
ಬೆಂಗಳೂರು(ಜ.23): ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಥಿಗಳಿಗಾಗಿ ಆಯೋಜಿಸುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ಹೇಗೆ ತಯಾರಿ ನಡೆಸಬೇಕು, ಭಯ ನಿವಾರಿಸಬೇಕು ಅನ್ನೋ ಕುರಿತು ಮೋದಿ ಮಕ್ಕಳಿಗೆ ಪಾಠ ಹೇಳಿದ್ದಾರೆ. ಈ ವೇಳೆ ವಿದ್ಯಾರ್ಥಿಗಳನ್ನು ಉತ್ತೇಜನಗೊಳಿಸಲು ಮೋದಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಹಾಗೂ ವಿವಿಎಸ್ ಲಕ್ಷಣ್ಣ ಉದಾಹರಣೆ ನೀಡಿದ್ದರು.
ಇದನ್ನೂ ಓದಿ: ಪರೀಕ್ಷಾ ಪೇ ಚರ್ಚಾ: ಮಕ್ಕಳಿಗೆ ದ್ರಾವಿಡ್-ಕುಂಬ್ಳೆ ಸ್ಫೂರ್ತಿ ಎಂದ ಪ್ರಧಾನಿ ಮೋದಿ!
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತನ್ನನ್ನು ಉದಾಹರಿಸಿದ ಪ್ರಧಾನಿ ನರೇಂದ್ರ ಮೋದಿಗೆ ಭಾರತ ಕ್ರಿಕೆಟ್ ತಂಡ ಮಾಜಿ ನಾಯಕ ಅನಿಲ್ ಕುಂಬ್ಳೆ ಧನ್ಯವಾದ ಸಲ್ಲಿಸಿದ್ದಾರೆ. ಇಷ್ಟೇ ಅಲ್ಲ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದ್ದಾರೆ.
ಇದನ್ನೂ ಓದಿ: ಎಂದೆಂದಿಗೂ ನೀ ಕನ್ನಡವಾಗಿರು; ಸವಾಲು ಸ್ವೀಕರಿಸಿ ಕುವೆಂಪು ಕವನ ಓದಿದ ಕುಂಬ್ಳೆ!
ಆಸ್ಪ್ರೇಲಿಯಾ ವಿರುದ್ದ ಟೆಸ್ಟ್ ಪಂದ್ಯದಲ್ಲಿ ಫಾಲೋಆನ್ ಇದ್ದರೂ ರಾಹುಲ್ ದ್ರಾವಿಡ್ ಹಾಗೂ ವಿವಿಎಸ್ ಲಕ್ಷಣ್ ಉತ್ತಮ ಜತೆಯಾಟವಾಡಿ ಭಾರತವನ್ನು ಗೆಲ್ಲಿಸಿದ್ದು, ದವಡೆ ಮುರಿದರೂ ಅನಿಲ್ ಕುಂಬ್ಳೆ ಬೌಲಿಂಗ್ (2002ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದ ವೇಳೆ) ಮಾಡಿದ್ದು ಮರೆಯಲು ಸಾಧ್ಯವಾ? ಇದು ಪ್ರೇರಣೆ ಮತ್ತು ಸಕಾರಾತ್ಮಕ ಚಿಂತನೆಯ ಫಲ ಎಂದು ಪ್ರಧಾನಿ ಹೇಳಿದ್ದರು.
ಇದಕ್ಕೆ ಟ್ವೀಟ್ ಮೂಲಕ ಧನ್ಯವಾದ ಸಲ್ಲಿಸಿರುವ ಕುಂಬ್ಳೆ, ಪ್ರಧಾನಿ ನನ್ನ ಹೆಸರು ಉಲ್ಲೇಖಿಸಿದ್ದು ಗೌರವ ತಂದಂತಾಗಿದೆ. ಧನ್ಯವಾದ ಮೋದಿಯವರೇ. ಪರೀಕ್ಷೆ ಬರೆಯುವರಿಗೆ ಶುಭವಾಗಲಿ ಎಂದು ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.