ಬಾಂಗ್ಲಾದೇಶ ಮಾತ್ರವಲ್ಲ ಪಾಕಿಸ್ತಾನವೂ ಟಿ20 ವಿಶ್ವಕಪ್‌ನಿಂದ ಔಟ್! ಸಿದ್ದತೆ ನಿಲ್ಲಿಸಿದ ಪಾಕ್!

Published : Jan 20, 2026, 02:14 PM IST
Pakistan Cricket Team

ಸಾರಾಂಶ

2026ರ ಐಸಿಸಿ ಟಿ20 ವಿಶ್ವಕಪ್‌ಗೆ ಭಾರತದಲ್ಲಿ ಆಡಲು ಬಾಂಗ್ಲಾದೇಶ ಬಹಿಷ್ಕಾರ ಹಾಕಿದ್ದು, ಇದಕ್ಕೆ ಪಾಕಿಸ್ತಾನ ಬೆಂಬಲ ಸೂಚಿಸಿದೆ. ಆಟಗಾರರ ಸುರಕ್ಷತೆಯ ಕಾರಣ ನೀಡಿರುವ ಬಾಂಗ್ಲಾದೇಶದ ನಿಲುವನ್ನು ಪಾಕಿಸ್ತಾನ ಸಮರ್ಥಿಸಿಕೊಂಡಿದ್ದು, ತಾನೂ ಕೂಡ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆಯನ್ನು ಪರಿಶೀಲಿಸುತ್ತಿದೆ.

ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಹೊಸ ಕ್ಯಾತೆ ತೆಗೆದಿದೆ. ಪಾಕಿಸ್ತಾನ ಇದೀಗ ಭಾರತದಲ್ಲಿ ಆಡುವುದನ್ನು ಬಹಿಷ್ಕರಿಸುವ ಬಾಂಗ್ಲಾದೇಶದ ನಿರ್ಧಾರಕ್ಕೆ ಬೆಂಬಲ ಘೋಷಿಸಿದೆ. ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಪ್ರತಿಷ್ಠಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಸಿದ್ದತೆ ಮಾಡುವುದನ್ನು ಪಾಕಿಸ್ತಾನ ತಂಡವು ನಿಲ್ಲಿಸಿದೆ ಎಂದು ಪಾಕಿಸ್ತಾನದ ಜಿಯೋ ನ್ಯೂಸ್ ವರದಿ ಮಾಡಿದೆ. ಈ ಮೂಲಕ ಪಾಕಿಸ್ತಾನ ತಂಡ ಕೂಡಾ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಿಂದ ಹೊರಗುಳಿಯಲು ತೀರ್ಮಾನಿಸಿದೆಯೇ ಎನ್ನುವ ಅನುಮಾನ ಶುರುವಾಗಿದೆ. ಇನ್ನು ಈ ಕುರಿತಂತೆ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಈ ವರದಿಯನ್ನು ಖಚಿತಪಡಿಸಿ ಯಾವುದೇ ಹೇಳಿಕೆ ನೀಡಿಲ್ಲ.

ಬಾಂಗ್ಲಾದೇಶದ ಬಹಿಷ್ಕಾರದ ನಿಲುವಿಗೆ ಕಾರಣ

ಇತ್ತೀಚೆಗೆ, ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ನಡುವೆ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೂಚನೆ ಮೇರೆಗೆ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರಹಮಾನ್ ಅವರನ್ನು ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಐಪಿಎಲ್ 2026 ತಂಡದಿಂದ ಬಿಡುಗಡೆ ಮಾಡಲಾಗಿತ್ತು. ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ತಮ್ಮ ಆಟಗಾರರ "ಸುರಕ್ಷತೆ ಮತ್ತು ಭದ್ರತೆ"ಯ ಬಗ್ಗೆ ಕಳವಳ ವ್ಯಕ್ತಪಡಿಸಿ, ತಮ್ಮ ಪಂದ್ಯಗಳನ್ನು ಭಾರತದ ಹೊರಗಿನ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ)ಗೆ ಮನವಿ ಮಾಡಿದೆ.

