ಪೃಥ್ವಿ ಶಾ-ಧವನ್ ಅಬ್ಬರಕ್ಕೆ KKR ಧೂಳೀಪಟ; ಡೆಲ್ಲಿ ತಂಡಕ್ಕೆ 7 ವಿಕೆಟ್ ಗೆಲುವು!

Published : Apr 29, 2021, 10:56 PM ISTUpdated : Apr 29, 2021, 10:59 PM IST
ಪೃಥ್ವಿ ಶಾ-ಧವನ್ ಅಬ್ಬರಕ್ಕೆ KKR ಧೂಳೀಪಟ; ಡೆಲ್ಲಿ ತಂಡಕ್ಕೆ 7 ವಿಕೆಟ್ ಗೆಲುವು!

ಸಾರಾಂಶ

ಆರಂಭಿಕರಾದ ಪೃಥ್ವಿ ಶಾ ಹಾಗೂ ಶಿಖರ್ ಧವನ್ ಅತ್ಯುತ್ತಮ ಪ್ರದರ್ಶನಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಸುಲಭವಾಗಿ ಗುರಿ ತಲುಪಿದೆ. ಈ ಗೆಲುವಿನ ಮೂಲಕ ಅಂಕಪಟ್ಟಿಯಲ್ಲೂ ಬಡ್ತಿ ಪಡೆದಿದೆ.

ಅಹಮ್ಮದಾಬಾದ್(ಏ.29): ಕೋಲ್ಕತಾ ನೈಟ್ ರೈಡರ್ಸ್ ನೀಡಿದ ಸ್ಪರ್ಧಾತ್ಮಕ ಟಾರ್ಗೆಟನ್ನು ಡೆಲ್ಲಿ ಕ್ಯಾಪಿಟಲ್ಸ್ ಯಾವುದೇ ಆತಂಕ ಇಲ್ಲದೆ ಗುರಿ ತಲುಪಿದೆ. ಪೃಥ್ವಿ ಶಾ ಹಾಗೂ ಶಿಖರ್ ಅದ್ಭುತ ಆಟದಿಂದ ಡೆಲ್ಲಿ ಕ್ಯಾಪಿಟಲ್ಸ್ 7 ವಿಕೆಟ್ ಭರ್ಜರಿ ಗೆಲುವು ದಾಖಲಿಸಿದೆ.

ಪೃಥ್ವಿ ಶಾ ಹಾಗೂ ಧವನ್ ಉತ್ತಮ ಆರಂಭ ನೀಡಿದರು. ಸ್ಫೋಟಕ ಬ್ಯಾಟಿಂಗ್ ಪ್ರದರ್ಶ ನೀಡಿದ ಶಾ ಹಾಫ್ ಸೆಂಚುರಿ ಸಿಡಿಸಿದರು. ಇತ್ತ ಧವನ್ ಕೂಡ ಉತ್ತಮ ಸಾಥ್ ನೀಡಿದರು. ಧವನ್ 46 ರನ್ ಸಿಡಿಸಿ ಔಟಾದರು. ನಾಯಕ ರಿಷಬ್ ಪಂತ್ 16 ರನ್ ಸಿಡಿಸಿ ಔಟಾದರು.

ಹೋರಾಟ ಮುಂದುವರಿಸಿದ ಪೃಥ್ವಿ ಶಾ 41 ಎಸೆತದಲ್ಲಿ 82 ರನ್ ಸಿಡಿಸಿ ಔಟಾದರು.  ಅಷ್ಟರಲ್ಲೇ ಡೆಲ್ಲಿ ಗೆಲುವಿನ ಹಾದಿ ಸುಗಮವಾಯಿತು. ಮಾರ್ಕಸ್ ಸ್ಟೊಯ್ನಿಸ್ ಅಜೇಯ 6 ರನ್ ಸಿಡಿಸಿದರು. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್  16.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಸಿಸಿಗೆ ಬಿಗ್ ಶಾಕ್ ಕೊಟ್ಟ ಮುಕೇಶ್ ಅಂಬಾನಿ ನೇತೃತ್ವದ ಜಿಯೋ ಹಾಟ್‌ಸ್ಟಾರ್!
ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಕದನ; ಭಾರತಕ್ಕಿದೆ ಬಿಗ್ ಚಾಲೆಂಜ್!