2ನೇ ದಿನ ಕ್ಯಾಚ್ ಕೈ ಚೆಲ್ಲಿದ ಶಾ; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌..!

Suvarna News   | Asianet News
Published : Dec 18, 2020, 03:03 PM IST
2ನೇ ದಿನ ಕ್ಯಾಚ್ ಕೈ ಚೆಲ್ಲಿದ ಶಾ; ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌..!

ಸಾರಾಂಶ

ಆಸ್ಟ್ರೇಲಿಯಾ ವಿರುದ್ದದ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಕ್ಯಾಚ್‌ ಕೈಚೆಲ್ಲಿ ಪೃಥ್ವಿ ಶಾ ಸಾಕಷ್ಟು ಟೀಕೆಗೆ ಗುರಿಯಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಅಡಿಲೇಡ್‌(ಡಿ.18): ಟೀಂ ಇಂಡಿಯಾ ಯುವ ಬ್ಯಾಟ್ಸ್‌ಮನ್ ಪೃಥ್ವಿ ಶಾ ಪಾಲಿಗೆ ಈಗೀಗ ಹಗ್ಗ ಕೂಡಾ ಹಾವಿನಂತೆ ಭಾಸವಾಗುತ್ತಿದೆ. ಮೊದಲೇ ಕಳಪೆ ಫಾರ್ಮ್‌ನಿಂದ ಬಳಲಿ ಬೆಂಡಾಗಿ ಹೋಗಿರುವ ಪೃಥ್ವಿ  ಕ್ಷೇತ್ರ ರಕ್ಷಣೆಯ ವೇಳೆಯೂ ಕಳಪೆ ಪ್ರದರ್ಶನ ತೋರುವುದರ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದಾರೆ.

ಹೌದು, ಟೀಂ ಇಂಡಿಯಾ ಪರ ಮೊದಲ ಇನಿಂಗ್ಸ್‌ನಲ್ಲಿ ಕೇವಲ ಎರಡು ಎಸೆತಗಳನ್ನು ಎದುರಿಸಿ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದ್ದ ಪೃಥ್ವಿ ಶಾ, ಎರಡನೇ ದಿನದಾಟದಲ್ಲಿ ಕೈಗೆ ಬಂದ ಕ್ಯಾಚ್ ಕೈಚೆಲ್ಲಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಜಸ್ಪ್ರೀತ್ ಬುಮ್ರಾ ಬೌಲಿಂಗ್‌ನಲ್ಲಿ ಮಾರ್ನಸ್ ಲಬುಶೇನ್ ನೀಡಿದ್ದ ಸುಲಭ ಕ್ಯಾಚ್ ಕೈಚೆಲ್ಲಿ ನಿರಾಸೆ ಅನುಭವಿಸಿದ್ದಾರೆ.

ಪಿಂಕ್ ಬಾಲ್ ಟೆಸ್ಟ್: ಅಶ್ವಿನ್ ಝಲಕ್, ಸಂಕಷ್ಟದಲ್ಲಿ ಅಸೀಸ್‌

ಮೊದಲ ಇನಿಂಗ್ಸ್‌ನಲ್ಲಿ ಕೇವಲ 244 ರನ್ ಬಾರಿಸಿ ಆಲೌಟ್ ಆಗಿರುವ ಟೀಂ ಇಂಡಿಯಾಗೆ ಲಬುಶೇನ್ ವಿಕೆಟ್‌ ಮಹತ್ವದ್ದಾಗಿತ್ತು. ಆದರೆ ಪೃಥ್ವಿ ಶಾ ಕ್ಯಾಚ್ ಕೈಚೆಲ್ಲಿದ್ದಕ್ಕೆ ಟೀಂ ಇಂಡಿಯಾ ಕ್ರಿಕೆಟ್‌ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇವತ್ತು 10/10 ಎಂದ ಮಾಸ್ಟರ್ ಬ್ಲಾಸ್ಟರ್! ಸಚಿನ್‌ ತೆಂಡೂಲ್ಕರ್‌ಗೆ ಅಪರೂಪದ ಗಿಫ್ಟ್ ಕೊಟ್ಟ ಮೆಸ್ಸಿ!
ನಾನು ಫಾರ್ಮ್ ಕಳೆದುಕೊಂಡಿಲ್ಲ, ಆದ್ರೆ..! 3ನೇ ಟಿ20 ಪಂದ್ಯದ ಗೆಲುವಿನ ಬೆನ್ನಲ್ಲೇ ಸೂರ್ಯ ಅಚ್ಚರಿ ಹೇಳಿಕೆ!