ಏಷ್ಯನ್ ಗೇಮ್ಸ್‌ಗೆ ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಕಟ; ಬಾಬರ್ ಅಜಂ, ಶಾಹೀನ್ ಅಫ್ರಿದಿಗಿಲ್ಲ ಸ್ಥಾನ!

Published : Jun 10, 2026, 02:50 PM IST
Pakistan cricket team

ಸಾರಾಂಶ

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ಗಾಗಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಯುವ ತಂಡವನ್ನು ಪ್ರಕಟಿಸಿದೆ. ಬಾಬರ್ ಅಜಂರಂತಹ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಿ, ಸಾಹಿಬ್‌ಜಾದಾ ಫರ್ಹಾನ್ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಈ ತಂಡದಲ್ಲಿ ಹಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ.

ಲಾಹೋರ್: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ಗೆ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಪ್ರಕಟಿಸಲಾಗಿದೆ. ಬಾಬರ್ ಅಜಂ, ಶಾಹೀನ್ ಶಾ ಅಫ್ರಿದಿ, ಸಲ್ಮಾನ್ ಅಲಿ ಆಗಾ, ಶಾದಾಬ್ ಖಾನ್‌ರಂತಹ ಸ್ಟಾರ್ ಆಟಗಾರರಿಗೆ ವಿಶ್ರಾಂತಿ ನೀಡಿ, 15 ಸದಸ್ಯರ ಯುವ ತಂಡವನ್ನು ಪಾಕಿಸ್ತಾನ ಕ್ರಿಕೆಟ್ ಬೋರ್ಡ್ ಆಯ್ಕೆ ಮಾಡಿದೆ.

ಆರಂಭಿಕ ಆಟಗಾರ ಸಾಹಿಬ್‌ಜಾದಾ ಫರ್ಹಾನ್ ತಂಡವನ್ನು ಮುನ್ನಡೆಸಲಿದ್ದು, ಅಬ್ದುಲ್ ಸಮದ್ ಉಪನಾಯಕರಾಗಿದ್ದಾರೆ. ಏಷ್ಯನ್ ಗೇಮ್ಸ್ ಸೆಪ್ಟೆಂಬರ್ 19 ರಂದು ಶುರುವಾಗಲಿದ್ದು, ಕ್ರಿಕೆಟ್ ಪಂದ್ಯಗಳು ಸೆಪ್ಟೆಂಬರ್ 24 ರಿಂದ ಆರಂಭವಾಗಲಿವೆ. ಅಕ್ಟೋಬರ್ 3 ರಂದು ಪದಕಕ್ಕಾಗಿ ಪಂದ್ಯಗಳು ನಡೆಯಲಿವೆ. ಈ ಬಾರಿಯ ಏಷ್ಯನ್ ಗೇಮ್ಸ್ ಕ್ರಿಕೆಟ್ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಾದಾಡಲಿವೆ.

ಹಲವು ಹೊಸ ಮುಖಗಳಿಗೆ ಸ್ಥಾನ

ಯುವ ಆಟಗಾರರಿಗೆ ಹೆಚ್ಚಿನ ಆದ್ಯತೆ ನೀಡಿರುವ ಈ ತಂಡದಲ್ಲಿ 30 ವರ್ಷದ ಸಾಹಿಬ್‌ಜಾದಾ ಫರ್ಹಾನ್ ಅತ್ಯಂತ ಅನುಭವಿ ಆಟಗಾರ ಎನಿಸಿಕೊಂಡಿದ್ದಾರೆ. ಅವರು ಪಾಕಿಸ್ತಾನ ಪರ 46 ಟಿ20 ಪಂದ್ಯಗಳಲ್ಲಿ 2 ಶತಕ ಮತ್ತು 10 ಅರ್ಧಶತಕಗಳೊಂದಿಗೆ 1,305 ರನ್ ಗಳಿಸಿದ್ದಾರೆ. 2026ರ ಟಿ20 ವಿಶ್ವಕಪ್‌ನಲ್ಲಿ ಫರ್ಹಾನ್ ಪಾಕಿಸ್ತಾನದ ಟಾಪ್ ಸ್ಕೋರರ್ ಆಗಿದ್ದರು ಎಂಬುದು ವಿಶೇಷ. ಆಕಿಫ್ ಜಾವೇದ್, ಅಲಿ ರಾಝಾ, ಮಾಝ್ ಸದಾಕತ್ ಮತ್ತು ಸಾದ್ ಮಸೂದ್ ತಂಡದಲ್ಲಿರುವ ಹೊಸ ಮುಖಗಳು.

ಉಸ್ಮಾನ್ ಖಾನ್ ವಿಕೆಟ್ ಕೀಪರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಅಬ್ರಾರ್ ಅಹ್ಮದ್, ಅಹ್ಮದ್ ದಾನಿಯಾಲ್, ಅರಾಫತ್ ಮಿನ್ಹಾಸ್, ಹೈದರ್ ಅಲಿ, ಹಸನ್ ನವಾಝ್, ಮೊಹಮ್ಮದ್ ಸಲ್ಮಾನ್ ಮಿರ್ಜಾ, ಸೈಮ್ ಅಯೂಬ್ ಮತ್ತು ಸುಫ್ಯಾನ್ ಮುಖೀಮ್ ತಂಡದ ಇತರ ಸದಸ್ಯರಾಗಿದ್ದಾರೆ. 2023ರ ಏಷ್ಯನ್ ಗೇಮ್ಸ್‌ನಲ್ಲಿ ಪಾಕಿಸ್ತಾನ ನಾಲ್ಕನೇ ಸ್ಥಾನ ಪಡೆದಿತ್ತು. ಭಾರತ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಚಿನ್ನದ ಪದಕಕ್ಕೆ ಕೊರಳೊಡ್ಡಿತ್ತು.

ಏಷ್ಯನ್ ಗೇಮ್ಸ್‌ಗೆ ಪಾಕಿಸ್ತಾನ ತಂಡ:

ಸಾಹಿಬ್‌ಜಾದಾ ಫರ್ಹಾನ್ (ನಾಯಕ), ಅಬ್ದುಲ್ ಸಮದ್ (ಉಪನಾಯಕ), ಅಬ್ರಾರ್ ಅಹ್ಮದ್, ಅಹ್ಮದ್ ದಾನಿಯಾಲ್, ಆಕಿಫ್ ಜಾವೇದ್, ಅಲಿ ರಾಝಾ, ಅರಾಫತ್ ಮಿನ್ಹಾಸ್, ಹೈದರ್ ಅಲಿ, ಹಸನ್ ನವಾಝ್, ಮಾಝ್ ಸದಾಕತ್, ಮೊಹಮ್ಮದ್ ಸಲ್ಮಾನ್ ಮಿರ್ಜಾ, ಸಾದ್ ಮಸೂದ್, ಸೈಮ್ ಅಯೂಬ್, ಸುಫ್ಯಾನ್ ಮುಖೀಮ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್).

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕೊಹ್ಲಿ ಬಳಿಕ ಆಫ್ಘಾನಿಸ್ತಾನ ಎದುರಿನ ಏಕದಿನ ಸರಣಿಯಿಂದ ಸ್ಟಾರ್ ಆಲ್ರೌಂಡರ್ ಔಟ್! ಟೀಂ ಇಂಡಿಯಾಗೆ ದೊಡ್ಡ ಹಿನ್ನಡೆ
ಆಫ್ಘಾನ್ ಎದುರಿನ ಏಕದಿನ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಗುಡ್‌ ನ್ಯೂಸ್! ಇಬ್ಬರು ಆಟಗಾರರು ಫುಲ್ ಫಿಟ್