
ಬೆಂಗಳೂರು(ಮಾ.11): ಟೀಂ ಇಂಡಿಯಾ ಆಲ್ರೌಂಡರ್ ರವೀಂದ್ರ ಜಡೇಜಾ (Ravindra Jadeja) ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 250 ಕಬಳಿಸಿದ ಭಾರತದ ಮೂರನೇ ಬೌಲರ್ ಎನಿಸಿಕೊಳ್ಳಲು ಒಳ್ಳೆಯ ಅವಕಾಶ ಕೂಡಿಬಂದಿದೆ. ಭಾರತ ಹಾಗೂ ಶ್ರೀಲಂಕಾ (India vs Sri Lanka) ತಂಡಗಳ ನಡುವೆ ಮಾರ್ಚ್ 12ರಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರಂಭವಾಗಲಿರುವ ಪಿಂಕ್ ಬಾಲ್ ಟೆಸ್ಟ್ (Pink Ball Test) ಪಂದ್ಯದಲ್ಲಿ ಮಿಂಚಲು ಜಡೇಜಾ ರೆಡಿಯಾಗಿದ್ದಾರೆ.
ರವೀಂದ್ರ ಜಡೇಜಾ ಇದುವರೆಗೂ ಟೀಂ ಇಂಡಿಯಾ (Team India) ಪರ 58 ಟೆಸ್ಟ್ ಪಂದ್ಯಗಳನ್ನಾಡಿ 241 ವಿಕೆಟ್ ಕಬಳಿಸಿದ್ದಾರೆ. ಒಂದು ವೇಳೆ ಜಡೇಜಾ ಬೆಂಗಳೂರಿನಲ್ಲಿ ನಡೆಯಲಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯದಲ್ಲಿ ಇನ್ನು 9 ವಿಕೆಟ್ ಕಬಳಿಸಿದರೆ, ರವಿಚಂದ್ರನ್ ಅಶ್ವಿನ್ (Ravichandran Ashwin) ಹಾಗೂ ಅನಿಲ್ ಕುಂಬ್ಳೆ (Anil Kumble) ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿವೇಗವಾಗಿ 250 ವಿಕೆಟ್ ಕಬಳಿಸಿದ ಭಾರತದ ಮೂರನೇ ಸ್ಪಿನ್ನರ್ ಎನ್ನುವ ಕೀರ್ತಿ ಸೌರಾಷ್ಟ್ರ ಮೂಲದ ರವೀಂದ್ರ ಜಡೇಜಾ ಪಾಲಾಗಲಿದೆ. ಶ್ರೀಲಂಕಾ ವಿರುದ್ದ ಮೊಹಾಲಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಸಹ ರವೀಂದ್ರ ಜಡೇಜಾ 9 ವಿಕೆಟ್ ಕಬಳಿಸಿದ್ದರು. ಬ್ಯಾಟಿಂಗ್‌ನಲ್ಲಿ ಅಜೇಯ 175 ರನ್ ಬಾರಿಸಿದ್ದ ಜಡೇಜಾ, ಬೌಲಿಂಗ್‌ನಲ್ಲಿ ಮೊದಲ ಇನಿಂಗ್ಸ್‌ನಲ್ಲಿ 5 ಹಾಗೂ ಎರಡನೇ ಇನಿಂಗ್ಸ್‌ನಲ್ಲಿ 4 ವಿಕೆಟ್ ಕಬಳಿಸುವುದರೊಂದಿಗೆ ಒಟ್ಟು 9 ವಿಕೆಟ್ ಪಡೆದು, ಟೀಂ ಇಂಡಿಯಾ ಸುಲಭ ಗೆಲುವು ದಾಖಲಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ರ‍್ಯಾಂಕಿಂಗ್‌ನಲ್ಲಿ ರವೀಂದ್ರ ಜಡೇಜಾ ನಂ.1 ಟೆಸ್ಟ್ ಆಲ್ರೌಂಡರ್
ಶ್ರೀಲಂಕಾ ವಿರುದ್ಧ ಮೊದಲ ಟೆಸ್ಟ್‌ನಲ್ಲಿ ಅಮೋಘ ಪ್ರದರ್ಶನ ತೋರಿದ ಭಾರತದ ರವೀಂದ್ರ ಜಡೇಜಾ ಐಸಿಸಿ ನೂತನವಾಗಿ ಬಿಡುಗಡೆ ಮಾಡಿದ ಟೆಸ್ಟ್ ಆಲ್ರೌಂಡರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ. ಮೊದಲ ಇನಿಂಗ್ಸ್‌ನಲ್ಲಿ ಅಜೇಯ 175 ರನ್ ಕಲೆಹಾಕಿದ್ದ ಅವರು, ಪಂದ್ಯದಲ್ಲಿ ಒಟ್ಟು 9 ವಿಕೆಟ್ ಕಬಳಿಸಿದ್ದರು.
