T20 World Cup ಟೂರ್ನಿಗೆ ಬಲಿಷ್ಠ ನ್ಯೂಜಿಲೆಂಡ್‌ ಕ್ರಿಕೆಟ್ ತಂಡ ಪ್ರಕಟ..!

By Naveen KodaseFirst Published Sep 20, 2022, 12:38 PM IST
Highlights

* ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ 15 ಆಟಗಾರರನ್ನೊಳಗೊಂಡ ನ್ಯೂಜಿಲೆಂಡ್ ತಂಡ ಪ್ರಕಟ
* ಅಕ್ಟೋಬರ್ 16ರಂದು ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್ ಟೂರ್ನಿ
* ಕಳೆದ ಬಾರಿ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದ ಕೇನ್ ವಿಲಿಯಮ್ಸನ್ ಪಡೆ

ವೆಲ್ಲಿಂಗ್ಟನ್(ಸೆ.20): ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಹಾಲಿ ರನ್ನರ್ ನ್ಯೂಜಿಲೆಂಡ್ ತಂಡ ಪ್ರಕಟವಾಗಿದ್ದು, 15 ಆಟಗಾರರನ್ನೊಳಗೊಂಡ ಬಲಿಷ್ಠ ತಂಡವನ್ನು ಕೇನ್‌ ವಿಲಿಯಮ್ಸನ್‌ ಮುನ್ನಡೆಸಲಿದ್ದಾರೆ. ಕಳೆದ ವರ್ಷ ಯುಎಇನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಎದುರು ಮುಗ್ಗರಿಸುವ ಮೂಲಕ ನ್ಯೂಜಿಲೆಂಡ್ ತಂಡವು ರನ್ನರ್ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು.

ಸ್ಪೋಟಕ ಬ್ಯಾಟರ್ ಫಿನ್ ಅಲೆನ್ ಹಾಗೂ ಮಿಚೆಲ್ ಬ್ರಾಸ್‌ವೆಲ್ ಇದೇ ಮೊದಲ ಬಾರಿಗೆ ಐಸಿಸಿ ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಇಬ್ಬರು ಆಟಗಾರರನ್ನು ಹೊರತುಪಡಿಸಿ, ಕಳೆದ ವರ್ಷ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ಆಟಗಾರರೇ ಈ ಬಾರಿಯೂ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

7ನೇ ಟಿ20 ವಿಶ್ವಕಪ್ ಆಡಲು ರೆಡಿಯಾದ ಮಾರ್ಟಿನ್ ಗಪ್ಟಿಲ್‌:  ಕಿವೀಸ್ ಅನುಭವಿ ಆರಂಭಿಕ ಬ್ಯಾಟರ್ ಮಾರ್ಟಿನ್ ಗಪ್ಟಿಲ್‌, ಕಿವೀಸ್ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ, 7ನೇ ಬಾರಿಗೆ ಟಿ20 ವಿಶ್ವಕಪ್‌ ಟೂರ್ನಿಯನ್ನಾಡಲು ಸಜ್ಜಾಗಿದ್ದಾರೆ. ಈ ಮೂಲಕ ಡ್ವೇನ್ ಬ್ರಾವೋ, ಕ್ರಿಸ್‌ ಗೇಲ್‌, ಮೊಹಮ್ಮದ್ ಮೊಹಮದುಲ್ಲಾ  ಹಾಗೂ ಮುಷ್ಫಿಕುರ್ ರಹೀಂ ಅವರ ಸಾಲಿಗೆ ಸೇರ್ಪಡೆಯಾಗಿದ್ದಾರೆ. ಇನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಬಾಂಗ್ಲಾದೇಶ ನಾಯಕ ಶಕೀಬ್ ಅಲ್ ಹಸನ್ 8ನೇ ವಿಶ್ವಕಪ್ ಟೂರ್ನಿಗೆ ಸಜ್ಜಾಗಿದ್ದಾರೆ.

T20 world cup ಟೀಂ ಇಂಡಿಯಾ ನೂತನ ಜರ್ಸಿ ಅನಾವರಣ, ಮರುಕಳಿಸಿತು 2007ರ ಚಾಂಪಿಯನ್ ಕಲರ್!

ಕಳೆದ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನ ಪಡೆದಿದ್ದ ಕೈಲ್ ಜೇಮಿಸನ್, ಈ ಬಾರಿ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಬೆನ್ನು ನೋವಿನಿಂದ ಬಳಲುತ್ತಿರುವ ಜೇಮಿಸನ್‌, ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡಿದ್ದು, ಸಂಪೂರ್ಣ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ತಂಡದಿಂದ ಹೊರಬಿದ್ದಿದ್ದಾರೆ. ಇನ್ನು ಟೋಡ್ ಆಶ್ಲೆ ಹಾಗೂ ಟಿಮ್ ಸೈಫರ್ಟ್‌ ಈ ಬಾರಿ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ.  

Our squad for this year's in Australia. Details | https://t.co/JuZOBPwRyn pic.twitter.com/1s4QBL5bGH

— BLACKCAPS (@BLACKCAPS)

ನ್ಯೂಜಿಲೆಂಡ್ ಕ್ರಿಕೆಟ್ ತಂಡವು, ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 22ರಂದು ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಿಡ್ನಿ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಲಿದೆ. ಇದಾದ ಬಳಿಕ ನ್ಯೂಜಿಲೆಂಡ್ ತಂಡವು, ಆಫ್ಘಾನಿಸ್ತಾನ, ಇಂಗ್ಲೆಂಡ್ ಹಾಗೂ ಅರ್ಹತಾ ಸುತ್ತಿನ ಎರಡು ತಂಡಗಳ ಎದುರು ಸೆಣಸಾಡಲಿದೆ.

ಟಿ20 ವಿಶ್ವಕಪ್ ಟೂರ್ನಿಗೆ ನ್ಯೂಜಿಲೆಂಡ್ ಕ್ರಿಕೆಟ್ ತಂಡ ಹೀಗಿದೆ ನೋಡಿ

ಕೇನ್ ವಿಲಿಯಮ್ಸನ್‌(ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್‌, ಮಿಚೆಲ್ ಬ್ರಾಸ್‌ವೆಲ್, ಮಾರ್ಕ್‌ ಚಾಪ್ಮನ್‌, ಡೆವೊನ್ ಕಾನ್‌ವೇ, ಲಾಕಿ ಫರ್ಗ್ಯೂಸನ್, ಮಾರ್ಟಿನ್ ಗಪ್ಟಿಲ್, ಆಡಂ ಮಿಲ್ನೆ, ಡೇರಲ್ ಮಿಚೆಲ್, ಜೇಮ್ಸ್‌ ನೀಶಮ್, ಗ್ಲೆನ್ ಫಿಲಿಫ್ಸ್‌, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ.

click me!