Pak vs WI: ವಿಂಡೀಸ್‌ ಎದುರು ಟಿ20 ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ಪಾಕ್‌

Suvarna News   | Asianet News
Published : Dec 17, 2021, 11:46 AM IST
Pak vs WI: ವಿಂಡೀಸ್‌ ಎದುರು ಟಿ20 ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ಪಾಕ್‌

ಸಾರಾಂಶ

* ವಿಂಡೀಸ್ ಎದುರು ಟಿ20 ಸರಣಿ ಕ್ಲೀನ್ ಸ್ವೀಪ್‌ ಮಾಡಿದ ಪಾಕಿಸ್ತಾನ * ಮೂರನೇ ಟಿ20 ಪಂದ್ಯದಲ್ಲಿ ಪಾಕ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ * ಪಂದ್ಯಶ್ರೇಷ್ಠ & ಸರಣಿ ಶ್ರೇಷ್ಠ ಪ್ರಶಸ್ತಿ ಭಾಚಿಕೊಂಡ ಮೊಹಮ್ಮದ್ ರಿಜ್ವಾನ್ 

ಕರಾಚಿ(ಡಿ.17): ವೆಸ್ಟ್‌ ಇಂಡೀಸ್‌ ವಿರುದ್ಧದ 3ನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು (Pakistan Cricket Team) 7 ವಿಕೆಟ್‌ ಭರ್ಜರಿ ಜಯಗಳಿಸಿದೆ. ಇದರೊಂದಿಗೆ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್‌ಸ್ವೀಪ್‌ ಮಾಡಿಕೊಂಡಿದೆ. ಜೊತೆಗೆ, ಕ್ಯಾಲೆಂಡರ್‌ ವರ್ಷದಲ್ಲಿ 20 ಟಿ20 ಗೆಲುವುಗಳನ್ನು ಸಾಧಿಸಿ ದಾಖಲೆ ಬರೆದಿದೆ. ಇದಷ್ಟೇ ಅಲ್ಲದೇ ಟಿ20 ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ 208 ರನ್‌ಗಳ ಗುರಿಯನ್ನು ತಲುಪುವಲ್ಲಿ ಯಶಸ್ವಿಯಾಗಿ ದಾಖಲೆ ಬರೆದಿದೆ. 

ಇಲ್ಲಿನ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ (National Cricket Stadium) ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಪ್ರವಾಸಿ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡವು (West Indies Cricket Team) ಸ್ಪೋಟಕ ಆರಂಭವನ್ನು ಪಡೆಯಿತು. ಮೊದಲ ವಿಕೆಟ್‌ಗೆ ಬ್ರೆಂಡನ್ ಕಿಂಗ್ ಹಾಗೂ ಸಮರ್ಥ್ ಬ್ರೂಕ್ಸ್‌ ಜೋಡಿ ಕೇವಲ 5.6 ಓವರ್‌ಗಳಲ್ಲಿ 66 ರನ್ ಸಿಡಿಸಿತು. ಬ್ರೆಂಡನ್ ಕಿಂಗ್ 43 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಸಮರ್ಥ್‌ ಬ್ರೂಕ್ಸ್‌ ಕೇವಲ ಒಂದು ರನ್ ಅಂತರದಿಂದ ಅರ್ಧಶತಕ ವಂಚಿತರಾದರು. ಇನ್ನು ವಿಂಡೀಸ್ ನಾಯಕ ನಿಕೋಲಸ್ ಪೂರನ್‌ ಕೇವಲ 37 ಎಸೆತಗಳಲ್ಲಿ 2 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 64 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ವಿಂಡೀಸ್ ಕೇವಲ 3 ವಿಕೆಟ್ ಕಳೆದುಕೊಂಡು 207 ರನ್ ಕಲೆಹಾಕಿತು.