Ind vs SL: ನಂ. 1 ಆಲ್ ರೌಂಡರ್ ಸ್ಥಾನಕ್ಕೇರಿದ ಸರ್ ರವೀಂದ್ರ ಜಡೇಜಾ.. ಇದೇ ಮೊದಲಲ್ಲ!
ಇದೇ ವೇಳೆ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ 17 ಸ್ಥಾನ ಏರಿಕೆ ಕಂಡು 54ರಿಂದ 37ನೇ ಸ್ಥಾನ ತಲುಪಿರುವ ಜಡೇಜಾ, ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ 17ನೇ ಸ್ಥಾನಕ್ಕೇರಿದ್ದಾರೆ. 2021ರ ಫೆಬ್ರವರಿಯಿಂದ ಅಗ್ರಸ್ಥಾನದಲ್ಲಿದ್ದ ವೆಸ್ಟ್‌ಇಂಡೀಸ್‌ನ ಜೇಸನ್ ಹೋಲ್ಡರ್‌ರನ್ನು ಹಿಂದಿಕ್ಕಿರುವ ಜಡೇಜಾ, ತಮ್ಮ ವೃತ್ತಿಬದುಕಿನಲ್ಲಿ 2ನೇ ಬಾರಿಗೆ ಅಗ್ರಸ್ಥಾನ ಪಡೆದಿದ್ದಾರೆ. ಈ ಮೊದಲು 2017ರ ಆಗಸ್ಟ್‌ನಲ್ಲಿ ಒಂದು ವಾರ ಕಾಲ ಅವರು ನಂ.1 ಸ್ಥಾನದಲ್ಲಿದ್ದರು.
ರವೀಂದ್ರ ಜಡೇಜಾಗೆ A+ ಕೆಟೆಗೆರೆಯಲ್ಲಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ ಆಕಾಶ್ ಚೋಪ್ರಾ
ಮೂರೂ ಮಾದರಿಯ ಕ್ರಿಕೆಟ್‌ನಲ್ಲಿ ಭಾರತ ತಂಡದ ಪರ ಅಮೋಘ ಪ್ರದರ್ಶನ ನೀಡುತ್ತಾ ಬಂದಿರುವ ರವೀಂದ್ರ ಜಡೇಜಾ ಅವರಿಗೆ ವಿರಾಟ್ ಕೊಹ್ಲಿ(Virat Kohli), ರೋಹಿತ್ ಶರ್ಮಾ (Rohit Sharma) ಹಾಗೂ ಜಸ್ಪ್ರೀತ್ ಬುಮ್ರಾ (Jasprit Bumrah) ಜತೆಗೆ ಬಿಸಿಸಿಐ ಕೇಂದ್ರೀಯ ಗುತ್ತಿಗೆಯಲ್ಲಿ A+ ಕೆಟೆಗೆರೆಯಲ್ಲಿ ಸ್ಥಾನ ನೀಡಬೇಕು ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಹಾಗೂ ಖ್ಯಾತ ಕ್ರಿಕೆಟ್ ವಿಶ್ಲೇಷಕ ಆಕಾಶ್ ಚೋಪ್ರಾ ಒತ್ತಾಯಿಸಿದ್ದಾರೆ.
ಬಿಸಿಸಿಐ ಇತ್ತೀಚೆಗಷ್ಟೇ ಕೇಂದ್ರೀಯ ಗುತ್ತಿಗೆ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ A ಗ್ರೇಡ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯೆ ನೀಡಿದ್ದ ಆಕಾಶ್ ಚೋಪ್ರಾ, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾ ಇರುವ A+ ಕೆಟೆಗೆರೆಯಲ್ಲಿ ಸದ್ಯ ಯಾವುದೇ ಬದಲಾವಣೆಯಾಗಿಲ್ಲ. ಆದರೆ ಈ ಕೆಟೆಗೆರೆಯಲ್ಲಿ ರವೀಂದ್ರ ಜಡೇಜಾ ಯಾಕಿಲ್ಲವೆಂದು ಅರ್ಥವಾಗುತ್ತಿಲ್ಲ. ನನ್ನ ಪ್ರಕಾರ ಜಡೇಜಾಗೆ ಆ ಪಟ್ಟಿಯೊಳಗೆ ಸ್ಥಾನ ಸಿಗಬೇಕು. ಮುಂಬರುವ ಕೇಂದ್ರೀಯ ಗುತ್ತಿಗೆ ಪ್ರಕಟವಾದಾಗ ಜಡೇಜಾ A+ ಕೆಟೆಗೆರೆಯಲ್ಲಿರಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಚೋಪ್ರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.