ಪುಲ್ವಾಮಾ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಟೀಂ ಇಂಡಿಯಾ ಕ್ರಿಕೆಟರ್ಸ್!

Published : Feb 14, 2021, 06:26 PM IST
ಪುಲ್ವಾಮಾ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ ಟೀಂ ಇಂಡಿಯಾ ಕ್ರಿಕೆಟರ್ಸ್!

ಸಾರಾಂಶ

ಪುಲ್ವಾಮಾ ದಾಳಿ ನಡೆದು ಇಂದಿಗೆ 2 ವರ್ಷ. ಅದೆಷ್ಟೆ ವರುಷಗಳು ಉರುಳಿದರೂ ಭಾರತೀಯರು ಪುಲ್ವಾಮಾ ದಾಳಿಯನ್ನು ಮರೆಯುವುದಿಲ್ಲ. ಪಾಕ್ ಪ್ರಾಯೋಜಿತ ದಾಳಿಯಲ್ಲಿ 40 ವೀರ CRPF ಯೋಧರು ಹುತಾತ್ಮರಾಗಿದ್ದಾರೆ. ಇದೀಗ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರು ಪುಲ್ವಾಮಾ ಹುತಾತ್ಮರನ್ನು ಸ್ಮರಿಸಿದ್ದಾರೆ.

ಬೆಂಗಳೂರು(ಫೆ.14):  ಪುಲ್ವಾಮಾ ದಾಳಿಯಾಗಿ 2 ವರ್ಷ ಸಂದರೂ ನೋವು ಇನ್ನು ಮಾಸಿಲ್ಲ. ಹಗಲಿರುಳು ದೇಶದ ಕಾಪಾಡಿದ 40 CRPF ವೀರ ಯೋಧರು ಈ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಇದೆ ಫೆಬ್ರವರಿ 14, 2019ರಂದು ಭಯೋತ್ಪಾದಕರು ನಡೆಸಿದ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪುಲ್ವಾಮಾ ಹುತಾತ್ಮರ 2ನೇ ವರ್ಷದ ಈ ಸಂದರ್ಭದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರು ವೀರ ಯೋಧರನ್ನು ಸ್ಮರಿಸಿದ್ದಾರೆ.

ಪುಲ್ವಾಮಾ ಹುತಾತ್ಮರಿಗೆ ನಮನ, ಸೇನೆ ಸೇರಿದ ಸ್ವದೇಶಿ ಅರ್ಜುನ; ಫೆ.14ರ ಟಾಪ್ 10 ಸುದ್ದಿ!.

ಮಾಜಿ ಕ್ರಿಕೆಟಿಗ ವೀರೇಂದ್ರ ಸಹ್ವಾಗ್, ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಸೇರಿದಂತೆ ಹಲವು ಕ್ರಿಕೆಟಿಗರು ಪುಲ್ವಾಮಾ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದ್ದಾರೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರು ಯಾವತ್ತು ಅಜರಾಮಾರ ಎಂದು ಸೆಹ್ವಾಗ್ ಸಾಮಾಜಿಕ ಜಾಲತಾಣದಲ್ಲಿ ಹುತಾತ್ಮ ಯೋಧರ ಫೋಟೋ ಪೋಸ್ಟ್ ಮಾಡಿದ್ದಾರೆ.

ಭಾರತವನ್ನು ಇಟ್ಟಿಗೆ, ಸಿಮೆಂಟ್‌ನಿಂದ ಕಟ್ಟಿಲ್ಲ. ವೀರ ಯೋಧರ ಬಲಿದಾನದಿಂದ ಈ ದೇಶವನ್ನು ಒಗ್ಗೂಡಿಸಿದ್ದಾರೆ ಎಂದು ದೆಹಲಿ ಸಂಸದ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಟ್ವೀಟ್ ಮಾಡಿದ್ದಾರೆ. 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೈಲೆಂಟ್ ಆದ ಸೌತ್ ಆಫ್ರಿಕಾ , 74 ರನ್‌ಗೆ ಆಲೌಟ್ ಮಾಡಿ 101 ರನ್ ಗೆಲುವು ದಾಖಲಿಸಿದ ಭಾರತ
100 ಸಿಕ್ಸರ್ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ, ಸೌತ್ ಆಫ್ರಿಕಾಗೆ 176 ರನ್ ಟಾರ್ಗೆಟ್