ಪಾಕಿಸ್ತಾನ ಮಾಜಿ ಕ್ರಿಕೆಟಿಗ ಇಂಜಮಾಮ್‌ ಉಲ್‌-ಹಕ್‌ಗೆ ಹೃದಯಾಘಾತ..!

Suvarna News   | Asianet News
Published : Sep 29, 2021, 08:45 AM IST
ಪಾಕಿಸ್ತಾನ ಮಾಜಿ ಕ್ರಿಕೆಟಿಗ ಇಂಜಮಾಮ್‌ ಉಲ್‌-ಹಕ್‌ಗೆ ಹೃದಯಾಘಾತ..!

ಸಾರಾಂಶ

* ಪಾಕಿಸ್ತಾನದ ಮಾಜಿ ನಾಯಕ ಇಂಜಿಗೆ ಹೃದಯಾಘಾತ * ತುರ್ತು ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಪಾಕ್ ಮಾಜಿ ನಾಯಕ * ಹೃದಯ ಸಂಬಂಧಿ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇಂಜಮಾಮ್

ಲಾಹೋರ್(ಸೆ.29)‌: ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಇಂಜಮಾಮ್‌ ಉಲ್‌-ಹಕ್‌ (Inzamam-ul-Haq) ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ಆಂಜಿಯೋಪ್ಲಾಸ್ಟಿ (Angioplasty) ಮಾಡಲಾಗಿದೆ. 

ಸೋಮವಾರ ಹೃದಯ ಸಂಬಂಧಿ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಪರಿಶೀಲಿಸಿದ ಬಳಿಕ ಹೃದಯಾಘಾತ ಎಂದು ಖಚಿತಪಡಿಸಿದ್ದಾರೆ. ಮಾಜಿ ಕ್ರಿಕೆಟಿಗ ಸಚಿನ್‌ ತೆಂಡುಲ್ಕರ್‌ (Sachin Tendulkar), ವಾಸೀಂ ಅಕ್ರಂ ಸೇರಿದಂತೆ ಪ್ರಮುಖರು ಹಕ್‌ ಅವರ ಶೀಘ್ರ ಚೇತರಿಕೆಗಾಗಿ ಹಾರೈಸಿದ್ದಾರೆ.

ಕೊನೆಯುಸಿರೆಳೆದ ಭಾರತದ ಟೆಸ್ಟ್‌ ಕ್ರಿಕೆಟ್ ಅಂಪೈರ್ ಸತ್ಯಾಜಿ ರಾವ್

ಆದಷ್ಟು ಬೇಗ ಗುಣಮುಖರಾಗಿ ಇಂಜಿ. ನೀವು ಯಾವಾಗಲೂ ಶಾಂತರೀತಿಯಲ್ಲಿದ್ದರೂ, ಆನ್ ಫೀಲ್ಡ್‌ನಲ್ಲಿ ಸದಾ ದಿಟ್ಟ ಹೋರಾಟಗಾರ. ಈ ಸಂಕಷ್ಟದ ಪರೀಕ್ಷೆಯನ್ನು ಎದುರಿಸಿ ಮತ್ತಷ್ಟು ಬಲಿಷ್ಠರಾಗಿ ಹೊರಬರುವಿರಿ ಎನ್ನುವ ವಿಶ್ವಾಸವಿದೆ. ಆದಷ್ಟು ಬೇಗ ಹುಷರಾಗಿ ಎಂದು ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡುಲ್ಕರ್ ಟ್ವೀಟ್‌ ಮಾಡಿ ಯೋಗ ಕ್ಷೇಮ ವಿಚಾರಿಸಿದ್ದಾರೆ. 

51 ವರ್ಷದ ಹಕ್‌ ಪಾಕ್‌ ಪರ 120 ಟೆಸ್ಟ್‌ಗಳನ್ನಾಡಿ 25 ಶತಕ ಹಾಗೂ 56 ಅರ್ಧಶತಕ ಸಹಿತ 8,830 ರನ್‌ ಬಾರಿಸಿದ್ದಾರೆ. 329 ರನ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ಬಾರಿಸಿದ ವೈಯುಕ್ತಿಕ ಗರಿಷ್ಠ ಸ್ಕೋರ್ ಎನಿಸಿದೆ. ಇನ್ನು 378 ಏಕದಿನ ಪಂದ್ಯವಾಡಿ 10 ಶತಕ ಹಾಗೂ 83 ಅರ್ಧಶತಕ ಸಹಿತ 11,739 ರನ್‌ ಬಾರಿಸಿದ್ದಾರೆ. ಇದಷ್ಟೇ ಅಲ್ಲದೇ 3 ವರ್ಷಗಳ ಕಾಲ ಪಾಕಿಸ್ತಾನ ಕ್ರಿಕೆಟ್ ಆಯ್ಕೆ ಸಮಿತಿ ಮುಖ್ಯಸ್ಥರಾಗಿದ್ದರು. 2016ರಲ್ಲಿ ಅಫ್ಘಾನಿಸ್ತಾನ ಕ್ರಿಕೆಟ್‌ ತಂಡಕ್ಕೆ ಕೋಚ್‌ ಆಗಿ ಕಾರ‍್ಯನಿರ್ವಹಿಸಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕಾಕ್‌ ಡ್ಯಾಶಿಂಗ್‌ ಆಟದ ಮುಂದೆ ಥಂಡಾ ಹೊಡೆದ ಟೀಮ್‌ ಇಂಡಿಯಾ!
ಭಾರತ-ಪಾಕಿಸ್ತಾನ ಟಿ20 ವಿಶ್ವಕಪ್ ಪಂದ್ಯದ ಟಿಕೆಟ್ ಮಾರಾಟ ಆರಂಭ, 450 ರೂಗೆ ಬುಕಿಂಗ್ ಹೇಗೆ?