
ಕರಾಚಿ(ಜ.30): ಸ್ಪಿನ್ನರ್‌ಗಳಾದ ನೌಮನ್ ಅಲಿ ಹಾಗೂ ಯಾಸಿರ್ ಶಾ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ, ಪಾಕಿಸ್ತಾನ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ 7 ವಿಕೆಟ್‌ಗಳ ಸೋಲು ಅನುಭವಿಸಿದೆ.
3ನೇ ದಿನದಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 187 ರನ್ ಗಳಿಸಿದ್ದ ದಕ್ಷಿಣ ಆಫ್ರಿಕಾ 4ನೇ ದಿನವಾದ ಶುಕ್ರವಾರ 2ನೇ ಇನ್ನಿಂಗ್ಸ್‌ನಲ್ಲಿ 245 ರನ್‌ಗಳಿಗೆ ಆಲೌಟ್ ಆಯಿತು. ನೌಮನ್ ಅಲಿ 5 ಹಾಗೂ ಯಾಸಿರ್ ಶಾ 4 ವಿಕೆಟ್ ಕಬಳಿಸಿದರು.
ಮೊದಲ ಟೆಸ್ಟ್: ಹರಿಣಗಳ ವಿರುದ್ದ ಜಯದ ನಿರೀಕ್ಷೆಯಲ್ಲಿ ಪಾಕ್
ಇನ್ನು ದಕ್ಷಿಣ ಆಫ್ರಿಕಾ ನೀಡಿದ್ದ 88 ರನ್‌ಗಳ ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ, 3 ವಿಕೆಟ್ ಕಳೆದುಕೊಂಡು ಗುರಿ ತಲುಪಿ, 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. 14 ವರ್ಷಗಳ ಬಳಿಕ ದಕ್ಷಿಣ ಆಫ್ರಿಕಾ ಪಾಕಿಸ್ತಾನ ಪ್ರವಾಸ ಕೈಗೊಂಡಿದೆ. ಇದೀಗ ಹರಿಣಗಳ ಪಡೆ ಮೊದಲ ಪಂದ್ಯದಲ್ಲೇ ಆಘಾತಕಾರಿ ಸೋಲು ಕಂಡಿದೆ.
ಇನ್ನು ಎರಡನೇ ಟೆಸ್ಟ್ ಪಂದ್ಯ ಫೆಬ್ರವರಿ 04ರಿಂದ ರಾವಲ್ಪಿಂಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಲಿದ್ದು, ಆ ಪಂದ್ಯದಲ್ಲಿ ಆತಿಥೇಯ ಪಾಕಿಸ್ತಾನಕ್ಕೆ ತಿರುಗೇಟು ನೀಡುವ ಲೆಕ್ಕಾಚಾರದಲ್ಲಿದೆ ಕ್ವಿಂಟನ್ ಡಿ ಕಾಕ್ ನೇತೃತ್ವದ ಹರಿಗಳ ಪಡೆ.
ಸ್ಕೋರ್:
ದ.ಆಫ್ರಿಕಾ 220 ಹಾಗೂ 245
ಪಾಕ್ 378 ಹಾಗೂ 90/3
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.