ನ್ಯೂಜಿಲೆಂಡ್ ODI ಸರಣಿಗೂ ಮುನ್ನ ಸಂಕಷ್ಟದಲ್ಲಿ ಭಾರತ ತಂಡ; ಕನ್ನಡಿಗ ಔಟ್, ಬದಲಿ ಆಟಗಾರ ಯಾರು?

Published : Oct 28, 2026, 08:43 PM IST
Prasidh Krishna and KL Rahul

ಸಾರಾಂಶ

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೂ ಮುನ್ನವೇ ಗಾಯದ ಸಮಸ್ಯೆಯಿಂದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇವರ ಬದಲಿಗೆ ಜಮ್ಮು ಮತ್ತು ಕಾಶ್ಮೀರದ ವೇಗಿ ಆಕಿಬ್ ನಬಿ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ. ಭಾರತ ಈಗಾಗಲೇ ಟಿ20 ಸರಣಿಯನ್ನು ವಶಪಡಿಸಿಕೊಂಡಿದೆ.

ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ತಂಡಕ್ಕೆ ಮತ್ತೊಂದು ದೊಡ್ಡ ಆಘಾತ ಆಗಿದೆ. ಗಾಯದ ಸಮಸ್ಯೆಯಿಂದ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಪ್ರಸ್ತುತ ಭಾರತ ತಂಡವು ಟಿ-20 ಪಂದ್ಯಗಳನ್ನ ಆಡುತ್ತಿದೆ. ನವೆಂಬರ್ 4 ರಿಂದ ಏಕದಿನ ಪಂದ್ಯಗಳು ಆರಂಭವಾಗಲಿವೆ. ಅದಕ್ಕೂ ಮೊದಲೇ ಆಘಾತಕಾರಿ ಸುದ್ದಿ ಹೊರಬಿದ್ದಿದೆ.

ನ್ಯೂಜಿಲೆಂಡ್ ವಿರುದ್ಧ ಭಾರತ ತಂಡದು ಒಟ್ಟು ಐದು ಏಕದಿನ ಪಂದ್ಯಗಳನ್ನ ಆಡಲಿದೆ. ಜಸ್‌ಪ್ರಿತ್ ಬುಮ್ರಾ ಕೂಡ ಏಕದಿನ ಪಂದ್ಯಗಳಿಂದ ವಿಶ್ರಾಂತಿ ನೀಡಲಾಗಿದ್ದು, ಟೆಸ್ಟ್ ಪಂದ್ಯಗಳಲ್ಲಿ ಮಾತ್ರ ಆಡಲಿದ್ದಾರೆ. ಈ ಮಧ್ಯೆ ವೇಗಿ ಪ್ರಸಿದ್ಧ್ ಕೃಷ್ಣ ಕೂಡ ಆಡುತ್ತಿಲ್ಲ ಎಂದು ಪಿಟಿಐ ವರದಿ ಮಾಡಿದೆ.

ಏನಾಗಿದೆ ಪ್ರಸಿದ್ಧ್ ಕೃಷ್ಣಗೆ?

ಇನ್ನು ತಂಡ ಪ್ರಕಟ ಮಾಡುವ ವೇಳೆ ಬಿಸಿಸಿಐ ಪ್ರಸಿದ್ಧ್ ಕೃಷ್ಣ ಅವರು ಆಡುವುದು ಅವರ ಫಿಟ್ನೆಸ್ ಮೇಲೆ ಅವಲಂಬಿತವಾಗಿದೆ ಎಂದು ಹೇಳಿತ್ತು. ಪ್ರಸಿದ್ಧ್ ಕೃಷ್ಣ ಅವರು ಮಂಡಿರಜ್ಜು ಗಾಯದಿಂದ ಬಳಲುತ್ತಿದ್ದಾರೆ. ಸದ್ಯ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದರೂ, ಫಿಟ್ನೆಸ್ ಕಾರಣದಿಂದ ಏಕದಿನ ಸರಣಿಯಲ್ಲಿ ಆಡಲು ಸಾಧ್ಯವಾಗುತ್ತಿಲ್ಲ. ಇನ್ನು, ಏಕದಿನ ಸರಣಿಯ ಐದು ಪಂದ್ಯಗಳಲ್ಲಿ ಮೊದಲು ಮೂರು ಪಂದ್ಯಗಳಿಗೆ ಮಾತ್ರ ಅವರನ್ನು ಆಯ್ಕೆ ಮಾಡಲಾಗಿತ್ತು.

ಬಿಸಿಸಿಐ ಮೂಲಗಳು ಹೇಳಿದ್ದೇನು?

