ಹಾರ್ದಿಕ್ ಪಾಂಡ್ಯ ಚಂದ್ರಲೋಕದಿಂದ ಬಂದಿದ್ದಾ? ಟೀಂ ಇಂಡಿಯಾ ಆಲ್ರೌಂಡರ್ ಮೇಲೆ ಮಾಜಿ ವೇಗಿ ಸಿಡಿಮಿಡಿ

By Kannadaprabha News  |  First Published Mar 16, 2024, 12:22 PM IST

ರಾಷ್ಟ್ರೀಯ ತಂಡದಿಂದ ಹೊರಗುಳಿದ ಹೊರತಾಗಿಯೂ ದೇಸಿ ಕ್ರಿಕೆಟ್‌ನಲ್ಲಿ ಆಡದ ಕಾರಣಕ್ಕೆ ಶ್ರೇಯಸ್‌, ಇಶಾನ್‌ರನ್ನು ಬಿಸಿಸಿಐ ಕೇಂದ್ರೀಯ ಗುತ್ತಿಗೆ ಪಟ್ಟಿಯಿಂದ ಕೈ ಬಿಟ್ಟಿತ್ತು. ಆದರೆ ನವೆಂಬರ್‌ನಲ್ಲಿ ಏಕದಿನ ವಿಶ್ವಕಪ್‌ ವೇಳೆ ಗಾಯಗೊಂಡಿದ್ದ ಹಾರ್ದಿಕ್‌ ಆ ಬಳಿಕ ರಾಷ್ಟ್ರೀಯ, ರಾಜ್ಯ ತಂಡದ ಪರ ಆಡದಿದ್ದರೂ ಗುತ್ತಿಗೆ ಪಟ್ಟಿಯಲ್ಲಿ ‘ಎ’ ದರ್ಜೆಯಲ್ಲಿ ಸ್ಥಾನ ಪಡೆದಿದ್ದರು.


ನವದೆಹಲಿ(ಮಾ.16): ದೇಸಿ ಕ್ರಿಕೆಟ್‌ ಆಡದ್ದಕ್ಕೆ ಇಶಾನ್‌ ಕಿಶನ್‌, ಶ್ರೇಯಸ್‌ ಅಯ್ಯರ್‌ರನ್ನು ಬಿಸಿಸಿಐ ಕೇಂದ್ರೀಯ ಗುತ್ತಿಗೆ ಪಟ್ಟಿಯಿಂದ ಹೊರಗಿಟ್ಟರೂ ಹಾರ್ದಿಕ್‌ ಪಾಂಡ್ಯರನ್ನು ಸೇರಿಸಿಕೊಂಡಿದ್ದಕ್ಕೆ ಭಾರತದ ಮಾಜಿ ವೇಗಿ ಪ್ರವೀಣ್‌ ಕುಮಾರ್‌ ಟೀಕೆ ವ್ಯಕ್ತಪಡಿಸಿದ್ದು, ಹಾರ್ದಿಕ್‌ ಚಂದ್ರಲೋಕದಿಂದ ಇಳಿದು ಬಂದವರೇ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿರುವ ಪ್ರವೀಣ್‌ ಕುಮಾರ್, ‘ಹಾರ್ದಿಕ್ ಪಾಂಡ್ಯ‌ ದೇಸಿ ಕ್ರಿಕೆಟ್‌ ಆಡದಿದ್ದರೂ ಗುತ್ತಿಗೆ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಅವರಿಗೆ ಬೇರೆ ನಿಯಮ ಇದೆಯೇ? ಆಡಲೇಬೇಕೆಂದು ಹಾರ್ದಿಕ್‌ಗೆ ಬಿಸಿಸಿಐ ಸೂಚಿಸಬೇಕಿತ್ತು. ಕೇವಲ ದೇಸಿ ಟಿ20 ಲೀಗ್‌ಗಳಲ್ಲಿ ಆಡಿದರೆ ಸಾಕೆ? ಆಡುವುದಿದ್ದರೆ ಎಲ್ಲಾ ಮೂರು ಮಾದರಿಯಲ್ಲೂ ಆಡಲಿ. ದೇಶ, ರಾಜ್ಯದ ಪರ ಆಡದೆ ನೇರವಾಗಿ ಐಪಿಎಲ್‌ನಲ್ಲಿ ಆಡುತ್ತಾರೆ. ಈಗ ಎಲ್ಲರೂ ಐಪಿಎಲ್‌ಗೆ ಹೆಚ್ಚಿನನ ಆದ್ಯತೆ ಕೊಡುತ್ತಿದ್ದಾರೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Latest Videos