ಬಾಂಗ್ಲಾದೇಶ ಬೆನ್ನಿಗೆ ನಿಂದ ಪಾಕಿಸ್ತಾನ

ಬಾಂಗ್ಲಾದೇಶದ ಭದ್ರತಾ ಕಳವಳಗಳನ್ನು "ಸಮಂಜಸವಾದದ್ದು" ಎಂದು ಬಣ್ಣಿಸಿರುವ ಪಾಕಿಸ್ತಾನ, ಜನವರಿ 19 ರಂದು ತಮ್ಮ ಟಿ20 ವಿಶ್ವಕಪ್ ಪಂದ್ಯಗಳಿಗಾಗಿ ಭಾರತಕ್ಕೆ ಪ್ರಯಾಣಿಸದಿರುವ ಬಿಸಿಬಿಯ ನಿರ್ಧಾರಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಇಸ್ಲಾಮಾಬಾದ್ ಮೂಲದ ಜಿಯೋ ನ್ಯೂಸ್ ಪ್ರಕಾರ, ಪಾಕಿಸ್ತಾನ ಟೂರ್ನಿಯಲ್ಲಿ ಭಾಗವಹಿಸದಿರಲು ನಿರ್ಧರಿಸಿದರೆ, ಪರ್ಯಾಯ ಯೋಜನೆಯನ್ನು ಸಿದ್ಧಪಡಿಸುವಂತೆ ಪಾಕಿಸ್ತಾನ ತಂಡದ ಆಡಳಿತ ಮಂಡಳಿಗೆ ಸೂಚಿಸಲಾಗಿದೆ ಎನ್ನಲಾಗಿದೆ. ಒಂದು ವೇಳೆ ಬಾಂಗ್ಲಾದೇಶದ ಸಮಸ್ಯೆ ಬಗೆಹರಿಯದಿದ್ದರೆ ಟಿ20 ವಿಶ್ವಕಪ್‌ನಲ್ಲಿ ತನ್ನ ಭಾಗವಹಿಸುವಿಕೆಯ ವಿಚಾರವನ್ನು ಮರುಪರಿಶೀಲಿಸುವುದಾಗಿ ಪಾಕಿಸ್ತಾನ ಹೇಳಿದೆ ಎಂದು ಮಾಧ್ಯಮ ವರದಿ ಮಾಡಿದೆ.

ಇದಲ್ಲದೆ, ಶ್ರೀಲಂಕಾದಲ್ಲಿ ಸ್ಥಳಗಳು ಲಭ್ಯವಿಲ್ಲದಿದ್ದರೆ ಬಾಂಗ್ಲಾದೇಶದ ಟಿ20 ವಿಶ್ವಕಪ್ ಪಂದ್ಯಗಳನ್ನು ಆಯೋಜಿಸಲು ಪಿಸಿಬಿ ಸಿದ್ಧವಿದೆ ಎಂದು ಹೇಳಿದೆ. 

 

ಐಸಿಸಿ ಮೂಲಗಳ ಪ್ರಕಾರ, ಐಸಿಸಿ ಮಂಡಳಿಯು ಜನವರಿ 21ರೊಳಗೆ ಬಾಂಗ್ಲಾದೇಶ ಕ್ರಿಕೆಟ್ ತಂಡವನ್ನು ಮುಂಬರುವ ಐಸಿಸಿ ವಿಶ್ವಕಪ್‌ಗೆ ಭಾರತಕ್ಕೆ ಕಳುಹಿಸುತ್ತದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಅಂತಿಮ ನಿರ್ಧಾರವನ್ನು ನೀಡುವಂತೆ ಬಿಸಿಬಿಗೆ ಗಡುವು ನೀಡಿತ್ತು. ಬಿಸಿಬಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸಲು ನಿರಾಕರಿಸಿದರೆ, ಐಸಿಸಿ ಬದಲಿ ತಂಡವನ್ನು ಹೆಸರಿಸುವ ಸಾಧ್ಯತೆಯಿದೆ. ಒಂದು ವೇಳೆ ಬಾಂಗ್ಲಾದೇಶ ತಂಡವು ಭಾರತಕ್ಕೆ ಬರಲು ನಿರಾಕರಿಸಿದರೆ, ಆ ಬದಲಿಗೆ ಸ್ಕಾಟ್ಲೆಂಡ್ ತಂಡಕ್ಕೆ ಅವಕಾಶ ಸಿಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ಬಾಂಗ್ಲಾದೇಶದ ಟಿ20 ವಿಶ್ವಕಪ್ ವೇಳಾಪಟ್ಟಿ

