
New Zealand Announce ODI Squad for India Series: ಭಾರತದ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಏಕದಿನ ಸರಣಿಗೆ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ತಂಡವನ್ನು ಪ್ರಕಟಿಸಿದೆ. ಫಿನ್ ಅಲೆನ್, ಲಾಕಿ ಫರ್ಗುಸನ್ ಮತ್ತು ಟಿಮ್ ಸೀಫರ್ಟ್ ಏಕದಿನ ತಂಡಕ್ಕೆ ಮರಳಿದ್ದಾರೆ. ಗಾಯದ ಸಮಸ್ಯೆಯಿಂದಾಗಿ ಟಿ20 ಸರಣಿಯಿಂದ ಹೊರಗುಳಿದಿದ್ದ ಬೆಂಗಳೂರು ಮೂಲದ ಅಪಾಯಕಾರಿ ಬ್ಯಾಟರ್ ರಚಿನ್ ರವೀಂದ್ರ, ಮೊದಲ ಮೂರು ಏಕದಿನ ಪಂದ್ಯಗಳ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ನವೆಂಬರ್ 4ರಂದು ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ಸರಣಿ ಶುರುವಾಗಲಿದೆ. ವಿಶೇಷವೆಂದರೆ, ಮೊದಲ ಮೂರು ಹಾಗೂ ಕೊನೆಯ ಎರಡು ಪಂದ್ಯಗಳಿಗೆ ನ್ಯೂಜಿಲೆಂಡ್ ಎರಡು ಪ್ರತ್ಯೇಕ ತಂಡಗಳನ್ನು ಘೋಷಿಸಿದೆ.
ವೈಟ್ ಬಾಲ್ ಕ್ಯಾಪ್ಟನ್ ಮಿಚೆಲ್ ಸ್ಯಾಂಟ್ನರ್ ತಂಡವನ್ನು ಮುನ್ನಡೆಸಲಿದ್ದಾರೆ. ಕೊನೆಯ ಎರಡು ಏಕದಿನ ಪಂದ್ಯಗಳಿಗೆ ಏಳು ಹೊಸ ಆಟಗಾರರು ತಂಡ ಸೇರಿಕೊಳ್ಳಲಿದ್ದಾರೆ. ಮೊದಲ ಮೂರು ಪಂದ್ಯಗಳ ಬಳಿಕ ತಂಡದಿಂದ ಹೊರಬೀಳುವ ಆಟಗಾರರು ಟೆಸ್ಟ್ ತಂಡವನ್ನು ಸೇರಿಕೊಳ್ಳಲಿದ್ದಾರೆ. 2023ರ ಬಳಿಕ ಫಿನ್ ಅಲೆನ್ ಮತ್ತು ಲಾಕಿ ಫರ್ಗುಸನ್ ಏಕದಿನ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಫರ್ಗುಸನ್ ಕೊನೆಯದಾಗಿ ಮುಂಬೈನಲ್ಲಿ ನಡೆದ ಭಾರತದ ವಿರುದ್ಧದ ವಿಶ್ವಕಪ್ ಸೆಮಿಫೈನಲ್‌ನಲ್ಲಿ ಏಕದಿನ ಪಂದ್ಯ ಆಡಿದ್ದರು. ಟಿಮ್ ಸೀಫರ್ಟ್ 18 ತಿಂಗಳ ಹಿಂದೆ ಪಾಕಿಸ್ತಾನದ ವಿರುದ್ಧದ ತವರಿನ ಸರಣಿಯಲ್ಲಿ ಕೊನೆಯದಾಗಿ ಏಕದಿನ ಪಂದ್ಯ ಆಡಿದ್ದರು. ಈ ಮೂವರು ಆಟಗಾರರು ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ತಂಡವನ್ನು ಸೇರಿಕೊಳ್ಳಲಿದ್ದಾರೆ.
ಗಾಯದ ಸಮಸ್ಯೆಯಿಂದಾಗಿ ಝಾಕ್ ಫೌಲ್ಕ್ಸ್, ವಿಲಿಯಂ ಒ'ರೂರ್ಕೆ ಮತ್ತು ಬೆನ್ ಸಿಯರ್ಸ್ ಆಯ್ಕೆಗೆ ಲಭ್ಯರಿರಲಿಲ್ಲ. ನ್ಯೂಜಿಲೆಂಡ್ ಕಳೆದ ಜನವರಿಯಲ್ಲಿ ಭಾರತದಲ್ಲಿ ನಡೆದ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತ್ತು. ಆ ಸರಣಿಯಲ್ಲಿ ಆಡಿದ ಬಹುತೇಕ ಆಟಗಾರರು ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ.
ನ್ಯೂಜಿಲೆಂಡ್ ಹೆಡ್ ಕೋಚ್ ರಾಬ್ ವಾಲ್ಟರ್ ಮಾತನಾಡಿ, '2027ರಲ್ಲಿ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ಗೂ ಮುನ್ನ ತಂಡದ ಬಲವನ್ನು ಪರೀಕ್ಷಿಸಲು ಭಾರತದ ವಿರುದ್ಧದ ಈ ತವರಿನ ಸರಣಿ ನಮಗೆ ಉತ್ತಮ ಅವಕಾಶವಾಗಿದೆ' ಎಂದಿದ್ದಾರೆ.
ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ, ಜೇಕಬ್ ಡಫಿ, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ನಾಥನ್ ಸ್ಮಿತ್, ವಿಲ್ ಯಂಗ್, ಬ್ಲೇರ್ ಟಿಕ್ನರ್.
ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಕ್ರಿಶ್ಚಿಯನ್ ಕ್ಲಾರ್ಕ್, ಜೇಕಬ್ ಡಫಿ, ಮ್ಯಾಟ್ ಫಿಶರ್, ಲಾಕಿ ಫರ್ಗುಸನ್, ಮಿಚ್ ಹೇ (ವಿಕೆಟ್ ಕೀಪರ್), ನಿಕ್ ಕೆಲ್ಲಿ, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಬ್ಲೇರ್ ಟಿಕ್ನರ್, ವಿಲ್ ಯಂಗ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.