
ಅಹಮದಾಬಾದ್(ಪೆ.24): ವಿಶ್ವದ ಅತಿದೊಡ್ಡ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ತಂಡ ಮೊದಲ ಇನಿಂಗ್ಸ್‌ನಲ್ಲಿ ಕೇವಲ 112 ರನ್‌ಗಳಿಗೆ ಸರ್ವಪತನ ಕಂಡಿದೆ. ಭಾರತ ಎದುರಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಅಕ್ಷರ್ ಪಟೇಲ್(38/6) ಹಾಗೂ ರವಿಚಂದ್ರನ್ ಅಶ್ವಿನ್ ಮಿಂಚಿನ ದಾಳಿಗೆ ತತ್ತರಿಸಿ ಹೋಗಿದೆ.
ಹೌದು, ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಇಂಗ್ಲೆಂಡ್ ತಂಡಕ್ಕೆ ಅಕ್ಷರ್ ಪಟೇಲ್ ಹಾಗೂ ಅಶ್ವಿನ್ ಮತ್ತೊಮ್ಮೆ ಇನ್ನಿಲ್ಲದಂತೆ ಕಾಡಿದರು. ಆರಂಭಿಕ ಬ್ಯಾಟ್ಸ್‌ಮನ್ ಜಾಕ್ ಕ್ರಾವ್ಲಿ(53) ಹೊರತು ಪಡಿಸಿ ಇಂಗ್ಲೆಂಡ್ ತಂಡದ ಉಳಿದ್ಯಾವ ಬ್ಯಾಟ್ಸ್‌ಮನ್‌ಗಳು ವೈಯುಕ್ತಿಕ 20 ರನ್ ದಾಖಲಿಸಲು ಯಶಸ್ವಿಯಾಗಲಿಲ್ಲ. ಕ್ರಾವ್ಲಿ ಜತೆಗೆ ಜೋ ರೂಟ್(17), ಬೆನ್ ಫೋಕ್ಸ್(12) ಹಾಗೂ ಜೋಫ್ರಾ ಆರ್ಚರ್(11) ಹೊರತುಪಡಿಸಿ ಉಳಿದ್ಯಾವ ಬ್ಯಾಟ್ಸ್‌ಮನ್‌ಗಳು ಎರಡಂಕಿ ಮೊತ್ತ ದಾಖಲಿಸಲು ಯಶಸ್ವಿಯಾಗಲಿಲ್ಲ.
ತವರಿನ ಪಿಚ್‌ನಲ್ಲಿ ಮಿಂಚಿದ ಅಕ್ಷರ್: ತವರಿನಲ್ಲಿ ತಮ್ಮ ವೃತ್ತಿಜೀವನದ ಎರಡನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಎಡಗೈ ಸ್ಪಿನ್ನರ್ ಅಕ್ಷರ್ ಪಟೇಲ್ ಅಮೋಘ ಬೌಲಿಂಗ್ ದಾಳಿ ನಡೆಸಿ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ಕಾಡಿದರು. ಅಕ್ಷರ್ ಪಟೇಲ್ ಕೇವಲ 38 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದರು. ಅಕ್ಷರ್‌ಗೆ ಉತ್ತಮ ಸಾಥ್ ನೀಡಿದ ಅಶ್ವಿನ್ 3 ವಿಕೆಟ್ ಕಬಳಿಸಿದರೆ, ನೂರನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಇಶಾಂತ್ ಶರ್ಮಾ ಒಂದು ವಿಕೆಟ್ ತಮ್ಮ ಖಾತೆಗೆ ಸೇರಿಸಿಕೊಂಡರು.
ಪಿಂಕ್ ಬಾಲ್ ಟೆಸ್ಟ್: ಭಾರತ ಭರ್ಜರಿ ಆರಂಭ
ನಾಟಕೀಯ ಕುಸಿತ ಕಂಡ ಇಂಗ್ಲೆಂಡ್: ಹೌದು, ಮೊದಲ ದಿನದಾಟದ ಚಹಾ ವಿರಾಮದ ವೇಳೆಗೆ 4 ವಿಕೆಟ್ ಕಳೆದುಕೊಂಡು 81 ರನ್ ಬಾರಿಸಿದ್ದ ಇಂಗ್ಲೆಂಡ್ ತಂಡ ಇದಾದ ಬಳಿಕ ನಾಟಕೀಯ ಕುಸಿತ ಕಂಡಿತು. ತನ್ನ ಖಾತೆಗೆ 31 ರನ್ ಸೇರಿಸುವಷ್ಟರಲ್ಲಿ 6 ವಿಕೆಟ್ ಕಳೆದುಕೊಳ್ಳುವ ಮೂಲಕ ದಿಢೀರ್ ಕುಸಿತ ಕಂಡಿತು.
ಸಂಕ್ಷಿಪ್ತ ಸ್ಕೋರ್:
ಇಂಗ್ಲೆಂಡ್: 112/10
ಜಾಕ್ ಕ್ರಾವ್ಲಿ: 53
ಅಕ್ಷರ್ ಪಟೇಲ್: 38/6
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.