ಪ್ರಸಿದ್ಧ್ ಚೆನ್ನಾಗಿ ಚೇತರಿಸಿಕೊಳ್ಳುತ್ತಿದ್ದಾರೆ.. ನವೆಂಬರ್ 1 ಮತ್ತು 2 ರಂದು ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಅವರು ಮ್ಯಾಚ್ ಸಿಮ್ಯುಲೇಶನ್ ಮತ್ತು ಫಿಟ್ನೆಸ್ ಪರೀಕ್ಷೆಗಳಿಗೆ ಒಳಗಾಗಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ತಂಡದ ಆಡಳಿತ ಮತ್ತು ರಾಷ್ಟ್ರೀಯ ಆಯ್ಕೆ ಸಮಿತಿಯು ಪ್ರಸಿದ್ಧ್ ಟೆಸ್ಟ್ ಕ್ರಿಕೆಟ್‌ಗೆ ಸಂಪೂರ್ಣವಾಗಿ ಫಿಟ್ ಆಗಿರಬೇಕು ಎಂದು ನಂಬುತ್ತದೆ. ಅಲ್ಲಿ ಅವರು ಏಕದಿನ ಪಂದ್ಯಗಳಿಗಿಂತ ಹೆಚ್ಚು ಅಗತ್ಯವಿದೆ ಎಂದು ಮೂಲಗಳು ತಿಳಿಸಿವೆ.

ಪ್ರಸಿದ್ಧ್ ಹೊರಬಿದ್ದ ಬೆನ್ನಲ್ಲೇ ಅವರ ಬದಲಿಗೆ ಯಾರನ್ನ ಆಯ್ಕೆ ಮಾಡಲಾಗುತ್ತದೆ ಎಂಬ ಪ್ರಶ್ನೆ ಸಹಜಾಗಿಯೇ ಎದ್ದಿದೆ. ಮೂಲಗಳ ಪ್ರಕಾರ ಆಕಿಬ್ ನಬಿ ಹೆಸರು ಕೇಳಿಬರುತ್ತಿದೆ. ಏಕದಿನ ಸರಣಿಯ ಕೊನೆಯ ಎರಡು ಪಂದ್ಯಗಳಲ್ಲಿ ಆಕಿಬ್, ಟೀಮ್ ಇಂಡಿಯಾದ ಭಾಗವಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದವರಾದ ಆಕಿಬ್ ಇತ್ತೀಚೆಗೆ ನ್ಯೂಜಿಲೆಂಡ್ ಎ ವಿರುದ್ಧದ ಅನಧಿಕೃತ ಟೆಸ್ಟ್‌ನಲ್ಲಿ ಭಾರತ ಎ ಪರ ಆಡಿದ್ದರು. ವಿಶೇಷ ಅಂದರೆ ಅವರು ಮೊದಲ ಪಂದ್ಯದಲ್ಲಿ ಆರು ವಿಕೆಟ್‌ಗಳನ್ನು ಕಬಳಿಸಿ ಮಿಂಚಿದ್ದಾರೆ. ತಮ್ಮ ಪ್ರತಿ ಇನ್ನಿಂಗ್ಸ್‌ನಲ್ಲೂ ಮೂರು ವಿಕೆಟ್‌ಗಳನ್ನು ಕಬಳಿಸಿದ್ದು, ಅವರಿಗೇ ತಂಡದಲ್ಲಿ ಸ್ಥಾನ ಸಿಗುವ ನಿರೀಕ್ಷೆ ಇದೆ.

ಇನ್ನು ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ಈಗಾಗಲೇ ಟಿ20 ಸರಣಿಯನ್ನು ವಶಕ್ಕೆ ಪಡೆದಿದೆ. ಇಲ್ಲಿಯವರೆಗೆ ಮೂರು ಪಂದ್ಯಗಳು ನಡೆದಿದ್ದು, ಇನ್ನೂ ಎರಡೂ ಪಂದ್ಯಗಳು ಭಾಕಿ ಇವೆ. ಟಿ20 ಸರಣಿ ಮುಗಿದ ಬೆನ್ನಲ್ಲೇ ಏಕದಿನ ಪಂದ್ಯಗಳು ನಡೆಯಲಿವೆ. ಅದಾದ ಬಳಿಕ ಟೆಸ್ಟ್ ಮ್ಯಾಚ್ ನಡೆಯಲಿವೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

123 ವರ್ಷಗಳ ದಾಖಲೆ ಮುರಿದ ಮಿಜೋರಾಂ ಬ್ಯಾಟರ್ ಚಿನ್ಮಯ್ ಸುತಾರ್! ಆಸ್ಟ್ರೇಲಿಯಾ ದಿಗ್ಗಜನ ದಾಖಲೆ ಪುಡಿಪುಡಿ
ಆಫೀಸ್‌ನಲ್ಲಿ ಕ್ರಿಕೆಟ್ ನೋಡುತ್ತಿದ್ದಾಗಲೇ ಬಾಸ್ ಎಂಟ್ರಿ! ಉದ್ಯೋಗಿಗಳು ತಪ್ಪಿಸಿಕೊಳ್ಳಲು ಮಾಡಿದ್ದೇನು? ವಿಡಿಯೋ ವೈರಲ್