ವಿಂಡೀಸ್‌ ವಿರುದ್ಧ ಟಿ20 ಸರಣಿ ಗೆದ್ದ ನ್ಯೂಜಿಲೆಂಡ್‌

Published : Nov 30, 2020, 09:44 AM IST
ವಿಂಡೀಸ್‌ ವಿರುದ್ಧ ಟಿ20 ಸರಣಿ ಗೆದ್ದ ನ್ಯೂಜಿಲೆಂಡ್‌

ಸಾರಾಂಶ

ನ್ಯೂಜಿಲೆಂಡ್-ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿಯನ್ನು ಆತಿಥೇಯ ನ್ಯೂಜಿಲೆಂಡ್ ತಂಡ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಮೌಂಟ್‌ ಮಾಂಗನ್ಯುಯಿ(ನ.30): ಯುವ ಬ್ಯಾಟ್ಸ್‌ಮನ್‌ ಗ್ಲೆನ್‌ ಫಿಲಿಫ್ಸ್‌ ಸಿಡಿಸಿದ ವೇಗದ ಶತಕದ ನೆರವಿನಿಂದ ನ್ಯೂಜಿಲೆಂಡ್‌, ವೆಸ್ಟ್‌ ಇಂಡೀಸ್‌ ವಿರುದ್ಧ ಭಾನುವಾರ ಇಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ 72 ರನ್‌ಗಳ ಗೆಲುವು ದಾಖಲಿಸಿತು. ಇದರೊಂದಿಗೆ ನ್ಯೂಜಿಲೆಂಡ್‌ 3 ಪಂದ್ಯಗಳ ಸರಣಿಯನ್ನು 2-0 ಗೆದ್ದುಕೊಂಡಿದೆ. 

ಸರಣಿಯ ಮೊದಲ ಪಂದ್ಯದಲ್ಲಿ ಡಕ್‌ವರ್ತ್ ಲೂಯಿಸ್‌ ನಿಯಮದಡಿ ಕಿವೀಸ್‌ 5 ವಿಕೆಟ್‌ಗಳ ಗೆಲುವು ಪಡೆದಿತ್ತು. ಮೊದಲು ಬ್ಯಾಟ್‌ ಮಾಡಿದ ನ್ಯೂಜಿಲೆಂಡ್‌ 3 ವಿಕೆಟ್‌ಗೆ 238 ರನ್‌ಗಳಿಸಿತು. ಇದಕ್ಕುತ್ತರವಾಗಿ ವಿಂಡೀಸ್‌ 9 ವಿಕೆಟ್‌ಗೆ 166 ರನ್‌ಗಳಿಸಿ ಸೋಲೊಪ್ಪಿತು.

ಭಾರತಕ್ಕೆ ಮತ್ತೊಂದು ಸೋಲು; ಏಕದಿನ ಸರಣಿ ಆಸೀಸ್ ಪಾಲು

ಫಿಲಿಫ್ಸ್‌ ವೇಗದ ಶತಕ: ಕಿವೀಸ್‌ನ ಫಿಲಿಫ್ಸ್‌ 46 ಎಸೆತಗಳಲ್ಲಿ ಶತಕ ಸಿಡಿಸಿದರು. ಇದು ನ್ಯೂಜಿಲೆಂಡ್‌ ಪರ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ದಾಖಲಾದ ಅತಿ ವೇಗದ ಶತಕವಾಗಿದೆ. ವಿಶ್ವ ಕ್ರಿಕೆಟ್‌ನಲ್ಲಿ 10ನೇ ಅತ್ಯಂತ ವೇಗದ ಶತಕ ಎನಿಸಿಕೊಂಡಿದೆ.

ಸ್ಕೋರ್‌: ನ್ಯೂಜಿಲೆಂಡ್‌ 238/3
ವಿಂಡೀಸ್‌ 166/9

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IND vs SL 1st Test Day 2 Highlights : ಮಳೆಯ ನಡುವೆಯೂ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ.. ಪಡಿಕ್ಕಲ್ ಇತಿಹಾಸ
Cricket: ಮ್ಯಾಚ್‌ ನಡೆಯುತ್ತಿರುವಾಗಲೇ ದಿಗ್ಗಜ ಆಟಗಾರನ ಅಸಮಾಧಾನ ಸ್ಫೋಟ! ಟೀಮ್‌ಗೆ ನನ್ನ ಮೇಲೆ ನಂಬಿಕೆಯಿಲ್ಲ, ಒಳೊಳಗೆ ತಾರತಮ್ಯ ನಡಿತಿದೆ ಎಂದ ಸ್ಟಾರ್‌ ಪ್ಲೇಯರ್!