ರವಿಶಾಸ್ತ್ರಿ ಬದಲಿಗೆ ದ್ರಾವಿಡ್‌ರನ್ನೇ ಕೋಚ್‌ ಮಾಡಿ: ಜೋರಾಯ್ತು ನೆಟ್ಟಿಗರ ಆಗ್ರಹ

Suvarna News   | Asianet News
Published : May 20, 2021, 05:58 PM IST
ರವಿಶಾಸ್ತ್ರಿ ಬದಲಿಗೆ ದ್ರಾವಿಡ್‌ರನ್ನೇ ಕೋಚ್‌ ಮಾಡಿ: ಜೋರಾಯ್ತು ನೆಟ್ಟಿಗರ ಆಗ್ರಹ

ಸಾರಾಂಶ

* ಲಂಕಾ ಸರಣಿಗೆ ಟೀಂ ಇಂಡಿಯಾ ಕೋಚ್‌ ರಾಹುಲ್ ದ್ರಾವಿಡ್‌ * ರಾಹುಲ್ ದ್ರಾವಿಡ್‌ ಆಯ್ಕೆಯನ್ನು ಸ್ವಾಗತಿಸಿದ ಕ್ರಿಕೆಟ್ ಅಭಿಮಾನಿಗಳು * ರವಿಶಾಸ್ತ್ರಿ ಬದಲಿಗೆ ರಾಹುಲ್‌ ದ್ರಾವಿಡ್‌ ಅವರನ್ನೇ ಶಾಶ್ವತ ಕೋಚ್ ಆಗಿ ನೇಮಿಸಿ ಎಂದು ನೆಟ್ಟಿಗರ ಆಗ್ರಹ

ಬೆಂಗಳೂರು(ಮೇ.20): ಭಾರತ ಕ್ರಿಕೆಟ್ ತಂಡವು ಜುಲೈ ತಿಂಗಳಿನಲ್ಲಿ ಸೀಮಿತ ಓವರ್‌ಗಳ ಸರಣಿಯನ್ನಾಡಲು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ರವಿಶಾಸ್ತ್ರಿ ಅನುಪಸ್ಥಿತಿಯಲ್ಲಿ ರಾಹುಲ್ ದ್ರಾವಿಡ್‌ ಟೀಂ ಇಂಡಿಯಾ ಮುಖ್ಯಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. 

ಲಂಕಾ ಸರಣಿಗೆ ರಾಹುಲ್‌ ದ್ರಾವಿಡ್ ಕೋಚ್‌ ಆಗಲಿದ್ದಾರೆ ಎನ್ನುವ ಮಾಹಿತಿ ಹೊರಬೀಳುತ್ತಿದ್ದಂತೆಯೇ ನೆಟ್ಟಿಗರು ಈ ವಿಚಾರವನ್ನು ಹಬ್ಬದಂತೆ ಸಂಭ್ರಮಿಸಲಾರಂಭಿಸಿದ್ದಾರೆ. ಲಂಕಾ ಸರಣಿಗೆ ದ್ರಾವಿಡ್‌ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಎಎನ್‌ಐಗೆ ಖಚಿತಪಡಿಸಿವೆ. ಬಿಸಿಸಿಐ ಇನ್ನೂ ಅಧಿಕೃತ ಪ್ರಕಟಣೆ ಹೊರಡಿಸಿರದಿದ್ದರೂ ಸಹಾ ನೆಟ್ಟಿಗರು ಈಗಿನಿಂದಲೇ ರಾಹುಲ್‌ ದ್ರಾವಿಡ್‌ ಅವರನ್ನು ಟೀಂ ಇಂಡಿಯಾ ಶಾಶ್ವತ ಕೋಚ್‌ ಅನ್ನಾಗಿ ನೇಮಿಸಿ ಎಂದು ಆಗ್ರಹಿಸಿದ್ದಾರೆ.

ಲಂಕಾ ಪ್ರವಾಸಕ್ಕೆ ಟೀಂ ಇಂಡಿಯಾ ಕೋಚ್‌ ಆಗಿ ರಾಹುಲ್‌ ದ್ರಾವಿಡ್‌ ಆಯ್ಕೆ
 
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ಇಂಗ್ಲೆಂಡ್‌ ಪ್ರವಾಸದಲ್ಲಿದ್ದಾಗಲೇ, ಭಾರತದ ಮತ್ತೊಂದು ತಂಡ ಜುಲೈನಲ್ಲಿ ಶ್ರೀಲಂಕಾ ವಿರುದ್ದ 3 ಪಂದ್ಯಗಳ ಏಕದಿನ ಸರಣಿ ಹಾಗೂ 3 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ. ದ ವಾಲ್‌ ಖ್ಯಾತಿಯ ರಾಹುಲ್ ದ್ರಾವಿಡ್‌ ಟೀಂ ಇಂಡಿಯಾ ತಾತ್ಕಾಲಿಕ ಕೋಚ್‌ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎನ್ನುವ ಮಾಹಿತಿ ಹೊರಬೀಳುತ್ತಿದ್ದಂತೆಯೇ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಕುಣಿದು ಕುಪ್ಪಳಿಸಿದ್ದಾರೆ. ಮಾತ್ರವಲ್ಲ ರಾಹುಲ್ ದ್ರಾವಿಡ್‌ ಅವರನ್ನೇ ಟೀಂ ಇಂಡಿಯಾದ ಶಾಶ್ವತ ಕೋಚ್ ಆಗಿ ನೇಮಕ ಮಾಡಿ ಎಂದು ಬಿಸಿಸಿಐಯನ್ನು ಒತ್ತಾಯಿಸಿದ್ದಾರೆ.
 

ಇದೇ ವೇಳೆ ಟೀಂ ಇಂಡಿಯಾ ಹೆಡ್‌ ಕೋಚ್‌ ರವಿಶಾಸ್ತ್ರಿಯನ್ನು ನೆಟ್ಟಿಗರು ಮತ್ತೊಮ್ಮೆ ಟ್ರೋಲ್ ಮಾಡಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆದ ಟಾಪ್ 6 ಆಟಗಾರರಿವರು!
ಐಪಿಎಲ್ ಮಿನಿ ಹರಾಜು: ಅನ್‌ಕ್ಯಾಪ್ಡ್‌ ಆಟಗಾರರಿಗೆ ಜಾಕ್‌ಪಾಟ್; 8 ಆಟಗಾರರನ್ನು ಖರೀದಿಸಿದ ಆರ್‌ಸಿಬಿ!