undefined

ರಾಷ್ಟ್ರೀಯ ತಂಡದಿಂದ ಹೊರಗುಳಿದ ಹೊರತಾಗಿಯೂ ದೇಸಿ ಕ್ರಿಕೆಟ್‌ನಲ್ಲಿ ಆಡದ ಕಾರಣಕ್ಕೆ ಶ್ರೇಯಸ್‌, ಇಶಾನ್‌ರನ್ನು ಬಿಸಿಸಿಐ ಕೇಂದ್ರೀಯ ಗುತ್ತಿಗೆ ಪಟ್ಟಿಯಿಂದ ಕೈ ಬಿಟ್ಟಿತ್ತು. ಆದರೆ ನವೆಂಬರ್‌ನಲ್ಲಿ ಏಕದಿನ ವಿಶ್ವಕಪ್‌ ವೇಳೆ ಗಾಯಗೊಂಡಿದ್ದ ಹಾರ್ದಿಕ್‌ ಆ ಬಳಿಕ ರಾಷ್ಟ್ರೀಯ, ರಾಜ್ಯ ತಂಡದ ಪರ ಆಡದಿದ್ದರೂ ಗುತ್ತಿಗೆ ಪಟ್ಟಿಯಲ್ಲಿ ‘ಎ’ ದರ್ಜೆಯಲ್ಲಿ ಸ್ಥಾನ ಪಡೆದಿದ್ದರು.

ಹಾರ್ದಿಕ್‌ಗೆ ‘ಎ’ ದರ್ಜೆ ಗುತ್ತಿಗೆ ನೀಡಿದ್ದಕ್ಕೆ ಇರ್ಫಾನ್‌ ಪಠಾಣ್‌ ಆಕ್ಷೇಪ

2018ರಿಂದ ಟೆಸ್ಟ್‌ ಕ್ರಿಕೆಟ್‌ ಆಡದ ಹಾರ್ದಿಕ್‌ ಪಾಂಡ್ಯಗೆ ಬಿಸಿಸಿಐ ‘ಎ’ ದರ್ಜೆ ಗುತ್ತಿಗೆ ನೀಡಿದ್ದಕ್ಕೆ ಮಾಜಿ ಕ್ರಿಕೆಟಿಗ ಇರ್ಫಾನ್‌ ಪಠಾಣ್‌ ಆಕ್ಷೇಪ ವ್ಯಕ್ತಪಡಿಸಿದ್ದರು. ಟೆಸ್ಟ್‌ ಸೇರಿದಂತೆ ಪ್ರಥಮ ದರ್ಜೆ, ದೇಸಿ ಕ್ರಿಕೆಟ್‌ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು ಎಂದು ಬಿಸಿಸಿಐ ಸೂಚಿಸಿದೆ. ಆದರೆ ಹಾರ್ದಿಕ್‌ ಟೆಸ್ಟ್‌ ಹಾಗೂ ದೇಸಿ ಪಂದ್ಯಗಳಲ್ಲಿ ಆಡದೆ ಬಹಳ ಸಮಯ ಆಗಿದೆ. ಆದರೂ ಅವರಿಗೆ ಮನ್ನಣೆ ನೀಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದರು. 

ಅಲ್ಲದೇ, ಎಲ್ಲರಿಗೂ ಒಂದೇ ನಿಯಮ ಅಳವಡಿಕೆಯಾಗದಿದ್ದರೆ ಬಿಸಿಸಿಐಗೆ ತನ್ನ ಉದ್ದೇಶಿತ ಫಲಿತಾಂಶ ಸಿಗುವುದಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ. ಇನ್ನು ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್‌ ಸಹ ಬಿಸಿಸಿಐ ಗುತ್ತಿಗೆ ಬಗ್ಗೆ ಪ್ರತಿಕ್ರಿಯಿಸಿದ್ದು, ‘ರೋಹಿತ್‌, ಕೊಹ್ಲಿ ಕೂಡ ಬಿಡುವಿನ ಸಮಯದಲ್ಲಿ ದೇಸಿ ಕ್ರಿಕೆಟ್‌ ಆಡಬೇಕು’ ಎಂದು ಒತ್ತಾಯಿಸಿದ್ದರು.
 

click me!