ಹಿಟ್‌ಮ್ಯಾನ್‌ ರೋಹಿತ್ ಸೆಂಚುರಿ; ಜೈ ಹೋ ಎಂದ ಕ್ರಿಕೆಟ್‌ ಫ್ಯಾನ್ಸ್‌

Suvarna News   | Asianet News
Published : Feb 13, 2021, 02:09 PM IST
ಹಿಟ್‌ಮ್ಯಾನ್‌ ರೋಹಿತ್ ಸೆಂಚುರಿ; ಜೈ ಹೋ ಎಂದ ಕ್ರಿಕೆಟ್‌ ಫ್ಯಾನ್ಸ್‌

ಸಾರಾಂಶ

ಹಿಟ್‌ಮ್ಯಾನ್‌ ರೋಹಿತ್ ಶರ್ಮಾ ಇಂಗ್ಲೆಂಡ್‌ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಆಕರ್ಷಕ ಶತಕ ಸಿಡಿಸಿದ್ದಾರೆ. ರೋಹಿತ್‌ ಬ್ಯಾಟಿಂಗ್ ಕಂಡ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಯ ಮಹಾಪೂರವೇ ಹರಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಚೆನ್ನೈ(ಫೆ.13): ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್ ಶರ್ಮಾ ತಮ್ಮ ವೃತ್ತಿಜೀವನದ 7ನೇ ಟೆಸ್ಟ್‌ ಶತಕ ಬಾರಿಸಿ ಮಿಂಚಿದ್ದಾರೆ. ಇಂಗ್ಲೆಂಡ್‌ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯದಲ್ಲಿ ರೋಹಿತ್ ಕೇವಲ 130 ಎಸೆತಗಳನ್ನು ಎದುರಿಸಿ ಆಕರ್ಷಕ ಶತಕ ಬಾರಿಸಿ ಸಂಭ್ರಮಿಸಿದ್ದಾರೆ.

2019ರ ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ದ್ವಿಶತಕ ಚಚ್ಚಿದ್ದ ರೋಹಿತ್ ಶರ್ಮಾ ಅದಾದ ಬಳಿಕ 5 ಟೆಸ್ಟ್‌ ಪಂದ್ಯಗಳನ್ನಾಡಿದ್ದರೂ ಮೂರಂಕಿ ಮೊತ್ತ ದಾಖಲಿಸಿಲು ಹಿಟ್‌ಮ್ಯಾನ್‌ ವಿಫಲರಾಗಿದ್ದರು. ಇದರ ಬೆನ್ನಲ್ಲೇ ರೋಹಿತ್ ಮೇಲೆ ಟೀಕೆಗಳು ಆರಂಭವಾಗಿತ್ತು. ಆದರೆ ರೋಹಿತ್ ಶರ್ಮಾ ಇಂಗ್ಲೆಂಡ್‌ ವಿರುದ್ದದ ಎರಡನೇ ಟೆಸ್ಟ್‌ ಪಂದ್ಯದಲ್ಲಿ 14 ಬೌಂಡರಿ ಹಾಗೂ 2 ಆಕರ್ಷಕ ಸಿಕ್ಸರ್‌ಗಳ ನೆರವಿನಿಂದ ಮನಮೋಹಕ ಶತಕ ಬಾರಿಸಿದರು.

ಚೆನ್ನೈ ಟೆಸ್ಟ್‌: ಹಿಟ್‌ಮ್ಯಾನ್ ರೋಹಿತ್ ಶರ್ಮಾ ಆಕರ್ಷಕ ಶತಕ

ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿದ ಬಳಿಕ 4ನೇ ಟೆಸ್ಟ್ ಶತಕ ಪೂರೈಸಿದ ಸಾಧನೆ ಮಾಡಿದ್ದಾರೆ. ರೋಹಿತ್ ಶರ್ಮಾ ಅವರಿಂದ ಟೀಂ ಇಂಡಿಯಾ ಇದೀಗ ಮೊತ್ತವನ್ನು ನಿರೀಕ್ಷೆ ಮಾಡುತ್ತಿದೆ. ಮಹತ್ವದ ಟೆಸ್ಟ್ ಪಂದ್ಯದಲ್ಲಿ ಸಮಯೋಚಿತ ಶತಕ ಸಿಡಿಸಿದ ಹಿಟ್‌ಮ್ಯಾನ್‌ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿವೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಕಷ್ಟ ನಿವಾರಣೆಗೆ ಸಿಂಹಾಚಲಂ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವಿರಾಟ್ ಕೊಹ್ಲಿ
ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷ, ಚುನಾವಣಾ ಫಲಿತಾಂಶ ಪ್ರಕಟ