
ದುಬೈ(ನ.25): ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ)ಯ ನೂತನ ಸ್ವತಂತ್ರ ಅಧ್ಯಕ್ಷರಾಗಿ ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೇ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಇಮ್ರಾನ್ ಖವಾಜ ಅವರನ್ನು ಸೋಲಿಸುವ ಮೂಲಕ ಶಶಾಂಕ್ ಮನೋಹರ್ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಗ್ರೆಗ್ ಆಯ್ಕೆಯಾಗಿದ್ದಾರೆ.
ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯ ಮಾಜಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇಗೆ ಐಸಿಸಿ ಚೇರ್‌ಮನ್ ಆಗಲು ಮೂರನೇ ಎರಡರಷ್ಟು ಮತಗಳ ಅಗತ್ಯವಿತ್ತು. ಐಸಿಸಿ ಮಂಡಳಿಯ 16 ಮತಗಳ ಪೈಕಿ 11 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಕಳೆದ ಜುಲೈ ತಿಂಗಳಿನಲ್ಲಿ ಶಶಾಂಕ್ ಮನೋಹರ್ ರಾಜೀನಾಮೆಯಿಂದಾಗಿ ಖವಾಜ ಹಂಗಾಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಶಶಾಂಕ್ ಮನೋಹರ್
ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ನನ್ನ ಪಾಲಿಗೆ ಅತ್ಯಂತ ಗೌರವದ ವಿಚಾರ. ನನ್ನನ್ನು ಬೆಂಬಲಿಸಿದ ಎಲ್ಲರಿಗು ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಾವೆಲ್ಲರೂ ಒಟ್ಟಾಗಿ ಸೇರಿ ಜಾಗತಿಕ ಪಿಡುಗನ್ನು ಎದುರಿಸುವ ಮೂಲಕ ಕ್ರೀಡೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದು ನೂತನ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.