
ನವದೆಹಲಿ[ನ.08]: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾ, ಬಿಸಿಸಿಐಗೆ ಪತ್ರ ಬರೆದಿದ್ದು 2020ರ ಆವೃತ್ತಿಯಿಂದ ಪ್ರತಿ ಐಪಿಎಲ್ ಪಂದ್ಯಕ್ಕೂ ಮುನ್ನ ಭಾರತದ ರಾಷ್ಟ್ರ ಗೀತೆಯನ್ನು ಹಾಡುವಂತೆ ಕೋರಿದ್ದಾರೆ.
ಐಪಿಎಲ್ ಹರಾಜು: ಕೋಲ್ಕತಾದಲ್ಲಿ ಆಟಗಾರರ ಖರೀದಿಗೆ ಡೇಟ್ ಫೈನಲ್
‘ಅಂತಾರಾಷ್ಟ್ರೀಯ ಪಂದ್ಯ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡಲಾಗುತ್ತದೆ. ವಿಶ್ವ ದ ನಂ.1 ಕ್ರಿಕೆಟ್ ಲೀಗ್’ನಲ್ಲೂ ಈ ಪದ್ಧತಿ ಆರಂಭಿಸಬೇಕು, ಎನ್ ಬಿಎ (ಅಮೆರಿಕದ ಬಾಸ್ಕೆಟ್ ಬಾಲ್ ಲೀಗ್)ನಲ್ಲೂ ಪ್ರತಿ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ಇರಲಿದೆ’ ಎಂದು ವಾಡಿಯಾ ಮನವಿ ಸಲ್ಲಿಸಿದಾರೆ.
ತಂಡದಲ್ಲಿ ಮಹತ್ತರ ಬದಲಾವಣೆ ಇದೆ ಎಂದ CSK !
ಐಪಿಎಲ್’ನಲ್ಲಿ ಸಾಮಾನ್ಯವಾಗಿ ಉದ್ಘಾಟನಾ ಪಂದ್ಯದಲ್ಲಿ ಮಾತ್ರ ರಾಷ್ಟ್ರಗೀತೆಯನ್ನು ಹಾಡಲಾಗುತ್ತದೆ. ಆದರೆ ಈ ಬಾರಿಯಿಂದ ಪ್ರತಿ ಪಂದ್ಯ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡುವಂತೆ ಮನವಿ ಮಾಡಿದ್ದಾರೆ. ಬಹುನಿರೀಕ್ಷಿತ 2020ನೇ ಸಾಲಿನ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ ಡಿಸೆಂಬರ್ 19ರಂದು ನಡೆಯಲಿದ್ದು, ಫ್ರಾಂಚೈಸಿಗಳು ತಮ್ಮ ನೆಚ್ಚಿನ ಆಟಗಾರರನ್ನು ಖರೀದಿಸಲು ಚಿತ್ತ ನೆಟ್ಟಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.