ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡವು ಆರಂಭಿಕ ಆಘಾತ ಅನುಭವಿಸಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ
ಪರ್ತ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಟೀಂ ಇಂಡಿಯಾ ಮೂರನೇ ಓವರ್‌ನಲ್ಲೇ ಆರಂಭಿಕ ಆಘಾತ ಅನುಭವಿಸಿದ್ದು, ಎಡಗೈ ಬ್ಯಾಟರ್ ಯಶಸ್ವಿ ಜೈಸ್ವಾಲ್ ಖಾತೆ ತೆರೆಯುವ ಮುನ್ನವೇ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್ ಒಪ್ಪಿಸಿದ್ದಾರೆ. ಸದ್ಯ ಭಾರತ 5 ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿದೆ.
ಭಾರತ ತಂಡವು 4 ವೇಗಿಗಳೊಂದಿಗೆ ಕಣಕ್ಕಿಳಿದಿದ್ದು, ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಕಣಕ್ಕಿಳಿದಿದೆ. ಭಾರತ ಪರ್ತ್ ಟೆಸ್ಟ್‌ಗೆ ಏಕೈಕ ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದಿದ್ದು ವಾಷಿಂಗ್ಟನ್ ಸುಂದರ್‌ಗೆ ಮಣೆ ಹಾಕಲಾಗಿದ್ದು, ಜಡೇಜಾ ಹಾಗೂ ಅಶ್ವಿನ್ ಅವರನ್ನು ಕೈಬಿಡಲಾಗಿದೆ. ಭಾರತ ತಂಡವು ನಿರೀಕ್ಷೆಯಂತೆಯೇ ಯಶಸ್ವಿ ಜೈಸ್ವಾಲ್ ಹಾಗೂ ಕೆ ಎಲ್ ರಾಹುಲ್ ಆರಂಭಿಕರಾಗಿ ಕಣಕ್ಕಿಳಿದಿದೆ. ಇನ್ನು ಕನ್ನಡಿಗ ದೇವದತ್ ಪಡಿಕ್ಕಲ್ ಕೂಡಾ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗಿದೆ.
undefined
ನಿತೀಶ್ ರೆಡ್ಡಿ-ನಿತೀಶ್ ರೆಡ್ಡಿ ಪಾದಾರ್ಪಣೆ: ಪ್ರತಿಭಾನ್ವಿತ ಆಲ್ರೌಂಡರ್ ಆಗಿರುವ ನಿತೀಶ್ ರೆಡ್ಡಿ ಹಾಗೂ ವೇಗಿ ಹರ್ಷಿತ್ ರಾಣಾ ಇದೇ ಮೊದಲ ಬಾರಿಗೆ ಭಾರತ ಟೆಸ್ಟ್‌ಗೆ ಪಾದಾರ್ಪಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಭಾರತ ತಂಡವು ನಿತೀಶ್ ರೆಡ್ಡಿ, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಅವರ ರೀತಿಯಲ್ಲಿ ಒಟ್ಟು ನಾಲ್ವರು ವೇಗಿಗಳೊಂದಿಗೆ ಕಣಕ್ಕಿಳಿದಿದ್ದಾರೆ.