
ವೆಲ್ಲಿಂಗ್ಟನ್: ಭಾರತದ ವಿರುದ್ಧದ ಜನವರಿ 11ರಿಂದ ಆರಂಭವಾಗಲಿರುವ ಮೂರು ಪಂದ್ಯಗಳ ಏಕದಿನ ಮತ್ತು ಐದು ಪಂದ್ಯಗಳ ಟಿ20 ಸರಣಿಗಾಗಿ ನ್ಯೂಜಿಲೆಂಡ್ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಮಾಜಿ ನಾಯಕ ಕೇನ್ ವಿಲಿಯಮ್ಸನ್‌ರನ್ನು ಕೈಬಿಡಲಾಗಿದ್ದು, ನಾಯಕ ಮಿಚೆಲ್ ಸ್ಯಾಂಟ್ನರ್‌ಗೆ ಏಕದಿನ ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿದೆ. ಸ್ಯಾಂಟ್ನರ್ ಅನುಪಸ್ಥಿತಿಯಲ್ಲಿ, ಮೈಕಲ್ ಬ್ರೇಸ್‌ವೆಲ್ ಕಿವೀಸ್‌ನ ಏಕದಿನ ನಾಯಕರಾಗಿದ್ದಾರೆ.
ತಿರುವನಂತಪುರದ ಕಾರ್ಯವಟ್ಟಂ ಸೇರಿದಂತೆ ನಡೆಯಲಿರುವ ಐದು ಟಿ20 ಪಂದ್ಯಗಳ ಸರಣಿಯಲ್ಲಿ ಮಿಚೆಲ್ ಸ್ಯಾಂಟ್ನರ್ ಕಿವೀಸ್ ತಂಡವನ್ನು ಮುನ್ನಡೆಸಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ಟಿ20 ಆಡಿದ ತಂಡದಿಂದ ಟಿಮ್ ಸೀಫರ್ಟ್ ಮತ್ತು ನಾಥನ್ ಸ್ಮಿತ್ ಅವರನ್ನು ಕೈಬಿಡಲಾಗಿದ್ದು, ಬೆವೊನ್ ಜೇಕಬ್ಸ್, ಗ್ಲೆನ್ ಫಿಲಿಪ್ಸ್ ಮತ್ತು ಮ್ಯಾಟ್ ಹೆನ್ರಿ ಅವರನ್ನು ವಾಪಸ್ ಕರೆಯಲಾಗಿದೆ. ಟಿ20 ತಂಡದಲ್ಲಿ ಎಲ್ಲಾ ಪ್ರಮುಖ ಆಟಗಾರರಿದ್ದಾರೆ. ಮುಂದಿನ ವರ್ಷದ ಟಿ20 ವಿಶ್ವಕಪ್‌ಗೆ ಮುಂಚಿತವಾಗಿ ಭಾರತ ಮತ್ತು ನ್ಯೂಜಿಲೆಂಡ್‌ನ ಕೊನೆಯ ಟಿ20 ಸರಣಿ ಇದಾಗಿದೆ.
ನ್ಯೂಜಿಲೆಂಡ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಈಗಾಗಲೇ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ. ಇದರ ಜತೆಗೆ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯ ಜತೆಗೆ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದಾರೆ. ಇದರ ಪ್ರಕಾರ ಕೇನ್ ವಿಲಿಯಮ್ಸನ್ ತಮಗೆ ಬೇಕಾದ ಪಂದ್ಯಗಳನ್ನಷ್ಟೇ ಅಡಲು ಅವಕಾಶವಿದೆ. ಇನ್ನು ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ವೇಳೆಯಲ್ಲಿಯೇ SA20 ಲೀಗ್ ಟೂರ್ನಿಯು ನಡೆಯಲಿದೆ. ಈ ಟಿ20 ಲೀಗ್ ಡಿಸೆಂಬರ್ 26ರಿಂದ ಆರಂಭವಾಗಲಿದೆ. ಈ ಲೀಗ್‌ನಲ್ಲಿ ಕೇನ್ ವಿಲಿಯಮ್ಸನ್ ಡರ್ಬನ್ ಸೂಪರ್ ಜೈಂಟ್ಸ್ ಪರ ಆಡಲು ಕೇನ್ ವಿಲಿಯಮ್ಸನ್ ತೀರ್ಮಾನಿಸಿದ್ದಾರೆ. ಈ ಕಾರಣಕ್ಕಾಗಿ ಕೇನ್ ವಿಲಿಯಮ್ಸನ್ ಅವರನ್ನು ಭಾರತ ಎದುರಿನ ಏಕದಿನ ಸರಣಿಯಿಂದ ಕೈಬಿಡಲಾಗಿದೆ.
ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11ರಿಂದ ಆರಂಭವಾಗಲಿದೆ. ಮೊದಲ ಮ್ಯಾಚ್ ವಡೋದರದಲ್ಲಿ ನಡೆಯಲಿದೆ. ಇನ್ನು ಎರಡನೇ ಏಕದಿನ ಪಂದ್ಯವು ಜನವರಿ 14ರಂದು ರಾಜ್‌ಕೋಟ್‌ನಲ್ಲಿ ನಡೆಯಲಿದೆ. ಇನ್ನು ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯವು ಜನವರಿ 18ರಂದು ಇಂದೋರ್‌ನಲ್ಲಿ ನಡೆಯಲಿದೆ.
ಇನ್ನು ಭಾರತ-ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯು ಜನವರಿ 21ರಿಂದ ಆರಂಭವಾಗಲಿದೆ. ಮೊದಲ ಮ್ಯಾಚ್ ನಾಗ್ಪುರದಲ್ಲಿ ನಡೆಯಲಿದೆ. ಇನ್ನು ಎರಡನೇ ಟಿ20 ಪಂದ್ಯವು ಜನವರಿ 23ರಂದು ರಾಯ್ಪುರದಲ್ಲಿ ನಡೆಯಲಿದೆ. ಜನವರಿ 25ರಂದು ನಡೆಯಲಿರುವ ಮೂರನೇ ಟಿ20 ಪಂದ್ಯಕ್ಕೆ ಗುವಾಹಟಿ ಆತಿಥ್ಯ ವಹಿಸಲಿದೆ. ಇನ್ನು ಜನವರಿ 28ರಂದು ನಡೆಯಲಿರುವ ನಾಲ್ಕನೇ ಟಿ20 ಪಂದ್ಯವು ವಿಶಾಖಪಟ್ಟಣಂನಲ್ಲಿ ನಡೆಯಲಿದೆ. ಇನ್ನು ಈ ಟಿ20 ಸರಣಿಯ ಕೊನೆಯ ಪಂದ್ಯವು ಜನವರಿ 31ರಂದು ತಿರುವನಂತಪುರದಲ್ಲಿ ನಡೆಯಲಿದೆ. ಇದರ ಬೆನ್ನಲ್ಲೇ ಫೆಬ್ರವರಿ 07ರಿಂದ ಟಿ20 ವಿಶ್ವಕಪ್ ಆರಂಭವಾಗಲಿದೆ
ಭಾರತ ವಿರುದ್ಧದ ಏಕದಿನ ಸರಣಿಗೆ ನ್ಯೂಜಿಲೆಂಡ್ ತಂಡ: ಮೈಕಲ್ ಬ್ರೇಸ್‌ವೆಲ್ (ನಾಯಕ), ಆದಿ ಅಶೋಕ್, ಕ್ರಿಶ್ಚಿಯನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೆವೊನ್ ಕಾನ್ವೇ, ಜಾಕ್ ಫೌಲ್ಕ್ಸ್, ಮಿಚ್ ಹೇ, ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಜೇಡನ್ ಲೆನಾಕ್ಸ್, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮೈಕಲ್ ರೇ, ವಿಲ್ ಯಂಗ್.
ಭಾರತ ವಿರುದ್ಧದ ಟಿ20 ಸರಣಿಗೆ ನ್ಯೂಜಿಲೆಂಡ್ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಜೇಕಬ್ ಡಫಿ, ಜಾಕ್ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಬೆವೊನ್ ಜೇಕಬ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ರಾಬಿನ್ಸನ್, ಇಶ್ ಸೋಧಿ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.