IPL 2023 ಚೆನ್ನೈ ಮಣಿಸಿದ ಕೆಕೆಆರ್ ನಾಯಕ ನಿತೀಶ್ ರಾಣಾಗೆ ಬಿಗ್ ಶಾಕ್‌..! ದೊಡ್ಡ ಮೊತ್ತದ ದಂಡದ ಬರೆ

Published : May 15, 2023, 01:53 PM IST
IPL 2023 ಚೆನ್ನೈ ಮಣಿಸಿದ ಕೆಕೆಆರ್ ನಾಯಕ ನಿತೀಶ್ ರಾಣಾಗೆ ಬಿಗ್ ಶಾಕ್‌..! ದೊಡ್ಡ ಮೊತ್ತದ ದಂಡದ ಬರೆ

ಸಾರಾಂಶ

ಚೆನ್ನೈ ಸೂಪರ್ ಕಿಂಗ್ಸ್ ಎದುರು ಗೆದ್ದು ಬೀಗಿದ ಕೆಕೆಆರ್ ಕೆಕೆಆರ್ ತಂಡದ ನಾಯಕ ನಿತೀಶ್ ರಾಣಾಗೆ ದಂಡದ ಬಿಸಿ ಮಂದಗತಿಯ ಬೌಲಿಂಗ್ ಮಾಡಿ ಶಿಕ್ಷೆಗೊಳಗಾದ ಕೆಕೆಆರ್ ನಾಯಕ

ಚೆನ್ನೈ(ಮೇ.15): ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್‌ ತಂಡವನ್ನು ಅವರದ್ದೇ ಮೈದಾನದಲ್ಲಿ ಮಣಿಸಿ ಬೀಗಿದ್ದ ನಿತೀಶ್ ರಾಣಾ ಪಡೆಗೆ ಬಿಗ್ ಶಾಕ್ ಎದುರಾಗಿದೆ. ಚೆನ್ನೈ ಎದುರು ನಿಧಾನಗತಿಯ ಬೌಲಿಂಗ್ ಮಾಡಿದ ತಪ್ಪಿಗಾಗಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕ ನಿತೀಶ್ ರಾಣಾ ಅವರಿಗೆ 24 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ.

ಹೌದು, ಇಲ್ಲಿನ ಚೆಪಾಕ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಎದುರಿನ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವು 6 ವಿಕೆಟ್‌ ಭರ್ಜರಿ ಜಯ ಸಾಧಿಸಿತ್ತು. ಇನ್ನು ಈ ಆವೃತ್ತಿಯಲ್ಲಿ ನಿತೀಶ್ ರಾಣಾ ನೇತೃತ್ವದ ಕೆಕೆಆರ್ ತಂಡವು ಎರಡನೇ ಬಾರಿಗೆ ನಿಧಾನಗತಿಯ ಬೌಲಿಂಗ್ ನಡೆಸುವ ಮೂಲಕ ಎರಡನೇ ಬಾರಿಗೆ ಐಪಿಎಲ್ ನೀತಿಸಂಹಿತೆ ಉಲ್ಲಂಘಿಸಿದೆ. ಈ ತಪ್ಪಿಗಾಗಿ ನಿತೀಶ್ ರಾಣಾ ಅವರಿಗೆ 24 ಲಕ್ಷ ರುಪಾಯಿ ದಂಡ ವಿಧಿಸಲಾಗಿದೆ. ಇನ್ನು ತಂಡದ ಸಹ ಆಟಗಾರರಿಗೂ ದಂಡದ ಬಿಸಿ ತಟ್ಟಿದೆ.

"ಈ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ನಿತೀಶ್ ರಾಣಾ ನೇತೃತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡವು ಎರಡನೇ ಬಾರಿಗೆ ನಿಧಾನಗತಿಯ ಬೌಲಿಂಗ್ ಮಾಡಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದೆ. ಹೀಗಾಗಿ ನಿತೀಶ್ ರಾಣಾ ಅವರಿಗೆ 24  ಲಕ್ಷ ರುಪಾಯಿ ಹಾಗೂ ಇಂಪ್ಯಾಕ್ಟ್ ಸಬ್‌ಸ್ಟಿಟ್ಯೂಟ್ ಸೇರಿದಂತೆ ಆಡುವ ಹನ್ನೊಂದರ ಬಳಗದಲ್ಲಿ ಕಣಕ್ಕಿಳಿದಿದ್ದ ಎಲ್ಲಾ ಆಟಗಾರರಿಗೆ 6 ಲಕ್ಷ ರುಪಾಯಿ ಅಥವಾ ಪಂದ್ಯದ ಸಂಭಾವನೆಯ 25% ಇದರಲ್ಲಿ ಯಾವುದು ಕಡಿಮೆಯೋ ಅದನ್ನು ದಂಡದ ರೂಪದಲ್ಲಿ ವಿಧಿಸಲಾಗಿದೆ ಎಂದು ಐಪಿಎಲ್ ಆಡಳಿಯ ಮಂಡಳಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

IPL 2023: ತಮ್ಮ ಸಕ್ಸಸ್ ಸೀಕ್ರೇಟ್‌ ಬಿಚ್ಚಿಟ್ಟ ರಿಂಕು ಸಿಂಗ್..!

ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ತವರಿನಲ್ಲಿ ಕೋಲ್ಕತಾ ನೈಟ್ ರೈಡರ್ಸ್‌ ವಿರುದ್ದ ಗೆದ್ದು ಪ್ಲೇ ಆಫ್ ಹಂತವನ್ನು ಖಚಿತಪಡಿಸಿಕೊಳ್ಳುವ ಲೆಕ್ಕಾಚಾರದೊಂದಿಗೆ ಕಣಕ್ಕಿಳಿದಿತ್ತು. ಆದರೆ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಕೋಲ್ಕತಾ ನೈಟ್‌ ರೈಡರ್ಸ್ ತಂಡವು ಇನ್ನೂ 9 ಎಸೆತ ಬಾಕಿ ಇರುವಂತೆಯೇ 6 ವಿಕೆಟ್ ಭರ್ಜರಿ ಜಯ ಸಾಧಿಸಿತು. ಸದ್ಯ ಕೆಕೆಆರ್ ತಂಡವು 13 ಪಂದ್ಯಗಳನ್ನಾಡಿ 6 ಗೆಲುವು ಹಾಗೂ 7 ಸೋಲು ಸಹಿತ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದ್ದು, ಇನ್ನೊಂದು ಪಂದ್ಯವನ್ನು ಭಾರೀ ಅಂತರದಲ್ಲಿ ಜಯಿಸಿ, ಉಳಿದ ತಂಡಗಳ ಫಲಿತಾಂಶಗಳು ತಮ್ಮ ಪರವಾಗಿ ಬಂದರೆ ಕೆಕೆಆರ್ ಪ್ಲೇ ಆಫ್‌ಗೆ ಪ್ರವೇಶ ಪಡೆಯಲಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!
ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