ಆರ್‌ಸಿಬಿ ಪಂದ್ಯ ಅಹಮದಾಬಾದ್‌ಗೆ ಶಿಫ್ಟ್: ಸರ್ಕಾರದ ಪಾತ್ರ ಇಲ್ಲ, ವಾಣಿಜ್ಯ ಕಾರಣವಿರಬಹುದು: ಗೃಹ ಸಚಿವ ಪರಮೇಶ್ವರ

Published : May 08, 2026, 10:59 AM IST
Dr G Parameshwara

ಸಾರಾಂಶ

ಆರ್ಸಿಬಿ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಿದ ವಿಚಾರದಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಇದು ಸಂಪೂರ್ಣವಾಗಿ ಬಿಸಿಸಿಐ ಮತ್ತು ಫ್ರಾಂಚೈಸಿಯ ವಾಣಿಜ್ಯ ನಿರ್ಧಾರವಾಗಿದ್ದು, ಭದ್ರತಾ ಕೊರತೆಯ ಆರೋಪಗಳನ್ನು ಅವರು ತಳ್ಳಿಹಾಕಿದ್ದಾರೆ.

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ನಿರ್ಧಾರದಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಅವರು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ಸಿಬಿ ಮತ್ತು ಬಿಸಿಸಿಐ ನಡುವಿನ ಒಪ್ಪಂದಗಳ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಪಂದ್ಯವನ್ನು ಸ್ಥಳಾಂತರಿಸುವುದು ಸಂಪೂರ್ಣವಾಗಿ ಅವರ ನಿರ್ಧಾರ. ಟಿಕೆಟ್ ಹಾಗೂ ವಾಣಿಜ್ಯ ಉದ್ದೇಶಗಳಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾಣುತ್ತದೆ ಎಂದು ಹೇಳಿದರು

ಭದ್ರತಾ ಕೊರತೆ ಇಲ್ಲ

ಪಂದ್ಯವನ್ನು ಭದ್ರತಾ ಕಾರಣಗಳಿಂದ ಶಿಫ್ಟ್ ಮಾಡಲಾಗಿದೆ ಎಂಬ ಆರೋಪಗಳನ್ನು ತಳ್ಳಿಹಾಕಿದ ಸಚಿವ ಡಾ.ಜಿ. ಪರಮೇಶ್ವರ , ಭದ್ರತೆಯ ಯಾವುದೇ ಕೊರತೆ ಇಲ್ಲ. ಕಳೆದ ವರ್ಷ ನಡೆದ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ. ಕುನ್ಹಾ ವರದಿ ಆಧಾರವಾಗಿ ಹಲವು ಬದಲಾವಣೆಗಳನ್ನು ಮಾಡಿದ್ದೇವೆ. ಕಡಿಮೆ ಸಮಯದಲ್ಲಿಯೇ ಉನ್ನತ ಮಟ್ಟದ ಭದ್ರತಾ ವ್ಯವಸ್ಥೆ ಒದಗಿಸಲಾಗಿದೆ ಎಂದರು

ವಾಣಿಜ್ಯ ಕಾರಣಗಳೇ ಪ್ರಮುಖ

ಹೆಚ್ಚಿನ ಪ್ರೇಕ್ಷಕರನ್ನು ಸೆಳೆಯಲು ಮತ್ತು ಹೆಚ್ಚಿನ ಆಸನ ವ್ಯವಸ್ಥೆ ದೊರಕುವ ಉದ್ದೇಶದಿಂದ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಿರಬಹುದು ಎಂದ ಅವರು, ಇದು ಸಂಪೂರ್ಣವಾಗಿ ವಾಣಿಜ್ಯ ದೃಷ್ಟಿಯಿಂದ ತೆಗೆದುಕೊಂಡ ನಿರ್ಧಾರವಾಗಿರಬಹುದು. ಸರ್ಕಾರಕ್ಕೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. 600 ಸೀಟುಗಳನ್ನು ಶಾಸಕರಿಗೆ ನೀಡಲು ಪಂದ್ಯವನ್ನು ಸ್ಥಳಾಂತರಿಸುತ್ತಾರೆಯೇ? ಹಾಗೇನಾದರೂ ಇದ್ದರೆ ವಿವರಗಳನ್ನು ಬಹಿರಂಗಪಡಿಸಲಿ. ಯಾರು ಎಷ್ಟು ಟಿಕೆಟ್ ಪಡೆದಿದ್ದಾರೆ ಎಂಬುದನ್ನು ತಿಳಿಸಲಿ ಎಂದು ಖಾರವಾಗಿ ಪ್ರತಿಕ್ರಯಿಸಿದರು.

