
ಮೆಲ್ಬರ್ನ್: ಆಸ್ಟ್ರೇಲಿಯಾ ತಂಡದ ಯಶಸ್ವಿ ನಾಯಕ ಪ್ಯಾಟ್ ಕಮಿನ್ಸ್ ಎರಡನೇ ಬಾರಿಗೆ ತಂದೆಯಾಗಿದ್ದಾರೆ. ಅವರ ಪತ್ನಿ ಬೆಕೆ ಕಮಿನ್ಸ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬಾರ್ಡರ್-ಗವಾಸ್ಕರ್ ಟ್ರೋಫಿಯ ನಂತರ ಕಮಿನ್ಸ್ ಕ್ರಿಕೆಟ್‌ನಿಂದ ದೀರ್ಘ ವಿರಾಮ ತೆಗೆದುಕೊಂಡಿದ್ದರು, ಇದಕ್ಕೆ ಮುಖ್ಯ ಕಾರಣ ಇದೇ ಆಗಿತ್ತು. ಈಗ ಚಾಂಪಿಯನ್ಸ್ ಟ್ರೋಫಿ 2025 ಕ್ಕೂ ಮುನ್ನ ಅವರಿಗೆ ಒಂದು ದೊಡ್ಡ ಸಿಹಿ ಸುದ್ದಿ. ಆಸ್ಟ್ರೇಲಿಯಾದ ಕ್ರಿಕೆಟಿಗ ತಂದೆಯಾಗುವ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಕಮಿನ್ಸ್ 2021 ರಲ್ಲಿ ಮೊದಲ ಬಾರಿಗೆ ಗಂಡು ಮಗುವಿನ ತಂದೆಯಾಗಿದ್ದರು.
ವಿಶ್ವಕಪ್ ವಿಜೇತ ನಾಯಕ ಕಮಿನ್ಸ್ ಮತ್ತು ಬೆಕೆ ಕಮಿನ್ಸ್ 2022 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇದಕ್ಕೂ ಮುನ್ನ ಅವರು 2020 ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇಬ್ಬರೂ ದೀರ್ಘಕಾಲದಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು. ಅವರ ಮಗನ ಜನನ ಮದುವೆಗೆ ಮೊದಲೇ ಆಗಿತ್ತು.
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಆಸ್ಟ್ರೇಲಿಯಾಗೆ ಮತ್ತೊಮ್ಮೆ ಬಿಗ್ ಶಾಕ್; ಮಾರ್ಷ್ ಸೇರಿ ನಾಲ್ವರು ಟೂರ್ನಿಯಿಂದ ಔಟ್!
ಶ್ರೀಲಂಕಾ ಪ್ರವಾಸದಿಂದ ಹೊರಗುಳಿದಿದ್ದ ಕಮಿನ್ಸ್
ಆಸ್ಟ್ರೇಲಿಯಾ ತಂಡ ಈಗ ಶ್ರೀಲಂಕಾ ಪ್ರವಾಸದಲ್ಲಿದೆ, ಅಲ್ಲಿ 2 ಟೆಸ್ಟ್ ಪಂದ್ಯಗಳ ಸರಣಿ ನಡೆಯುತ್ತಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿದೆ. ಎರಡನೇ ಪಂದ್ಯ ನಡೆಯುತ್ತಿದೆ. ಈ ಪ್ರವಾಸದಿಂದ ಆಸ್ಟ್ರೇಲಿಯಾದ ನಾಯಕ ಕಮಿನ್ಸ್ ಹೊರಗುಳಿದಿದ್ದರು. ಹೀಗಾಗಿ ಕಮಿನ್ಸ್ ಅನುಪಸ್ಥಿತಿಯಲ್ಲಿ ಸ್ಟೀವ್ ಸ್ಮಿತ್ ನಾಯಕನಾಗಿ ಲಂಕಾ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಇನ್ನು ಭಾರತ ಎದುರಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಸಮಯದಲ್ಲಿ ಕಮಿನ್ಸ್‌ಗೆ ಗಾಯವಾಗಿತ್ತು. ಗಾಯದ ನಡುವೆಯೂ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿ ದಶಕದ ಬಳಿಕ ಆಸ್ಟ್ರೇಲಿಯಾ ತಂಡವು ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ವಿರಾಟ್ ಕೊಹ್ಲಿ 2ನೇ ಏಕದಿನ ಪಂದ್ಯ ಆಡ್ತಾರಾ? ಮಹತ್ವದ ಅಪ್‌ಡೇಟ್ ಕೊಟ್ಟ ಗೌತಮ್ ಗಂಭೀರ್
ಆಸೀಸ್‌ನ ನಾಲ್ವರು ಸ್ಟಾರ್ ಆಟಗಾರರು ಔಟ್:
ಗಾಯದ ಸಮಸ್ಯೆಯಿಂದ ಆಲ್ರೌಂಡರ್ ಮಿಚೆಲ್ ಮಾರ್ಷ್ ಹೊರಬಿದ್ದಿದ್ದರು. ಇನ್ನು ಮತ್ತೋರ್ವ ಆಲ್ರೌಂಡರ್ ಮಾರ್ಕಸ್ ಸ್ಟೋನಿಸ್ ದಿಢೀರ್ ಎನ್ನುವಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ಮಾರಕ ವೇಗಿ ಜೋಶ್ ಹೇಜಲ್‌ವುಡ್ ಕೂಡಾ ಇದೀಗ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಚಾಂಪಿಯನ್ಸ್ ಟ್ರೋಫಿ: ಆಸ್ಟ್ರೇಲಿಯಾಗೆ ಹಿನ್ನಡೆ
ಪ್ಯಾಟ್ ಕಮಿನ್ಸ್ ಆಸ್ಟ್ರೇಲಿಯಾ ಪರ ನಾಯಕನಾಗಿ ಐಸಿಸಿ ವಿಶ್ವಕಪ್, ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್, ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದಿದ್ದಾರೆ. ಆದರೆ ಫಿಟ್ನೆಸ್ ಸಮಸ್ಯೆಯಿಂದಾಗಿ ನಾಯಕ ಪ್ಯಾಟ್ ಕಮಿನ್ಸ್ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಿಂದ ಹೊರಬಿದ್ದಿದ್ದಾರೆ.
ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯು ಫೆಬ್ರವರಿ 19ರಿಂದ ಪಾಕಿಸ್ತಾನದಲ್ಲಿ ಆರಂಭವಾಗಲಿದೆ. ಆದರೆ ಆಸ್ಟ್ರೇಲಿಯಾ ತಂಡವು ಫೆಬ್ರವರಿ 22ರಂದು ತನ್ನ ಬದ್ದ ಎದುರಾಳಿ ಇಂಗ್ಲೆಂಡ್ ವಿರುದ್ದ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ಈ ಪಂದ್ಯಕ್ಕೆ ಲಾಹೋರ್‌ನಲ್ಲಿರುವ ಕ್ರಿಕೆಟ್ ಮೈದಾನ ಆತಿಥ್ಯ ವಹಿಸಲಿದೆ. ಇನ್ನು ಇದಾದ ಬಳಿಕ ಫೆಬ್ರವರಿ 25ರಂದು ದಕ್ಷಿಣ ಆಫ್ರಿಕಾ ವಿರುದ್ಧ ರಾವಲ್ಪಿಂಡಿಯಲ್ಲಿ ಹಾಗೂ ಫೆಬ್ರವರಿ 28ರಂದು ಆಫ್ಘಾನಿಸ್ತಾನ ಎದುರು ಲಾಹೋರ್‌ನಲ್ಲಿ ಕಾದಾಡಲಿದೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.