ಕೆರಿಬಿಯನ್ನರು ನೀಡಿದ ಬೃಹತ್‌ ಗುರಿ ಬೆನ್ನತ್ತಿದ ಪಾಕಿಸ್ತಾನ ತಂಡಕ್ಕೆ ಆರಂಭಿಕ ಬ್ಯಾಟರ್‌ಗಳಾದ ಮೊಹಮ್ಮದ್ ರಿಜ್ವಾನ್ (Mohammad Rizwan) ಹಾಗೂ ನಾಯಕ ಬಾಬರ್ ಅಜಂ (Babar Azam) ವಿಸ್ಪೋಟಕ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್‌ಗೆ ಈ ಜೋಡಿ 15.1 ಓವರ್‌ಗಳಲ್ಲಿ 10ರ ಸರಾಸರಿಯಲ್ಲಿ 158 ರನ್‌ಗಳ ಜತೆಯಾಟವಾಡುವ ಭರ್ಜರಿ ಆರಂಭ ಒದಗಿಸಿಕೊಟ್ಟಿತು. ಬಾಬರ್ ಅಜಂ 79 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಮೊಹಮ್ಮದ್ ರಿಜ್ವಾನ್ 87 ರನ್‌ ಬಾರಿಸಿ ಪೆವಿಲಿಯನ್ ಸೇರಿದರು. ಕೊನೆಯಲ್ಲಿ ಆಸಿಫ್ ಅಲಿ ಕೇವಲ 7 ಎಸೆತಗಳಲ್ಲಿ 21 ರನ್‌ ಬಾರಿಸುವ ಮೂಲಕ ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ ತಂಡವನ್ನು ಗೆಲುವಿನ ದಡ ಸೇರಿಸಿದರು.

Viral Video : ಅಜ್ಮಲ್-ಮಲೀಕ್ ಅವರ ಐಕಾನಿಕ್ ಕ್ಯಾಚ್ ನೆನಪಿಸಿದ ಹಸ್ನಾಯಿನ್-ಇಫ್ತಿಕಾರ್!

ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಅಮೋಘ ಪ್ರದರ್ಶನ ತೋರಿದ ಪಾಕಿಸ್ತಾನದ ವಿಕೆಟ್ ಕೀಪರ್ ಬ್ಯಾಟರ್‌ ಮೊಹಮದ್‌ ರಿಜ್ವಾನ್‌ ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ ಪ್ರಶಸ್ತಿ ಪಡೆದರು.

ಕೋವಿಡ್‌ ಕಾಟ: ವಿಂಡೀಸ್‌, ಪಾಕ್‌ ಏಕದಿನ ಸರಣಿ ಮುಂದಕ್ಕೆ

ಕರಾಚಿ: ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ನ ಐವರು ಸದಸ್ಯರಿಗೆ ಕೊರೋನಾ ಸೋಂಕು (Coronavirus) ದೃಢಪಟ್ಟ ಹಿನ್ನೆಲೆಯಲ್ಲಿ ಪಾಕಿಸ್ತಾನ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಮುಂದೂಡಲಾಗಿದೆ. ಈ ಬಗ್ಗೆ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಹಾಗೂ ವಿಂಡೀಸ್‌ ಕ್ರಿಕೆಟ್‌ ಮಂಡಳಿಗಳು ಜಂಟಿ ಪ್ರಕಟನೆ ಹೊರಡಿಸಿವೆ.

2000 T20 Runs in a year : ಅಪರೂಪದ ದಾಖಲೆ ಮಾಡಿದ ಪಾಕ್ ಬ್ಯಾಟ್ಸ್ ಮನ್ Mohammad Rizwan!

‘ವಿಂಡೀಸ್‌ ತಂಡದ ಸದಸ್ಯರಲ್ಲಿ ಕೋವಿಡ್‌ ಕಂಡುಬಂದ ಹಿನ್ನೆಲೆಯಲ್ಲಿ ಆಟಗಾರರ ಆರೋಗ್ಯದ ದೃಷ್ಟಿಯಿಂದ ಏಕದಿನ ಸರಣಿಯನ್ನು ಮುಂದೂಡಲಾಗಿದೆ. ಸರಣಿಯನ್ನು 2022ರ ಜೂನ್‌ ತಿಂಗಳಲ್ಲಿ ಆಯೋಜಿಸಲಾಗುವುದು’ ಎಂದು ಮಾಹಿತಿ ನೀಡಿದೆ. ವಿಂಡೀಸ್‌ ತಂಡದ ಮೂವರು ಆಟಗಾರರು ಸೇರಿದಂತೆ ಐವರಿಗೆ ಸೋಂಕು ದೃಢಪಟ್ಟಿದ್ದು, ಉಳಿದವರ ವರದಿ ನೆಗೆಟಿವ್‌ ಬಂದಿದೆ. ಅವರು ಟಿ20 ಸರಣಿ ಬಳಿಕ ತವರಿಗೆ ಹಿಂದಿರುಗಲಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!
U19 Asia Cup ವೈಭವ್ ಸೂರ್ಯವಂಶಿ ದ್ವಿಶತಕ ಜಸ್ಟ್‌ ಮಿಸ್; ಉದ್ಘಾಟನಾ ಪಂದ್ಯದಲ್ಲೇ ಬೃಹತ್ ಮೊತ್ತ ಗಳಿಸಿದ ಭಾರತ!