ಟಿ20 ವಿಶ್ವಕಪ್ ಫೆಬ್ರವರಿ 7 ರಂದು ಆರಂಭವಾಗಲಿದೆ. ಬಾಂಗ್ಲಾದೇಶವು ಫೆಬ್ರವರಿ 7 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ವಿರುದ್ಧ ತನ್ನ ಟಿ20 ವಿಶ್ವಕಪ್ 2026 ಅಭಿಯಾನವನ್ನು ಆರಂಭಿಸಲಿದೆ. ನಂತರ ಫೆಬ್ರವರಿ 9 ರಂದು ಅದೇ ಸ್ಥಳದಲ್ಲಿ ಇಟಲಿಯನ್ನು ಎದುರಿಸಲಿದೆ, ನಂತರ ಇಂಗ್ಲೆಂಡ್ ವಿರುದ್ಧ ಸೆಣಸಾಡಲಿದೆ ಮತ್ತು ಫೆಬ್ರವರಿ 17 ರಂದು ನೇಪಾಳ ವಿರುದ್ಧ ಮುಂಬೈನ ವಾಂಖೇಡೆ ಮೈದಾನದಲ್ಲಿ ಕೊನೆಯ ಗ್ರೂಪ್ ಹಂತದ ಪಂದ್ಯವನ್ನಾಡಲಿದೆ

ಪಾಕಿಸ್ತಾನದ ಟಿ20 ವಿಶ್ವಕಪ್ ವೇಳಾಪಟ್ಟಿ

ಮತ್ತೊಂದೆಡೆ, ಪಾಕಿಸ್ತಾನವು 'ಗ್ರೂಪ್ ಎ'ನಲ್ಲಿ ಸ್ಥಾನ ಪಡೆದಿದ್ದು, ಇದೇ ಗುಂಪಿನಲ್ಲಿ ಹಾಲಿ ಚಾಂಪಿಯನ್ ಭಾರತ, ಯುಎಸ್‌ಎ, ನೆದರ್ಲ್ಯಾಂಡ್ಸ್ ಮತ್ತು ನಮೀಬಿಯಾ ತಂಡಗಳು ಸ್ಥಾನ ಪಡೆದಿವೆ. ಫೆಬ್ರವರಿ 7 ರಂದು ನೆದರ್ಲ್ಯಾಂಡ್ಸ್ ವಿರುದ್ಧ ತನ್ನ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ. ಇನ್ನು ಫೆಬ್ರವರಿ 15ರಂದು ಸಾಂಪ್ರದಾಯಿಕ ಎದುರಾಳಿ ಭಾರತವನ್ನು ಎದುರಿಸಲಿದೆ. ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿದೆ. ಅಂದಹಾಗೆ ಪಾಕಿಸ್ತಾನದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಿವೀಸ್ ಎದುರಿನ ಸೋಲಿನ ಬೆನ್ನಲ್ಲೇ ರೋಹಿತ್ ಮಾತ್ರವಲ್ಲ ಕೊಹ್ಲಿಗೂ ಬಿಗ್ ಶಾಕ್ ನೀಡಲು ರೆಡಿಯಾದ ಬಿಸಿಸಿಐ!
ನಿಮಗೇನು ಹುಚ್ಚು ಹಿಡಿದಿದೆಯಾ? Virat Kohli ಹೀಗಂದಿದ್ದು ಯಾರಿಗೆ? ವಿಡಿಯೋ ವೈರಲ್