟ್) ಮಾಡಿ ಅಚ್ಚರಿ ಹೊರಹಾಕಿದ್ದಾರೆ.

ರಾಜ್ಮಾ ಚಾವಲ್ ಎನ್ನುವ ನೆಟ್ಟಿಗರೊಬ್ಬರು, ಖಾಲಿ ಸ್ಟ್ಯಾಂಡ್‌ಗಳ ಮುಂದೆ ಐಸಿಸಿ ಏಕದಿನ ವಿಶ್ವಕಪ್ ಉದ್ಘಾಟನಾ ಪಂದ್ಯ. ಈ ಪಂದ್ಯದ ಟಿಕೆಟ್‌ಗಳೆಲ್ಲವೂ ಸೋಲ್ಡೌಟ್ ಆಗಿದ್ದವು ಅಲ್ಲವೇ? ನಿಜಕ್ಕೂ ಬೇಸರವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. 

ಇನ್ನು ಪಾಕಿಸ್ತಾನ ಮೂಲದ ಕ್ರಿಕೆಟ್ ಅಭಿಮಾನಿಯೊಬ್ಬ, "22 ಆಟಗಾರರು, ಎರಡು ಅಂಪೈರ್ ಮೈದಾನದಲ್ಲಿ ಹಾಗೂ 17 ಪ್ರೇಕ್ಷಕರ ಸಮ್ಮುಖದಲ್ಲಿ 2023ರ ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದ ಮೊದಲ ಎಸೆತ ಆರಂಭ" ಎಂದು ಟ್ರೋಲ್ ಮಾಡಿದ್ದಾರೆ.

ಇನ್ನಷ್ಟು ಸೋಷಿಯಲ್ ಮೀಡಿಯಾ ರಿಯಾಕ್ಷನ್‌ಗಳು ಹೀಗಿವೆ ನೋಡಿ:

ಉದ್ಘಾಟನಾ ಪಂದ್ಯಕ್ಕೆ ತಂಡದ ಆಟಗಾರರ ಪಟ್ಟಿ ಹೀಗಿದೆ ನೋಡಿ:

ಇಂಗ್ಲೆಂಡ್: ಜಾನಿ ಬೇರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್(ನಾಯಕ&ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರನ್, ಮೋಯಿನ್ ಅಲಿ ಕ್ರಿಸ್ ವೋಕ್ಸ್, ಮಾರ್ಕ್‌ ವುಡ್‌, ರಶೀದ್ ಖಾನ್.

ನ್ಯೂಜಿಲೆಂಡ್: ವಿಲ್ ಯಂಗ್, ಡೆವೊನ್ ಕಾನ್‌ವೇ, ಡ್ಯಾರೆಲ್ ಮಿಚೆಲ್, ಗ್ಲೆನ್ ಫಿಲಿಫ್ಸ್, ಟಾಮ್ ಲೇಥಮ್(ನಾಯಕ), ಮಾರ್ಕ್ ಚಾಂಪ್ಮನ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್.

ಪಂದ್ಯ ಆರಂಭ: ಮಧ್ಯಾಹ್ನ 2ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್‌, ಡಿಸ್ನಿ+ ಹಾಟ್‌ಸ್ಟಾರ್


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?