Asia Cup 2022 ಟೂರ್ನಿಗೆ 15 ಆಟಗಾರರನ್ನೊಳಗೊಂಡ ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಕಟ

Published : Aug 03, 2022, 05:33 PM IST
Asia Cup 2022 ಟೂರ್ನಿಗೆ 15 ಆಟಗಾರರನ್ನೊಳಗೊಂಡ ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಕಟ

ಸಾರಾಂಶ

* ಏಷ್ಯಾಕಪ್ ಕ್ರಿಕೆಟ್‌ ಟೂರ್ನಿಗೆ ಪಾಕಿಸ್ತಾನ ಕ್ರಿಕೆಟ್ ತಂಡ ಪ್ರಕಟ * ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಮುನ್ನಡೆಸಲಿರುವ ಬಾಬರ್ ಅಜಂ * ಅನುಭವಿ ವೇಗಿ ಹಸನ್ ಅಲಿ ಬದಲಿಗೆ ನಸೀಮ್ ಶಾಗೆ ತಂಡದಲ್ಲಿ ಅವಕಾಶ

ಇಸ್ಲಾಮಾಬಾದ್‌(ಆ.03): ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆಗಸ್ಟ್ 27ರಿಂದ ಆರಂಭವಾಗಲಿರುವ ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಹಾಗೂ ನೆದರ್‌ಲೆಂಡ್ಸ್‌ ವಿರುದ್ದದ ಏಕದಿನ ಸರಣಿಗೆ ಬಲಿಷ್ಠ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಪ್ರತಿಕ್ರಿಯಿಸಿದೆ. ಅಚ್ಚರಿಯ ಬೆಳವಣಿಯೊಂದರಲ್ಲಿ ವೇಗದ ಬೌಲರ್ ಹಸನ್ ಅಲಿ ಅವರನ್ನು ಪಾಕಿಸ್ತಾನ ಕ್ರಿಕೆಟ್ ತಂಡದಿಂದ ಹೊರಬಿಡಲಾಗಿದೆ. ಇನ್ನು ಇದೇ ವೇಳೆ ಹಸನ್ ಅಲಿ ಬದಲಿಗೆ ನಸೀಮ್ ಶಾಗೆ ತಂಡದಲ್ಲಿ ಅವಕಾಶ ಕಲ್ಪಿಸಲಾಗಿದೆ. ಈಗಾಗಲೇ ಪಾಕಿಸ್ತಾನ ಟೆಸ್ಟ್ ತಂಡವನ್ನು ಪ್ರತಿನಿಧಿಸಿ ಹ್ಯಾಟ್ರಿಕ್ ವಿಕೆಟ್ ಕೂಡಾ ಗಳಿಸಿರುವ ನಸೀಮ್ ಶಾ ಇದುವರೆಗೂ ಪಾಕಿಸ್ತಾನ ಪರ ಏಕದಿನ ಅಥವಾ ಟಿ20 ಪಂದ್ಯವನ್ನಾಡಿರಲಿಲ್ಲ.

ಇನ್ನು ಗಾಯದ ಸಮಸ್ಯೆಯಿಂದ ಶ್ರೀಲಂಕಾ ವಿರುದ್ದದ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಶಾಹೀನ್ ಶಾ ಅಫ್ರಿದಿ, ಏಷ್ಯಾಕಪ್ ಹಾಗೂ ನೆದರ್‌ಲೆಂಡ್ಸ್‌ ವಿರುದದ್ದ ಸರಣಿಗೆ ಆಯ್ಕೆಯಾಗಿದ್ದಾರೆ. ಈ ಎರಡೂ ಸರಣಿಯಲ್ಲೂ ಬಾಬರ್ ಅಜಂ ನಾಯಕನಾಗಿ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಮುನ್ನಡೆಸಲಿದ್ದಾರೆ. ದೇಶಿ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ತೋರಿರುವ ಸಲ್ಮಾನ್ ಅಲಿ ಆಘಾ ನೆದರ್ಲೆಂಡ್ ಎದುರಿನ ಏಕದಿನ ಸರಣಿಗೆ ಪಾಕಿಸ್ತಾನ ತಂಡ ಕೂಡಿಕೊಂಡಿದ್ದಾರೆ.

ಏಷ್ಯಾಕಪ್ ಕ್ರಿಕೆಟ್ ಟೂರ್ನಿಯು ಆಗಸ್ಟ್‌ 27ರಿಂದಲೇ ಆರಂಭವಾದರೂ, ಪಾಕಿಸ್ತಾನ ಕ್ರಿಕೆಟ್ ತಂಡವು ಆಗಸ್ಟ್ 28ರಂದು ತನ್ನ ಪಾಲಿನ ಮೊದಲ ಪಂದ್ಯದಲ್ಲಿ ಬದ್ದ ಎದುರಾಳಿ ಟೀಂ ಇಂಡಿಯಾವನ್ನು ಎದುರಿಸುವ ಮೂಲಕ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಆತಿಥ್ಯ ವಹಿಸಲಿದೆ. ಇದಕ್ಕೂ ಮೊದಲು ಪಾಕಿಸ್ತಾನ ತಂಡವು ಆಗಸ್ಟ್ 15ರಿಂದ ನೆದರ್‌ಲೆಂಡ್ಸ್‌ ಎದುರು 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ.

Asia Cup 2022 ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಪ್ರಕಟ: ಭಾರತಕ್ಕೆ ಮೊದಲ ಪಂದ್ಯದಲ್ಲೇ ಪಾಕ್ ಎದುರಾಳಿ..!

ನೆದರ್‌ಲೆಂಡ್ಸ್ ಎದುರಿನ ಏಕದಿನ ಸರಣಿಗೆ ಪಾಕಿಸ್ತಾನ ತಂಡ ಹೀಗಿದೆ ನೋಡಿ

ಬಾಬರ್ ಅಜಂ(ನಾಯಕ), ಶಾದಾಬ್ ಖಾನ್, ಅಬ್ದುಲ್‌ ಶಫೀಕ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಮಾಮ್‌-ಉಲ್-ಹಕ್, ಕುಶ್ದಿಲ್ ಶಾ, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸೀಂ ಜೂನಿಯರ್, ನಶೀಮ್‌ ಶಾ, ಸಲ್ಮಾನ್ ಅಲಿ ಆಘಾ, ಶಾಹೀನ್ ಶಾ ಅಫ್ರಿದಿ, ಶೆಹನವಾಜ್‌ ದಿಹಾನಿ, ಜಾಹಿದ್ ಮೆಹಮೊದ್‌.

ಏಷ್ಯಾಕಪ್ ಕ್ರಿಕೆಟ್ ಟೂರ್ನಿಗೆ ಪಾಕಿಸ್ತಾನ ಕ್ರಿಕೆಟ್ ತಂಡ ಹೀಗಿದೆ ನೋಡಿ.

ಬಾಬರ್ ಅಜಂ(ನಾಯಕ), ಶಾದಾಬ್ ಖಾನ್, ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹ್ಯಾರಿಸ್ ರೌಫ್, ಇಫ್ತಿಕರ್ ಅಹಮದ್, ಕುಶ್ದೀಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸೀಂ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ, ಶೆಹನವಾಜ್‌ ದಿಹಾನಿ, ಉಸ್ಮಾನ್ ಖಾದಿರ್.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!
ಫೋಟೋ ಹಂಚಿಕೊಂಡು 'ಡಾರ್ಲಿಂಗ್‌..' ಎಂದು ಬರೆದ ಸಾರಾ ತೆಂಡುಲ್ಕರ್‌