ವಿಪಕ್ಷಗಳ ಟೀಕೆಗಳಿಗೆ ಪ್ರತಿಕ್ರಿಯೆ

ಆರ್ಸಿಬಿ ಅಭಿಮಾನಿಗಳಿಗೆ ಮೋಸವಾಗಿದೆ ಎಂಬ ವಿಪಕ್ಷಗಳ ಟೀಕೆಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಬಿಜೆಪಿ ಮತ್ತು ಜೆಡಿಎಸ್ ಕ್ರೀಡಾ ಕ್ಷೇತ್ರಕ್ಕೆ ಯಾವ ರೀತಿಯ ಸಹಕಾರ ನೀಡಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಯಾರು ಏನು ಮಾಡಿದ್ದಾರೆ ಎಂಬುದನ್ನು ಜನರು ಚೆನ್ನಾಗಿ ಅರಿತಿದ್ದಾರೆ ಎಂದು ತಿರುಗೇಟು ನೀಡಿದರು.

ಈ ಮೂಲಕ ಆರ್ಸಿಬಿ ಪಂದ್ಯ ಸ್ಥಳಾಂತರದ ವಿಚಾರದಲ್ಲಿ ಸರ್ಕಾರದ ಪಾತ್ರವಿಲ್ಲ ಎಂಬುದನ್ನು ಗೃಹ ಸಚಿವರು ಸ್ಪಷ್ಟಪಡಿಸಿದ್ದು, ಈ ನಿರ್ಧಾರ ಸಂಪೂರ್ಣವಾಗಿ ಬಿಸಿಸಿಐ ಮತ್ತು ಫ್ರಾಂಚೈಸಿಯ ವಾಣಿಜ್ಯ ಹಾಗೂ ಆಡಳಿತಾತ್ಮಕ ವಿಚಾರಗಳಿಗೆ ಸಂಬಂಧಿಸಿದೆ ಎಂಬುದನ್ನು ಸ್ಪಷ್ಟಪಡಿಸಿದರು.

ತಮಿಳುನಾಡು ರಾಜಕೀಯ ಬೆಳವಣಿಗೆಗಳ ಬಗ್ಗೆ

ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಸಂಬಂಧಿಸಿದಂತೆ ರಾಜ್ಯಪಾಲರು ಬೆಂಬಲ ಪತ್ರ ಕೇಳಿರುವ ವಿಚಾರಕ್ಕ ಪ್ರತಿಕ್ರಿಯಿಸಿದ ಸಚಿವರು ಸಂವಿಧಾನದಲ್ಲಿ ಈ ಸಂಬಂಧ ಕೆಲವು ವಿಧಿಗಳು ಸ್ಪಷ್ಟವಾಗಿವೆ. ರಾಜ್ಯಪಾಲರು ಕಾನೂನು ಮತ್ತು ಸಂವಿಧಾನದ ಪ್ರಕಾರವೇ ಕ್ರಮ ಕೈಗೊಳ್ಳುತ್ತಾರೆ. ಈ ವಿಷಯ ನ್ಯಾಯಾಲಯದ ಮೆಟ್ಟಿಲೇರಬಹುದು ಎನ್ನುವ ಸಾಧ್ಯತೆ ಇದೆ ಎಂದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರದಿಂದ 10,000 ಫ್ರೀ ಟಿಕೆಟ್ ಬೇಡಿಕೆ, ಬೆಂಗಳೂರಿಗೆ ಐಪಿಎಲ್ ಫೈನಲ್ ಮ್ಯಾಚ್ ಕೈತಪ್ಪಲು ಅಸಲಿ ಕಾರಣ ಬಿಚ್ಚಿಟ್ಟ ಬಿಸಿಸಿಐ!
ಐಪಿಎಲ್ ಟೂರ್ನಿಗೆ ಹೊಸ ತಲೆನೋವು ಪ್ಲೇಯರ್ಸ್‌ಗೆ ಹನಿಟ್ರಾಪ್, ಲೈಂಗಿಕ ಕಿರುಕುಳ ಭೀತಿ, ಬಿಸಿಸಿಐ ಕ್ರಮ