ಟಿ20 ವಿಶ್ವಕಪ್ ಗೆಲ್ಲಲು ಪಾಕ್ ಮಾಸ್ಟರ್ ಪ್ಲಾನ್; ಭಾರತದ ಕೋಚ್ ಈಗ ಪಾಕ್ ಗುರು..!

Published : Apr 28, 2024, 04:33 PM IST
ಟಿ20 ವಿಶ್ವಕಪ್ ಗೆಲ್ಲಲು ಪಾಕ್ ಮಾಸ್ಟರ್ ಪ್ಲಾನ್; ಭಾರತದ ಕೋಚ್ ಈಗ ಪಾಕ್ ಗುರು..!

ಸಾರಾಂಶ

ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಹೊಸ ಕೋಚಿಂಗ್ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿದೆ. 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಎಂ ಎಸ್ ಧೋನಿ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತ ತಂಡದ ಕೋಚ್ ಆಗಿದ್ದ ಗ್ಯಾರಿ ಕರ್ಸ್ಟನ್‌, ಇದೀಗ ಪಾಕಿಸ್ತಾನ ಸೀಮಿತ ಓವರ್‌ಗಳ ತಂಡದ ಹೆಡ್‌ ಕೋಚ್ ಆಗಿ ನೇಮಕವಾಗಿದ್ದಾರೆ.

ಕರಾಚಿ(ಏ.28): ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿವೆ. ಮುಂಬರುವ ಜೂನ್ 01ರಿಂದ ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ಚುಟುಕು ಕ್ರಿಕೆಟ್ ವಿಶ್ವಕಪ್ ಜರುಗಲಿದ್ದು, ಭಾರತ, ಪಾಕಿಸ್ತಾನ, ಇಂಗ್ಲೆಂಡ್ ಸೇರಿದಂತೆ 20 ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ. ಇನ್ನು ಭಾರತದಂತೆ ಸಾಕಷ್ಟು ಸಮಯದಿಂದ ಟಿ20 ವಿಶ್ವಕಪ್ ಟ್ರೋಫಿ ಬರ ಎದುರಿಸುತ್ತಾ ಬಂದಿರುವ ಪಾಕಿಸ್ತಾನ ಇದೀಗ ಶತಾಯಗತಾಯ ಈ ಬಾರಿ ಐಸಿಸಿ ಟಿ20 ವಿಶ್ವಕಪ್ ಟ್ರೋಫಿ ಜಯಿಸಲು ಮಾಸ್ಟರ್ ಪ್ಲಾನ್ ರೂಪಿಸಿದ್ದು, ಯುದ್ಧಕಾಲ ಶಸ್ತ್ರಾಭ್ಯಾಸ ಆರಂಭಿಸಿದೆ.

ಹೌದು, ಮುಂಬರುವ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಹೊಸ ಕೋಚಿಂಗ್ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿದೆ. 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಎಂ ಎಸ್ ಧೋನಿ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತ ತಂಡದ ಕೋಚ್ ಆಗಿದ್ದ ಗ್ಯಾರಿ ಕರ್ಸ್ಟನ್‌, ಇದೀಗ ಪಾಕಿಸ್ತಾನ ಸೀಮಿತ ಓವರ್‌ಗಳ ತಂಡದ ಹೆಡ್‌ ಕೋಚ್ ಆಗಿ ನೇಮಕವಾಗಿದ್ದಾರೆ. ಇನ್ನು ಆಸ್ಟ್ರೇಲಿಯಾದ ಮಾಜಿ ವೇಗಿ ಜೇಸನ್ ಗಿಲೆಸ್ಪಿ, ಪಾಕಿಸ್ತಾನ ಟೆಸ್ಟ್ ತಂಡದ ಹೆಡ್ ಕೋಚ್ ಆಗಿ ನೇಮಕವಾಗಿದ್ದಾರೆ. ಇನ್ನು ಅಜರ್ ಮಹಮೂದ್ ಪಾಕಿಸ್ತಾನ ಎಲ್ಲಾ ಮಾದರಿಯ ಕ್ರಿಕೆಟ್‌ನ ಸಹಾಯಕ ಕೋಚ್ ಆಗಿ ನೇಮಕವಾಗಿದ್ದಾರೆ.

IPL 2024: ಗುಜರಾತ್ ಟೈಟಾನ್ಸ್ ಎದುರು ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ, ತಂಡ ಕೂಡಿಕೊಂಡ ಮ್ಯಾಕ್ಸ್‌ವೆಲ್

ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಚೇರ್‌ಮನ್ ಮೊಹ್ಸಿನ್ ಖಾನ್, ಲಾಹೋರ್‌ನ ಗಢಾಫಿ ಸ್ಟೇಡಿಯಂನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಈ ವಿಚಾರವನ್ನು ತಿಳಿಸಿದ್ದಾರೆ. "ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿಯುತ್ತಿದ್ದಂತೆಯೇ ತಕ್ಷಣಕ್ಕೆ ಜಾರಿಗೆ ಬರುವಂತೆ ಗ್ಯಾರಿ ಕರ್ಸ್ಟನ್, ಪಾಕಿಸ್ತಾನ ಸೀಮಿತ ಓವರ್‌ಗಳ ತಂಡದ ಹೆಡ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಕರ್ಸ್ಟನ್ ಮಾರ್ಗದರ್ಶನದಲ್ಲಿ ಪಾಕಿಸ್ತಾನ ತಂಡವು ಮುಂಬರುವ ಐಸಿಸಿ ಟಿ20 ವಿಶ್ವಕಪ್ ಹಾಗೂ ಇನ್ನಿತರ ದ್ವಿಪಕ್ಷೀಯ ಸರಣಿಗಳನ್ನು ಆಡಲಿದೆ. ಇನ್ನು ಗ್ಯಾರಿ ಕರ್ಸ್ಟನ್‌ 2025ರಲ್ಲಿ ಪಾಕಿಸ್ತಾನದಲ್ಲೇ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲೂ ಪಾಕಿಸ್ತಾನ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಆ ಬಳಿಕ 2025ರ ಏಷ್ಯಾಕಪ್ ಹಾಗೂ 2026ರಲ್ಲಿ ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯವರೆಗೂ ಪಾಕಿಸ್ತಾನದ ಕೋಚ್ ಆಗಿ ಇರಲಿದ್ದಾರೆ" ಎಂದು ಪಿಸಿಬಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ

ದಕ್ಷಿಣ ಆಫ್ರಿಕಾದ ದಿಗ್ಗಜ ಕ್ರಿಕೆಟಿಗ ಗ್ಯಾರಿ ಕರ್ಸ್ಟನ್‌, ಈಗಾಗಲೇ ಭಾರತ ಮಾತ್ರವಲ್ಲದೇ ಐಪಿಎಲ್‌ನಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೋಚ್ ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಸದ್ಯ ಗ್ಯಾರಿ ಕರ್ಸ್ಟನ್, 17ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ ತಂಡದ ಬ್ಯಾಟಿಂಗ್ ಕೋಚ್ ಹಾಗೂ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್