3ನೇ ಟಿ20 ರದ್ದು, ಪಾಕ್‌ಗೆ 2-0ಯಲ್ಲಿ ಸರಣಿ ಕೈವಶ

Suvarna News   | Asianet News
Published : Jan 28, 2020, 01:35 PM IST
3ನೇ ಟಿ20 ರದ್ದು, ಪಾಕ್‌ಗೆ 2-0ಯಲ್ಲಿ ಸರಣಿ ಕೈವಶ

ಸಾರಾಂಶ

ಟಿ20 ಕ್ರಿಕೆಟ್‌ನಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಪಾಕಿಸ್ತಾನ ತಂಡವು ಬಾಂಗ್ಲಾದೇಶ ವಿರುದ್ಧ 2-0 ಅಂತರದಲ್ಲಿ ಸರಣಿ ಗೆಲ್ಲುವ ಮೂಲಕ ಜಯದ ಹಳಿಗೆ ಮರಳಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ..

ಲಾಹೋರ್‌(ಜ.28): ಮಳೆ ಹಾಗೂ ಮಂದ ಬೆಳಕಿನ ಕಾರಣದಿಂದ ಇಲ್ಲಿ ಸೋಮವಾರ ನಡೆಯಬೇಕಿದ್ದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಣ 3ನೇ ಟಿ20 ಪಂದ್ಯ ಒಂದೂ ಎಸೆತ ಕಾಣದೇ ರದ್ದಾಯಿತು. ಹೀಗಾಗಿ 3 ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ 2 ಪಂದ್ಯ ಗೆದ್ದಿದ್ದ ಪಾಕಿಸ್ತಾನ 2-0 ಯಿಂದ ಸರಣಿ ವಶಪಡಿಸಿಕೊಂಡಿದೆ. 

ವಿಶ್ವಕಪ್‌ನಲ್ಲಿ ಭಾಗವಹಿಸಲ್ಲ ಎಂದ ಪಿಸಿಬಿ U ಟರ್ನ್

ಮೊದಲ ಪಂದ್ಯವನ್ನು ಪಾಕಿಸ್ತಾನ 5 ವಿಕೆಟ್‌ಗಳಿಂದ ಹಾಗೂ 2ನೇ ಪಂದ್ಯವನ್ನು 9 ವಿಕೆಟ್‌ಗಳಿಂದ ಜಯಿಸಿತ್ತು. ಸರಣಿ ಜಯದೊಂದಿಗೆ ಪಾಕಿಸ್ತಾನ ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂ.1 ಸ್ಥಾನ ಉಳಿಸಿಕೊಂಡಿದೆ.

ಬಾಂಗ್ಲಾ ಸರಣಿಗೂ ಮುನ್ನ ಪಾಕಿಸ್ತಾನ ಸತತ 7 ಸೋಲು ಕಂಡು ಮುಖಭಂಗ ಅನುಭವಿಸಿತ್ತು. 2019ರಲ್ಲಿ ಪಾಕಿಸ್ತಾನ ಆಡಿದ 9 ಟ ಅದರಲ್ಲೂ ತವರಿನಲ್ಲಿ ಶ್ರೀಲಂಕಾ ಎದುರು ಹಾಗೆಯೇ ಆಸೀಸ್ ಪ್ರವಾಸದಲ್ಲಿ ಆಸ್ಟ್ರೇಲಿಯಾ ಎದುರು ಪಾಕಿಸ್ತಾನ ಹೀನಾಯ ಸೋಲು ಅನುಭವಿಸಿತ್ತು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?