
ಕ್ರೈಸ್ಟ್‌ಚರ್ಚ್(ಮಾ.24): ಟಾಮ್Christchurch ಲೇಥಮ್‌ರ ಆಕರ್ಷಕ ಶತಕ(110*)ದ ನೆರವಿನಿಂದ ಬಾಂಗ್ಲಾದೇಶ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ನ್ಯೂಜಿಲೆಂಡ್ 5 ವಿಕೆಟ್‌ಗಳ ಗೆಲುವು ಸಾಧಿಸಿ, 3 ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ತನ್ನದಾಗಿಸಿಕೊಂಡಿದೆ.
ಮಂಗಳವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ, ತಮೀಮ್ (78) ಹಾಗೂ ಮೊಹಮದ್ ಮಿಥುನ್ (73) ಬಾರಿಸಿದ ಅರ್ಧಶತಕಗಳ ನೆರವಿನಿಂದ 6 ವಿಕೆಟ್‌ಗೆ 271 ರನ್ ಕಲೆಹಾಕಿತು.
ಈ ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ಕಿವೀಸ್ ಪಡೆ ಆರಂಭಿಕ ಆಘಾತ ಅನುಭವಿಸಿತಾದರೂ ಆ ಬಳಿಕ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ತಂಡ ಗೆಲುವು ಹಳಿಗೆ ಮರಳಿತು. ಅಂತಿಮವಾಗಿ ನ್ಯೂಜಿಲೆಂಡ್ 48.2 ಓವರಲ್ಲಿ ಕೇವಲ 5 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಡೆವೊನ್ ಕಾನ್ವೆ 72 ರನ್ ಗಳಿಸಿ ಲೇಥಮ್‌ಗೆ ಉತ್ತಮ ಸಾಥ್ ನೀಡುವ ಮೂಲಕ ಕಿವೀಸ್ ಗೆಲುವಿಗೆ ನೆರವಾದರು.
ಕನ್ನಡಿಗನ ಅಬ್ಬರಕ್ಕೆ ಇಂಗ್ಲೆಂಡ್ ಧೂಳೀಪಟ; ಮೊದಲ ಏಕದಿನ ಭಾರತದ ಕೈವಶ!
ಬಾಂಗ್ಲಾ ವಿರುದ್ದ ಮೊದಲ ಏಕದಿನ ಪಂದ್ಯವನ್ನು ನ್ಯೂಜಿಲೆಂಡ್ 8 ವಿಕೆಟ್‌ಗಳಿಂದ ಜಯಿಸಿ ಸರಣಿಯಲ್ಲಿ ಶುಭಾರಂಭ ಮಾಡಿತ್ತು. ಇದೀಗ ಮೂರನೇ ಏಕದಿನ ಪಂದ್ಯ ಮಾರ್ಚ್ 26ರಂದು ವೆಲ್ಲಿಂಗ್ಟನ್‌ನಲ್ಲಿ ನಡೆಯಲಿದೆ.
ಸ್ಕೋರ್:
ಬಾಂಗ್ಲಾ 271/6
ನ್ಯೂಜಿಲೆಂಡ್ 275/5
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.